ಆಸ್ಟ್ರೇಲಿಯಾ ಸೋಲಿಸಿ ಇತಿಹಾಸ ಬರೆದ ಬಾಂಗ್ಲಾದೇಶ

Date:

ಬಾಂಗ್ಲಾ ದೇಶದ ಪ್ರವಾಸವನ್ನು ಕೈಗೊಂಡಿರುವ ಆಸ್ಟ್ರೇಲಿಯಾ ತಂಡ 5 ಪಂದ್ಯಗಳ ಟಿ ಟ್ವೆಂಟಿ ಸರಣಿಯನ್ನು ಆಡುತ್ತಿದೆ. ಮಂಗಳವಾರದಂದು ಆಸ್ಟ್ರೇಲಿಯಾ ಮತ್ತು ಬಾಂಗ್ಲಾದೇಶದ ನಡುವಿನ 5 ಪಂದ್ಯಗಳ ಟಿ ಟ್ವೆಂಟಿ ಸರಣಿಯ ಮೊದಲನೇ ಪಂದ್ಯ ನಡೆದಿದೆ. ಈ ಪಂದ್ಯದಲ್ಲಿ ಬಾಂಗ್ಲಾದೇಶದ ವಿರುದ್ಧ ಆಸ್ಟ್ರೇಲಿಯ ತಂಡ ಹೀನಾಯವಾಗಿ ಸೋಲುವುದರ ಮೂಲಕ ಸರಣಿಯಲ್ಲಿ ಕಳಪೆ ಆರಂಭವನ್ನು ಪಡೆದುಕೊಂಡಿದೆ.

ಆಸ್ಟ್ರೇಲಿಯಾ ಮತ್ತು ಬಾಂಗ್ಲಾ ದೇಶದ ನಡುವಿನ 5 ಪಂದ್ಯಗಳ ಟ್ವೆಂಟಿ ಸರಣಿಯ ಮೊದಲನೇ ಪಂದ್ಯ ಬಾಂಗ್ಲಾದೇಶದ ಭಾಗದಲ್ಲಿನ ಶೇರ್ ಎ ಬಾಂಗ್ಲಾ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯಿತು. ಈ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡವನ್ನು ಬಾಂಗ್ಲಾದೇಶ ತಂಡ 23 ರನ್‌ಗಳ ಅಂತರದಲ್ಲಿ ಸೋಲಿಸುವುದರ ಮೂಲಕ ಸರಣಿಯಲ್ಲಿ ಶುಭಾರಂಭವನ್ನು ಮಾಡಿದೆ.

ಮೊದಲು ಬ್ಯಾಟಿಂಗ್ ಮಾಡಿ 7 ವಿಕೆಟ್ ನಷ್ಟಕ್ಕೆ 131 ರನ್ ಕಲೆಹಾಕಿದ ಬಾಂಗ್ಲಾದೇಶ ಆಸ್ಟ್ರೇಲಿಯಾಕ್ಕೆ ಗೆಲ್ಲಲು 132 ರನ್ ಗಳ ಸಾಧಾರಣ ಗುರಿಯನ್ನು ನೀಡಿತ್ತು ಆದರೆ ಇಪ್ಪತ್ತು ಓವರ್ ಗಳಲ್ಲಿ 108 ರನ್ ಗಳಿಗೆ ಆಲೌಟ್ ಆಗುವುದರ ಮೂಲಕ ಆಸ್ಟ್ರೇಲಿಯಾ ಗುರಿಯನ್ನು ಮುಟ್ಟುವಲ್ಲಿ ವಿಫಲವಾಯಿತು. ಈ ಮೂಲಕ ಬಾಂಗ್ಲಾದೇಶ ಆಸ್ಟ್ರೇಲಿಯಾ ವಿರುದ್ಧ ಮೊದಲನೇ ಟಿ ಟ್ವೆಂಟಿ ಪಂದ್ಯದಲ್ಲಿ 23 ರನ್ ಗಳ ಜಯ ಸಾಧಿಸುವುದರ ಮೂಲಕ ಇತಿಹಾಸದಲ್ಲಿಯೇ ಇದೇ ಮೊದಲ ಬಾರಿಗೆ ಆಸ್ಟ್ರೇಲಿಯಾ ವಿರುದ್ಧ ಟಿ ಟ್ವೆಂಟಿ ಪಂದ್ಯವನ್ನು ಜಯಿಸಿತು.

Share post:

Subscribe

spot_imgspot_img

Popular

More like this
Related

ವಿಜ್ಞಾನ ಓದಿಯೂ ಮೌಡ್ಯ ನಂಬುತ್ತೀರಿ ಅಂದರೆ ನೀವು ಓದಿದ್ದೇ ದಂಡ ತಾನೇ: ಸಿಎಂ ಸಿದ್ದರಾಮಯ್ಯ ಪ್ರಶ್ನೆ

ವಿಜ್ಞಾನ ಓದಿಯೂ ಮೌಡ್ಯ ನಂಬುತ್ತೀರಿ ಅಂದರೆ ನೀವು ಓದಿದ್ದೇ ದಂಡ ತಾನೇ:...

ಐ ಡ್ರಾಪ್ ಹಾಕಿಕೊಳ್ಳುವಾಗ ಯಾವುದೇ ಕಾರಣಕ್ಕೂ ಈ ತಪ್ಪುಗಳನ್ನು ಮಾಡಬೇಡಿ!

ಐ ಡ್ರಾಪ್ ಹಾಕಿಕೊಳ್ಳುವಾಗ ಯಾವುದೇ ಕಾರಣಕ್ಕೂ ಈ ತಪ್ಪುಗಳನ್ನು ಮಾಡಬೇಡಿ! ಐ ಡ್ರಾಪ್‌,...

ರಾಜ್ಯದ 20 ಕ್ಕೂ ಹೆಚ್ಚು ಜಿಲ್ಲೆಗಳಿಗೆ ಯೆಲ್ಲೂ ಅಲರ್ಟ್​ ಘೋಷಣೆ: ವಾಮಾನ ಇಲಾಖೆ

ರಾಜ್ಯದ 20 ಕ್ಕೂ ಹೆಚ್ಚು ಜಿಲ್ಲೆಗಳಿಗೆ ಯೆಲ್ಲೂ ಅಲರ್ಟ್​ ಘೋಷಣೆ: ವಾಮಾನ...

ರಾಜು ತಾಳಿಕೋಟಿ ಇನ್ನಿಲ್ಲ

ಖ್ಯಾತ ರಂಗ ಕಲಾವಿದ, ನಟ, ರಂಗನಿರ್ದೇಶಕ ರಾಜು ತಾಳಿಕೋಟಿ ಹೃದಯಾಘಾತದಿಂದ ನಿಧನರಾಗಿದ್ದಾರೆ....