ದೇಹ ಜೈಲಿಂದ ಬೇಲ್ ಮೇಲೆ ಹೊರಬಂದ ಡಿಕೆ ಶಿವಕುಮಾರ್ ಅವರಿಗೆ ಕರ್ನಾಟಕದಲ್ಲಿ ಅದ್ಧೂರಿಯಾದ ಸ್ವಾಗತವನ್ನು ಅವರ ಬೆಂಬಲಿಗರು ಹಾಗೂ ಅಭಿಮಾನಿಗಳು ನೀಡಿದ್ದರೂ ನಂತರ ಕೆಲವು ದಿನಗಳ ಹಿಂದೆ ಡಿಕೆಶಿ ಅವರಿಗೆ ಮಧುಮೇಹ, ಅಧಿಕ ರಕ್ತದೊತ್ತಡ ಹಾಗೂ ಜ್ವರದಿಂದ ಬಳಲುತ್ತಿದ್ದ ಅವರು ಇದೀಗ ಚೇತರಿಸಿಕೊಂಡಿದ್ದು, ಜೊತೆಗೆ ಇಂದು ಸಂಜೆ ದೆಹಲಿಗೆ ತೆರಳಬೇಕಿರುವ ಹಿನ್ನೆಲೆಯಲ್ಲಿ ಬೇಗನೆ ಡಿಸ್ಚಾರ್ಜ್ ಮಾಡಿಸಿಕೊಂಡಿದ್ದಾರೆ ಎನ್ನಲಾಗಿದೆ.
ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುತ್ತಲೇ ಡಿ.ಕೆ. ಶಿವಕುಮಾರ್, ಆರ್.ಆರ್. ನಗರದಲ್ಲಿ ನಡೆಯುತ್ತಿರುವ ದೊಡ್ಡಬಳ್ಳಾಪುರ ಶಾಸಕ ವೆಂಕಟರಮಣಪ್ಪನವರ ಪುತ್ರಿಯ ಮದುವೆ ಸಮಾರಂಭಕ್ಕೆ ತೆರಳಿದ್ದಾರೆ.