ಆಸ್ಪತ್ರೆಗೆ ದಾಖಲಾದ ಸಚಿನ್!

Date:

ಟೀಮ್ ಇಂಡಿಯಾದ ಮಾಜಿ ಕ್ರಿಕೆಟಿಗ, ವಿಶ್ವ ಕ್ರಿಕೆಟ್‌ನ ಸರ್ವಶ್ರೇಷ್ಠ ಆಟಗಾರ ಸಚಿನ್ ತೆಂಡೂಲ್ಕರ್‌ಗೆ ಕಳೆದ ಶನಿವಾರ ಕೊರೊನಾ ವೈರಸ್ ಇರುವುದು ದೃಢಪಟ್ಟಿತ್ತು. ಮನೆಯಲ್ಲಿಯೇ ಅವರು ಚಿಕಿತ್ಸೆ ಪಡೆದುಕೊಳ್ಳುತ್ತಿರುವುದಾಗಿ ಅವರು ಮಾಹಿತಿಯನ್ನು ನೀಡಿದ್ದರು. ಆದರೆ ಇಂದು ಟ್ವೀಟ್‌ ಮೂಲಕ ಸಚಿನ್ ತೆಂಡೂಲ್ಕರ್ ತಾನು ಆಸ್ಪತ್ರೆಗೆ ದಾಖಲಾಗಿರುವುದಾಗಿ ಮಾಹಿತಿ ನೀಡಿದ್ದಾರೆ.
ವೈದ್ಯಕೀಯ ಸಿಬ್ಬಂದಿಗಳ ಸಲಹೆಯ ಮೇರೆ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದುಜೊಳ್ಳುವುದಾಗಿ ಸಚಿನ್ ತೆಂಡೂಲ್ಕರ್ ಟ್ವೀಟ್‌ನಲ್ಲಿ ಮಾಹಿತಿಯನ್ನು ನೀಡಿದ್ದಾರೆ. ಇದರ ಜೊತೆಗೆ ಶೀಘ್ರದಲ್ಲಿಯೇ ಮನೆಗೆ ವಾಪಾಸಾಗುವ ವಿಶ್ವಾಸವನ್ನು ಸಚಿನ್ ವ್ಯಕ್ತಪಡಿಸಿದ್ದಾರೆ.
ಆದರೆ ಈ ಟ್ವೀಟ್‌ನಲ್ಲಿ ಸಚಿನ್ ಆರೋಗ್ಯದಲ್ಲಿ ಹೆಚ್ಚಿನ ಏರುಪೇರುಗಳೇನಾದರೂ ಆಗಿದೆಯೇ ಎಂಬ ಬಗ್ಗೆ ಯಾವುದೇ ಮಾಹಿತಿಯನ್ನು ಹಂಚಿಕೊಂಡಿಲ್ಲ. ಮೊದಲಿಗೆ ಮಾಡಿದ ಟ್ವಿಟ್‌ನಲ್ಲಿ ಸಣ್ಣ ಪ್ರಮಾಣದ ಕೊರೊನಾ ಲಕ್ಷಣಗಳು ಮಾತ್ರವೇ ಇದೆ. ಹಾಗಾಗಿ ಮನೆಯಲ್ಲಿಯೇ ಚಿಕಿತ್ಸೆಯನ್ನು ಪಡೆಯುವುದಾಗಿ ಹೇಳಿಕೊಂಡಿದ್ದರು.
“ನಿಮ್ಮೆಲ್ಲರ ಹಾರೈಕೆ ಹಾಗೂ ಪ್ರಾರ್ಥನೆಗಳಿಗೆ ಧನ್ಯವಾದಗಳು. ವೈದ್ಯಕೀಯ ಸಿಬ್ಬಂದಿಗಳ ಸಲಹೆಯಂತೆ ಮುನನ್ಎಚ್ಚರಿಕಾ ಕ್ರಮವಾಗಿ ನನ್ನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಕೆಲವೇ ದಿನಗಳಲ್ಲಿ ನಾನು ಮನೆಗೆ ಮರಳುವ ವಿಶ್ವಾಸದಲ್ಲಿದ್ದೇನೆ. ಎಲ್ಲರೂ ಹುಶಾರಾಗಿರಿ ಎಚ್ಚರದಿಂದಿರಿ” ಎಂದು ಟ್ವೀಟ್‌ ಮಾಡುವ ಮೂಲಕ ಮಾಹಿತಿಯನ್ನು ಹಂಚಿಕೊಂಡಿದ್ದಾರೆ. ಇದೇ ಟ್ವೀಟ್‌ನಲ್ಲಿ ವಿಶ್ವಕಪ್ ಗೆಲುವಿನ 10ನೇ ವರ್ಷದ ಶುಭಾಶಯಗಳನ್ನು ತಂಡದ ಸದಸ್ಯರಿಗೆ ತಿಳಿಸಿದ್ದಾರೆ.
ಸಚಿನ್ ತೆಂಡೂಲ್ಕರ್ ಇತ್ತೀಚೆಗೆ ಅಂತ್ಯವಾದ ರೋಡ್ ಸೇಫ್ಟಿ ವರ್ಲ್ಡ್ ಸೀರೀಸ್‌ನಲ್ಲಿ ಪಾಲ್ಗೊಂಡಿದ್ದರು. ಆ ಟೂರ್ನಿಯಲ್ಲಿ ಭಾರತ ಚಾಂಪಿಯನ್ ಆಗಿತ್ತು. ಆದರೆ ಟೂರ್ನಿ ಮುಕ್ತಾಯವಾದ ಕೆಲ ದಿನಗಳಲ್ಲಿ ಸಚಿನ್ ತೆಂಡೂಲ್ಕರ್ ಕೊರೊನಾ ವೈರಸ್‌ಗೆ ತುತ್ತಾಗಿರುವುದು ಬೆಳಕಿಗೆ ಬಂದಿತ್ತು. ಸಚಿನ್ ತೆಂಡೂಲ್ಕರ್ ಬಳಿಕ ಈ ಟೂರ್ನಿಯಲ್ಲಿ ಇಂಡಿಯಾ ಲೆಜೆಂಡ್ಸ್ ತಂಡವನ್ನು ಪ್ರತಿನಿಧಿಸಿದ್ದ ಇತರ ಆಟಗಾರರಾದ ಯೂಸುಫ್ ಪಠಾಣ್, ಎಸ್ ಬದ್ರಿನಾಥ್ ಹಾಗೂ ಇರ್ಫಾನ್ ಪಠಾಣ್‌ಗು ಕೂಡ ಕೊರೊನಾ ವೈರಸ್ ಇರುವುದು ಪತ್ತೆಯಾಗಿತ್ತು.

Share post:

Subscribe

spot_imgspot_img

Popular

More like this
Related

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು ಕಳ್ಳತನ

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು...

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ – ಆರ್. ಅಶೋಕ್ ಆಗ್ರಹ

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ –...

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ ಬೆಂಗಳೂರು:...