ಟೀಮ್ ಇಂಡಿಯಾ ಮಾಜಿ ಕ್ರಿಕೆಟಿಗ ದಿಗ್ಗಜ ಆಟಗಾರ ಸಚಿನ್ ತೆಂಡೂಲ್ಕರ್ ಕೊರೊನಾ ವೈರಸ್‌ಗೆ ತುತ್ತಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ಈಗ ಅವರು ತಮ್ಮ ಮನೆಗೆ ಮರಳಿದ್ದಾರೆ. ಈ ಬಗ್ಗೆ ಸ್ವತಃ ಸಚಿನ್ ತೆಂಡೂಲ್ಕರ್ ಟ್ವಿಟ್ಟರ್‌ನಲ್ಲಿ ಮಾಹಿತಿಯನ್ನು ಹಂಚಿಕೊಂಡಿದ್ದಾರೆ. ಮನೆಯಲ್ಲಿಯೇ ಪ್ರತ್ಯೇಕವಾಗಿರುವುದಾಗಿ ಸಚಿನ್ ಟ್ವೀಟ್‌ನಲ್ಲಿ ಹೇಳಿಕೊಂಡಿದ್ದಾರೆ.
ಮಾರ್ಚ್ 27ರಂದು ಸಚಿನ್ ತೆಂಡೂಲ್ಕರ್ ಕೊರೊನಾ ವೈರಸ್‌ಗೆ ತುತ್ತಾಗಿರುವುದು ಬೆಳಕಿಗೆ ಬಂದಿತ್ತು. ಆರು ದಿನಗಳ ಬಳಿಕ ಕೊರೊನಾ ವೈರಸ್‌ನ ಲಕ್ಷಣಗಳು ಬೆಳವಣಿಗೆ ಕಂಡ ಹಿನ್ನೆಲೆಯಲ್ಲಿ ಸಚಿನ್ ತೆಂಡೂಲ್ಕರ್ ಆಸ್ಪತ್ರೆಗೆ ದಾಖಲಾಗಿದ್ದರು.
ಈಗ ಸಚಿನ್ ತೆಂಡೂಲ್ಕರ್ ಟ್ವಿಟ್ಟರ್‌ನಲ್ಲಿ ಸಂದೇಶವನ್ನು ಹಂಚಿಕೊಂಡಿದ್ದು ತನಗಾಗಿ ಪ್ರಾರ್ಥಿಸಿದ ಅಭಿಮಾನಿಗಳು ಹಾಗೂ ಹಿತೈಷಿಗಳಿಗೆ ಧನ್ಯವಾದಗಳನ್ನು ತಿಳಿಸಿದ್ದಾರೆ. ಇದರ ಜೊತೆಗೆ ಆಸ್ಪತ್ರೆಯಲ್ಲಿ ಚಿಕಿತ್ಸೆಯನ್ನು ನೀಡಿದ ವೈದ್ಯಕೀಯ ಸಿಬ್ಬಂದಿಗಳು ಹಾಗೂ ವೈದ್ಯರಿಗೆ ಧನ್ಯವಾದ ಹೇಳಿದ್ದಾರೆ.







