ಬೆಂಗಳೂರು: ಆಹಾರ ಧಾನ್ಯಗಳ ಬೆಲೆ ನಿಗದಿ ಕೇಂದ್ರ ಸರ್ಕಾರದ ವ್ಯಾಪ್ತಿಗೆ ಬರುತ್ತದೆ. ಕಳೆದ ಸಾಲಿನಲ್ಲಿ ಆಹಾರ ಧಾನ್ಯಗಳ ಮಾರಾಟ ದರ ಶೇ.40 ರಷ್ಟು ಏರಿಕೆಯಾಗಿದೆ. ಬಿತ್ತನೆ ಬೀಜ ಖರೀದಿ ಮೇಲೂ ಇದರ ಪರಿಣಾಮ ಬೀರಿದೆ. ಹಾಗಿದ್ದೂ ನಾವು ಬಿತ್ತನೆ ಬೀಜಕ್ಕೆ ಶೇ.30ರಷ್ಟು ದರ ಏರಿಸಿದ್ದೇವೆ ಎಂದು ಕೃಷಿ ಸಚಿವ ಚಲುವರಾಯಸ್ವಾಮಿ ಸ್ಪಷ್ಟೀಕರಣ ನೀಡಿದ್ದಾರೆ. ಈ ಸಂಬಂಧ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು,
ಬೆಲೆ ಹೆಚ್ಚಳಕ್ಕೆ ಕೆಲವು ಕಾರಣಗಳಿವೆ. 2023-24ನೇ ಸಾಲಿನಲ್ಲಿ ರಾಜ್ಯದಲ್ಲಿ ಹಿಂದೆಂದೂ ಕಂಡರಿಯದ ಬರ ನಮ್ಮನ್ನು ಕಾಡಿದೆ. 46 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ನಷ್ಟವಾದರೂ ಪ್ರಸ್ತುತ ಸಾಲಿಗೆ ಬಿತ್ತನೆ ಬೀಜಕ್ಕೆ ಕೊರತೆಯಾಗದ ರೀತಿ ಮುಂಜಾಗ್ರತೆ ವಹಿಸಿ ಈಗಾಗಲೇ ಪೂರೈಕೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ. ಆಹಾರ ಧಾನ್ಯಗಳ ಬೆಲೆ ನಿಗದಿ ಕೇಂದ್ರ ಸರ್ಕಾರದ ವ್ಯಾಪ್ತಿಗೆ ಬರುತ್ತದೆ.
ಕಳೆದ ಸಾಲಿನಲ್ಲಿ ಆಹಾರ ಧಾನ್ಯಗಳ ಮಾರಾಟ ದರ ಶೇ.40 ರಷ್ಟು ಏರಿಕೆಯಾಗಿದೆ. ಬಿತ್ತನೆ ಬೀಜ ಖರೀದಿ ಮೇಲೂ ಇದರ ಪರಿಣಾಮ ಬೀರಿದೆ. ಹಾಗಿದ್ದೂ ನಾವು ಬಿತ್ತನೆ ಬೀಜಕ್ಕೆ ಶೇ.30ರಷ್ಟು ದರ ಏರಿಸಿದ್ದೇವೆ. ಖರೀದಿ, ಗುಣಮಟ್ಟ ನಿಯಂತ್ರಣ, ಸಂಸ್ಕರಣೆ, ಪ್ರಯೋಗಾಲಯದಲ್ಲಿ ಪರೀಕ್ಷೆ, ಗ್ರೇಡಿಂಗ್, ದಾಸ್ತಾನು ಮಾಡುವುದು, ಸಾಗಣೆ, ಬೀಜ ಪ್ರಮಾಣೀಕರಣ, ಕಾರ್ಮಿಕರ ಕೂಲಿ ಹಣ ಎಲ್ಲಾ ಸೇರಿಸಿ ಬಿತ್ತನೆ ಬೀಜದ ಮಾರಾಟ ದರ ನಿಗದಿಯಾಗುತ್ತದೆ ಎಂದಿದ್ದಾರೆ.






