ಆ ಮಹಿಳೆ ಬಂದು ಹೇಳಿಕೆ ಕೊಡಬೇಕಾಗಿತ್ತು ಇದುವರೆಗೆ ಕೊಟ್ಟಿಲ್ಲ.

admin
1 Min Read

ಹಾವೇರಿಯಲ್ಲಿ ಗೃಹ ಸಚಿವ ಬಸವರಾಜ ಬೊಮ್ಮಾಯಿ.
ಆರು ಸಚಿವರು ಕೋರ್ಟ್ ಮೊರೆ ಹೋಗಿರೋ ವಿಚಾರ
ರಮೇಶ ಜಾರಕಿಹೊಳಿ ಪ್ರಕರಣ ಆದ್ಮೇಲೆ ಬಹಳ‌ಷ್ಟು ಊಹಾಪೋಹಗಳು, ಸಂಶಯಾಸ್ಪದ ಷಡ್ಯಂತ್ರಗಳು, ಪೂರ್ವಭಾವಿ ಹನಿಟ್ರ್ಯಾಪ ಸೇರಿದಂತೆ ಬಹಳಷ್ಟು ವಿಚಾರಗಳು ಬಂದಿವೆ.
ಹೀಗಾಗಿ ಕೆಲವು ಸಚಿವರು, ಶಾಸಕರಾಗಲಿ ಅವರ ತೇಜೋವಧೆ ಆಗೋ ಸಾಧ್ಯತೆಗಳು ಹೆಚ್ಚಿವೆ. ತೇಜೋವಧೆ, ವಯಕ್ತಿಕ ಜೀವನದಲ್ಲಿ ಹಸ್ತಕ್ಷೇಪ ಮಾಡುವಂಥದ್ದು ಮತ್ತು ರಾಜಕೀಯವಾಗಿ ಅಸ್ಥಿರತೆಯನ್ನ ರಾಜ್ಯದಲ್ಲಿ ಮಾಡಬೇಕು ಅನ್ನೋ ಹಿನ್ನೆಲೆ ಕಂಡು ಕೆಲವರು ನ್ಯಾಯಾಂಗದ ರಕ್ಷಣೆ ಕೋರಿದ್ದಾರೆ. ಅಲ್ದೆ ರಮೇಶ ಜಾರಕಿಹೊಳಿ ಮೇಲೆ ದೂರು ಬಂದಿದೆ ಅದರ ಆಧಾರದ‌ ಮೇಲೆ ತನಿಖೆ ನಡಿತಿದೆ.


ದೂರು ಕೊಟ್ಟವರು ಏನು ಮಾಹಿತಿ ಕೊಡಬೇಕಾಗಿತ್ತು, ಆ ಮಹಿಳೆ ಬಂದು ಹೇಳಿಕೆ ಕೊಡಬೇಕಾಗಿತ್ತು ಇದುವರೆಗೆ ಕೊಟ್ಟಿಲ್ಲ.
ಇಂಥಾ ಕೇಸ್ನಲ್ಲಿ ಮುಂದೆ ಬಂದು ದೂರು ಕೊಡದಿರೋದು, ಹೇಳಿಕೆ ಕೊಡದಿರೋದು ಆಗದಿರೋ ಸಂದರ್ಭದಲ್ಲಿ ಷಡ್ಯಂತ್ರ ಸೇರಿದಂತೆ ಎಲ್ಲ ಸಂಶಯಗಳಿಗೆ ಕಾರಣವಾಗಿದೆ ಹೀಗಾಗಿ ಕೆಲವರು ಕಾನೂನಿನ ರಕ್ಷಣೆ ತೆಗೆದುಕೊಳ್ತಿದ್ದಾರೆ ಪೊಲೀಸರು ಸಹ ಎಲ್ಲ ಆಯಾಮಗಳಲ್ಲಿ ತನಿಖೆ ಮಾಡ್ತೀವಿ.

Share This Article
Leave a Comment