ಇಂಗ್ಲೀಷ್, ಹಿಂದಿ ಭಾಷೆಗಳ ದಾಳಿಯಿಂದ ಕನ್ನಡ‌‌ ಕಾಪಾಡಬೇಕು: ಡಿಸಿಎಂ ಡಿ.ಕೆ.ಶಿವಕುಮಾರ್

Date:

ಇಂಗ್ಲೀಷ್, ಹಿಂದಿ ಭಾಷೆಗಳ ದಾಳಿಯಿಂದ ಕನ್ನಡ‌‌ ಕಾಪಾಡಬೇಕು: ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು: ಇಡೀ ನವೆಂಬರ್ ತಿಂಗಳಲ್ಲಿ ಖಾಸಗಿ‌ ಹಾಗೂ ಸರ್ಕಾರಿ ಕಚೇರಿಗಳಲ್ಲಿ ಕಡ್ಡಾಯವಾಗಿ ಕನ್ನಡದ ಧ್ವಜ ಹಾರಿಸುವ ಬಗ್ಗೆ ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಿ ತೀರ್ಮಾನ ಮಾಡಲಾಗುವುದು” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು.

ಕರ್ನಾಟಕ ರಾಜ್ಯೋತ್ಸವದ ಪ್ರಯುಕ್ತ ನಗರದ ಕಂಠೀರವ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಶಾಲಾ ಮಕ್ಕಳ ಪಥಸಂಚಲನದಲ್ಲಿ ವಂದನೆ ಸ್ವೀಕರಿಸಿ ಹಾಗೂ ಇದಕ್ಕೂ ಮೊದಲು ವಿಧಾನಸೌಧದ ಭುವನೇಶ್ವರಿ ಪ್ರತಿಮೆ ಬಳಿ ಮಾಧ್ಯಮಗಳ ಜತೆ ಮಾತನಾಡಿದರು.

“ಕರ್ನಾಟಕ ಕೇವಲ ನಾಡಲ್ಲ, ಸಂಸ್ಕೃತಿಯ ಬೀಡು. ಕನ್ನಡ ಕೇವಲ ನುಡಿಯಲ್ಲ, ನಮ್ಮ ಅಂತರಂಗದ ಮಾತು. ಕಲಿತವರಿಗೆ ಅಮೃತ, ನಡೆದವರಿಗೆ ನೆರಳು, ದಾರಿದೀಪ. ಕನ್ನಡ ಎನ್ನುವುದು ಜೀವನದ ವಿಧಾನ. ಇಂತಹ ಕನ್ನಡವನ್ನು ಇಂಗ್ಲಿಷ್ ಹಾಗೂ ಹಿಂದಿ ಭಾಷೆಯ ದಾಳಿಯಿಂದ ನಾವೆಲ್ಲರೂ ಕಾಪಾಡಿಕೊಳ್ಳಬೇಕು” ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ನಮ್ಮ ಉಸಿರು‌ ಕನ್ನಡ, ನಮ್ಮ ಕಸುವು ಕನ್ನಡ, ನಮ್ಮ ಹೆಸರು ಕನ್ನಡ, ನಮ್ಮ ಕಸುಬು ಕನ್ನಡ, ಕನ್ನಡವಿದು ಕನ್ನಡ, ಬನ್ನಿ ನಮ್ಮ ಸಂಗಡ” ಎಂದು ಗೋಪಾಲಕೃಷ್ಣ ಅಡಿಗರ ಕವನವನ್ನು ವಾಚಿಸಿದರು. ಆದಿಕವಿ ಪಂಪನಿಂದ ಹಿಡಿದು ಬಸವಣ್ಣ, ಅಲ್ಲಮಪ್ರಭು, ಕನಕದಾಸರು, ಪುರಂದರದಾಸರು, ಕುವೆಂಪು,‌ ಬೇಂದ್ರೆ, ಮಾಸ್ತಿ ಹೀಗೆ ಸಾಹಿತ್ಯದ ದೊಡ್ಡ ಪರಂಪರೆಯನ್ನು ನಾವು ಹೊಂದಿದ್ದೇವೆ. ಈ ಎಲ್ಲಾ ಸಾಹಿತ್ಯ ಭಂಡಾರವನ್ನು ಮಕ್ಕಳು ಬಾಚಿಕೊಳ್ಳಬೇಕು” ಎಂದು ಕರೆ ‌ನೀಡಿದರು.

“ಕನ್ನಡಕ್ಕೆ ಸುಮಾರು ಎರಡು ಸಾವಿರ ವರ್ಷಗಳ ಇತಿಹಾಸವಿದೆ. ಈ ನೆಲದಲ್ಲಿ ಏನೋ ವೈಶಿಷ್ಟ್ಯ ಅಡಗಿದೆ. ಇಲ್ಲಿಗೆ ಬಂದವರು ಯಾವುದೇ ಕಾರಣಕ್ಕೂ ಮರಳಿ ಹೋಗುವುದಿಲ್ಲ. ಎಲ್ಲರನ್ನೂ ಒಳಗೊಂಡಿರುವ ನಮ್ಮ ಕರ್ನಾಟಕ ಶಾಂತಿಯಿಂದ ಕೂಡಿದೆ. ಹೊರಗಿನಿಂದ ಬಂದವರು ಸಹ ಊಟ, ವಸತಿ ಗಳಿಸಿಕೊಂಡಿದ್ದಾರೆ. ಇದೇ ನಮ್ಮ ಕನ್ನಡ ತಾಯಿ, ಭೂಮಿಯ ವಿಶೇಷ. ಇಲ್ಲಿ ಇರುವ ಅತ್ಯುತ್ತಮ ವಾತಾವರಣ ದೇಶದ ಯಾವ ಭಾಗದಲ್ಲಿಯೂ ಇಲ್ಲ. ನಮ್ಮ ಸಂಸ್ಕೃತಿ ಹಾಗೂ ನೆಲ,‌‌ ಜಲಕ್ಕೆ ಎಲ್ಲರನ್ನೂ ಆಕರ್ಷಿಸುವ ಗುಣವಿದೆ” ಎಂದರು.

“ಎಲ್ಲಾ ಕನ್ನಡಿಗರನ್ನು ಒಗ್ಗೂಡಿಸಬೇಕು. ಕನ್ನಡಿಗರ ತ್ಯಾಗ, ಬಲಿದಾನ, ಶ್ರಮವನ್ನು ನಾವುಗಳು ಮರೆಯಬಾರದು. ಅನೇಕ ಹಿರಿಯರು ಈ ಭಾಷೆ, ನೆಲ,‌ ಜಲ, ಬಾವುಟದ ಗೌರವವನ್ನು ಕಾಪಾಡಿದ್ದಾರೆ. ದೇಶದ ಯಾವ ರಾಜ್ಯವೂ ಧ್ವಜ, ನಾಡಗೀತೆ ಹೊಂದಿಲ್ಲ. ಆದರೆ ನಾವು ಇವೆರಡನ್ನೂ ಹೊಂದಿದ್ದೇವೆ. ವಿಧಾನಸೌಧದ ಆವರಣದಲ್ಲಿ ತಾಯಿ ಭುವನೇಶ್ವರಿ ಪ್ರತಿಮೆ ಸ್ಥಾಪಿಸಿದ್ದೇವೆ. ಫಲಕಗಳಲ್ಲಿ ಶೇ. 60 ರಷ್ಟು ಕನ್ನಡ ಕಡ್ಡಾಯಗೊಳಿಸಿದ್ದೇವೆ. ಬೆಂಗಳೂರಿನಲ್ಲಿರುವ ಉದ್ದಿಮೆಗಳು, ಕಾರ್ಖಾನೆಗಳು, ವಾಣಿಜ್ಯ ಕೇಂದ್ರಗಳಲ್ಲಿ ರಾಜ್ಯೋತ್ಸವ ಆಚರಣೆ ಕಡ್ಡಾಯ ಮಾಡಿದ್ದೇವೆ” ಎಂದರು.

Share post:

Subscribe

spot_imgspot_img

Popular

More like this
Related

ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆ ಇಳಿಕೆ: ಯಥಾಸ್ಥಿತಿಯಲ್ಲಿ ಗೃಹಬಳಕೆ!

ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆ ಇಳಿಕೆ: ಯಥಾಸ್ಥಿತಿಯಲ್ಲಿ ಗೃಹಬಳಕೆ! ನವದೆಹಲಿ:- ದೇಶದಲ್ಲಿ ಪ್ರತಿ...

ಆಂಧ್ರದ ಶ್ರೀಕಾಕುಳಂನಲ್ಲಿ ಕಾಲ್ತುಳಿತ: ದೇವರ ದರ್ಶನಕ್ಕೆ ಬಂದ 9 ಭಕ್ತಾದಿಗಳ ಸಾವು

ಆಂಧ್ರದ ಶ್ರೀಕಾಕುಳಂನಲ್ಲಿ ಕಾಲ್ತುಳಿತ: ದೇವರ ದರ್ಶನಕ್ಕೆ ಬಂದ 9 ಭಕ್ತಾದಿಗಳ ಸಾವು ಆಂಧ್ರಪ್ರದೇಶದ...

ರಾಜ್ಯದ ಎಲ್ಲಾ ಪ್ರದೇಶಗಳಲ್ಲಿ ಒಣ ಹವೆ! ಆದ್ರೆ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ

ರಾಜ್ಯದ ಎಲ್ಲಾ ಪ್ರದೇಶಗಳಲ್ಲಿ ಒಣ ಹವೆ! ಆದ್ರೆ ಬೆಂಗಳೂರಿನಲ್ಲಿ ಮೋಡ ಕವಿದ...

ಕನ್ನಡ ರಾಜ್ಯೋತ್ಸವಕ್ಕೆ ಕನ್ನಡದಲ್ಲೇ ಶುಭಾಶಯ ಕೋರಿದ ಪ್ರಧಾನಿ ಮೋದಿ

ಕನ್ನಡ ರಾಜ್ಯೋತ್ಸವಕ್ಕೆ ಕನ್ನಡದಲ್ಲೇ ಶುಭಾಶಯ ಕೋರಿದ ಪ್ರಧಾನಿ ಮೋದಿ ನವದೆಹಲಿ: ಕನ್ನಡ ರಾಜ್ಯೋತ್ಸವ...