ಇಂಡಿಯನ್ ಈಸ್ ಬ್ಯಾಕ್… ಸೇನಾಪತಿ ಕಮಲ್ ಹಾಸನ್ ಗೆ ಕಿಚ್ಚನ ಬೆಂಬಲ !

Date:

ತಮಿಳಿನ ಖ್ಯಾತ ನಿರ್ದೇಶಕ ಎಸ್ ಶಂಕರ್ ನಿರ್ದೇಶನದ ಬಹು ನಿರೀಕ್ಷಿತ ಸಿನಿಮಾ ‘ಇಂಡಿಯನ್ 2’ ಪ್ರೇಕ್ಷಕರಲ್ಲಿ ಈಗಾಗಲೇ ಸಾಕಷ್ಟು ಕುತೂಹಲ ಮೂಡಿಸಿದೆ. ಇಂದು ಚಿತ್ರದ ಫಸ್ಟ್ ಗ್ಲಿಂಪ್ಸ್ ಹೊರಬಿದ್ದಿದೆ. ಅನ್ಯಾಯದ ವಿರುದ್ಧ ಕಮಲ್ ಹಾಸನ್ ಹೇಗೆಲ್ಲಾ ಹೋರಾಟ ಮಾಡ್ತಾರೆ ಅನ್ನೋದನ್ನು ಸೀಕ್ವೆಲ್ ನಲ್ಲಿ ಕಟ್ಟಿಕೊಡಲಾಗಿದೆ.

‘ಇಂಡಿಯನ್ 2’ ಚಿತ್ರ 1996ರಲ್ಲಿ ಮೂಡಿಬಂದ ‘ಇಂಡಿಯನ್‌’ನ ಮುಂದುವರಿದ ಭಾಗ. ಸೌತ್ ಸಿನಿಮಾ ಇಂಡಸ್ಟ್ರಿಯ ಸೂಪರ್ ಸ್ಟಾರ್ ಕಮಲ್ ಹಾಸನ್ ಅವರು ಸೇನಾಪತಿ ಪಾತ್ರದಲ್ಲಿ ಮಿಂಚಿದ್ದರು. ಅದರ ಮುಂದುವರೆದ ಭಾಗವಾಗಿರುವಇಂಡಿಯನ್-2 ಇಂಟ್ರೋ ವೀಡಿಯೋ ಐದು ಭಾಷೆಯಲ್ಲಿ ಬಿಡುಗಡೆಯಾಗಿದೆ. ಕನ್ನಡದಲ್ಲಿ ಕಿಚ್ಚ ಸುದೀಪ್, ತಮಿಳಿನಲ್ಲಿ ರಜನಿಕಾಂತ್, ಹಿಂದಿ ಆಮಿರ್ ಖಾನ್, ತೆಲುಗಿನಲ್ಲಿ ರಾಜಮೌಳಿ, ಮಲಯಾಳಂನಲ್ಲಿ ಮೋಹನ್ ಲಾಲ್ ಇಂಡಿಯನ್-2 ಸಿನಿಮಾದ ಇಂಟ್ರೋ ವಿಡಿಯೋ ಅನಾವರಣ ಮಾಡಿದ್ದಾರೆ.

ಲೈಕಾ ಪ್ರೊಡಕ್ಷನ್ಸ್ ಮತ್ತು ರೆಡ್ ಜೈಂಟ್ ಮೂವೀಸ್ ಬ್ಯಾನರ್ ನಡಿ ಇಂಡಿಯನ್-2 ನಿರ್ಮಾಣವಾಗಿದ್ದು, ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಭ್ರಷ್ಟಾಚಾರ – ಅಪರಾಧ ಚಟುವಟಿಕೆಗಳ ವಿರುದ್ಧ ನಿಲ್ಲುವ ಕಥೆಯನ್ನು ಒಳಗೊಂಡಿದೆ. ಚಿತ್ರದಲ್ಲಿ ಸಿದ್ಧಾರ್ಥ್, ಕಾಜಲ್ ಅಗರ್ವಾಲ್, ರಾಕುಲ್ ಪ್ರೀತ್ ಸಿಂಗ್, ಪ್ರಿಯಾ ಭವಾನಿ ಶಂಕರ್, ಕಾಳಿದಾಸ್ ಜಯರಾಮ್, ಗುಲ್ಶನ್ ಗ್ರೋವರ್, ನೆಡುಮುಡಿ ವೇಣು, ವಿವೇಕ್, ಸಮುದ್ರಖನಿ, ಬಾಬಿ ಸಿಂಹ, ಗುರು ಸೋಮಸುಂದರಂ, ದೆಹಲಿ ಗಣೇಶ್, ಜಯಪ್ರಕಾಶ್, ಮನೋಬಾಲಾ, ವೆನ್ನೆಲ ಕಿಶೋರ್, ದೀಪಾ ಶಂಕರ್ ಕೂಡ ಕಾಣಿಸಿಕೊಳ್ಳಲಿದ್ದಾರೆ. ಅನಿರುದ್ಧ್ ರವಿಚಂದರ್ ಸಂಗೀತ, ರವಿವರ್ಮನ್ ಮತ್ತು ರತ್ನವೇಲು ಅವರ ಕ್ಯಾಮರಾ ವರ್ಕ್, ಎ. ಶ್ರೀಕರ್ ಪ್ರಸಾದ್ ಅವರ ಎಡಿಟಿಂಗ್ ಇರಲಿದೆ.

Share post:

Subscribe

spot_imgspot_img

Popular

More like this
Related

ದ್ವೇಷ ಭಾಷಣ ಮಸೂದೆ: ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ: ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳೂರು: ದ್ವೇಷ ಭಾಷಣ...

ಊಟ ಮಾಡಿದ ತಕ್ಷಣ ನೀರು ಕುಡಿದರೆ ಏನಾಗುತ್ತದೆ ಗೊತ್ತಾ?

ಊಟ ಮಾಡಿದ ತಕ್ಷಣ ನೀರು ಕುಡಿದರೆ ಏನಾಗುತ್ತದೆ ಗೊತ್ತಾ? ನಮ್ಮ ದೇಹಕ್ಕೆ ನೀರು...

ಬೆಂಗಳೂರು: ಬಿ-ಖಾತಾ ಆಸ್ತಿಗಳಿಗೆ ಎ-ಖಾತಾ ಸೌಲಭ್ಯ: ಅಪಾರ್ಟ್‌ಮೆಂಟ್‌ಗಳಿಗೆ ಆದ್ಯತೆ

ಬೆಂಗಳೂರು: ಬಿ-ಖಾತಾ ಆಸ್ತಿಗಳಿಗೆ ಎ-ಖಾತಾ ಸೌಲಭ್ಯ: ಅಪಾರ್ಟ್‌ಮೆಂಟ್‌ಗಳಿಗೆ ಆದ್ಯತೆ ಬೆಂಗಳೂರು ನಗರದ ಬಡಾವಣೆಗಳಲ್ಲಿನ...

ಚಳಿಗಾಲದಲ್ಲಿ ಬೆಂಕಿ ಕಾಯಿಸುವಾಗ ಈ ವಿಷಯಗಳು ನೆನಪಿನಲ್ಲಿರಲಿ!

ಚಳಿಗಾಲದಲ್ಲಿ ಬೆಂಕಿ ಕಾಯಿಸುವಾಗ ಈ ವಿಷಯಗಳು ನೆನಪಿನಲ್ಲಿರಲಿ! ಪ್ರಸ್ತುತ ಕರ್ನಾಟಕ ಸೇರಿದಂತೆ ಹಲವಾರು...