ಇಂಡೋ-ವಿಂಡೀಸ್​ ವಾರ್​​ – ಇಬ್ಬರು ಕನ್ನಡಿಗರು ಕಣಕ್ಕೆ..!?

Date:

ವರ್ಲ್ಡ್​​ಕಪ್​ನಲ್ಲಿ ಲೀಗ್ ಹಂತದಲ್ಲಿ ಚಾಂಪಿಯನ್ ಆಟ ಪ್ರದರ್ಶಿಸಿದರೂ ಸೆಮಿಫೈನಲ್​ನಲ್ಲಿ ನ್ಯೂಜಿಲೆಂಡ್ ವಿರುದ್ಧ ಸೋಲುಂಡ ಭಾರತ ವೆಸ್ಟ್ ಇಂಡೀಸ್ ಪ್ರವಾಸದಲ್ಲಿದೆ. ಇಂದು ಅಮೆರಿಕಾದ ಫ್ಲೋರಿಡಾದ ಲೌಡರ್ ಹಿಲ್ ನಲ್ಲಿ ಭಾರತ ಮತ್ತು ವೆಸ್ಟ್ ಇಂಡೀಸ್ ನಡುವೆ ಮೊದಲ ಟಿ20 ಪಂದ್ಯ ನಡೆಯಲಿದೆ.
ರೋಹಿತ್ ಶರ್ಮಾ, ಶಿಖರ್ ಧವನ್ ಆರಂಭಿಕರಾಗಿ ಕಣಕ್ಕೆ ಇಳಿದರೆ, ಎಂದಿನ 3ನೇ ಕ್ರಮಾಂಕದಲ್ಲಿ ನಾಯಕ ವಿರಾಟ್ ಕೊಹ್ಲಿ ಬ್ಯಾಟ್ ಬೀಸಲಿದ್ದಾರೆ.‌ಮಹೇಂದ್ರ ಸಿಂಗ್ ಧೋನಿ ಸ್ಥಾನಕ್ಕೆ ವಿಕೆಟ್ ಕೀಪರ್ ಆಗಿ ತಂಡ ಕೂಡಿ ಕೊಂಡಿರುವ ರಿಷಭ್ ಪಂತ್6 ನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸಲಿದ್ದಾರೆ. 4ನೇ ಕ್ರಮಾಂಕದಲ್ಲಿ ಕನ್ನಡಿಗ ಕೆ.ಎಲ್ ರಾಹುಲ್ ಆಡುವುದು ಖಚಿತವಾಗಿದೆ…

5ನೇ ಕ್ರಮಾಂಕದಲ್ಲಿ ಮತ್ತೊಬ್ಬ ಕನ್ನಡಿಗ ಮನೀಷ್ ಪಾಂಡೆ ಆಡುವ ಸಾಧ್ಯತೆ ಇದೆ. ಆದರೆ‌, ಯುವ ಆಟಗಾರ ಶ್ರೇಯಸ್ ಅಯ್ಯರ್ ಗೆ ಚಾನ್ಸ್ ಸಿಗುವ ಸಾಧ್ಯತೆ ಇದೆ‌‌ .‌ ಇನ್ನುಳಿದಂತೆ ಆಲ್ ರೌಂಡರ್ ವಿಭಾಗದಲ್ಲಿ ರವೀಂದ್ರ ಜಡೇಜಾ, ಕೃನಾಲ್ ಪಾಂಡ್ಯ ಕಣದಲ್ಲಿರಲಿದ್ದಾರೆ. ಭುವನೇಶ್ವರ್ ಕುಮಾರ್, ಖಲೀಲ್ ಅಹಮ್ಮದ್ ಬೌಲಿಂಗ್ ಅಸ್ತ್ರಗಳಾಗಿದ್ದಾರೆ. ನವದೀಪ್ ಸೈನಿ ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ಎಂಟ್ರಿ ಕೊಡಲು ಎದುರು ನೋಡ್ತಿದ್ದಾರೆ.

ರೋಹಿತ್ ದಾಖಲೆ? :ಟೀಮ್ ಇಂಡಿಯಾದ ಉಪ ನಾಯಕ ರೋಹಿತ್ ಶರ್ಮಾ 102 ಸಿಕ್ಸರ್ ಗಳೊಂದಿಗೆ ಟಿ20ಯಲ್ಲಿ ಅತೀ ಹೆಚ್ಚು ಸಿಕ್ಸರ್ ಸಿಡಿಸಿದವರ ಪಟ್ಟಿಯಲ್ಲಿ 3ನೇ ಸ್ಥಾನದಲ್ಲಿದ್ದಾರೆ. 105 ಸಿಕ್ಸರ್ ಗಳೊಂದಿಗೆ ಕ್ರಿಸ್ ಗೇಲ್1 , 103 ಸಿಕ್ಸರ್ ಗಳೊಂದಿಗೆ ಮಾರ್ಟಿನ್ ಗಪ್ಟಿಲ್2ನೇ ಸ್ಥಾನದಲ್ಲಿದ್ದಾರೆ. ರೋಹಿತ್ 4 ಸಿಕ್ಸ್ ಬಾರಿಸಿದರೆ ಅತೀ ಹೆಚ್ಚು ಸಿಕ್ಸರ್ ಗಳ ಸರದಾರರಾಗುತ್ತಾರೆ. ಪಂದ್ಯ ರಾತ್ರಿ 8 ಗಂಟೆಗೆ ಆರಂಭವಾಗಲಿದೆ.

Share post:

Subscribe

spot_imgspot_img

Popular

More like this
Related

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ – ನಾಪತ್ತೆಯಾದ ಮೂವರಿಗೆ ಶೋಧ

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ -...

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ ತಿಳಿಯಿರಿ

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ...

ಚಿತ್ರದುರ್ಗ ಬಸ್ ಅಪಘಾತ: ಮೃತರ ಕುಟುಂಬಕ್ಕೆ ಕೇಂದ್ರದಿಂದ ₹2 ಲಕ್ಷ ಪರಿಹಾರ ಘೋಷಣೆ

ಚಿತ್ರದುರ್ಗ ಬಸ್ ಅಪಘಾತ: ಮೃತರ ಕುಟುಂಬಕ್ಕೆ ಕೇಂದ್ರದಿಂದ ₹2 ಲಕ್ಷ ಪರಿಹಾರ...

ಖಾಸಗಿ ಬಸ್–ಕಂಟೇನರ್ ಲಾರಿ ಡಿಕ್ಕಿ; 9 ಮಂದಿ ಸಜೀವ ದಹನ

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಜವನಗೊಂಡನಹಳ್ಳಿ ಸಮೀಪ ರಾಷ್ಟ್ರೀಯ ಹೆದ್ದಾರಿ–48ರಲ್ಲಿ...