ಇಂದಿನಿಂದ ಅಧಿದೇವತೆ ಹಾಸನಾಂಬೆಯ ಸಾರ್ವಜನಿಕ ದರ್ಶನ!

Date:

ಇಂದಿನಿಂದ ಅಧಿದೇವತೆ ಹಾಸನಾಂಬೆಯ ಸಾರ್ವಜನಿಕ ದರ್ಶನ!

ಹಾಸನ: ಹಾಸನಾಂಬೆ ದೇವಸ್ಥಾನದ ಗರ್ಭಗುಡಿ ಬಾಗಿಲು ವರ್ಷದಲ್ಲಿ 1 ಸಲ ಮಾತ್ರ ತೆರೆಯುವುದು ಮೊದಲಿನಿಂದ ಬಂದ ವಿಶಿಷ್ಟ ಸಂಪ್ರದಾಯ. ಆದ್ದರಿಂದ ಇಂದಿನಿಂದ 10 ದಿನ ಹಾಸನಾಂಬೆ ದೇವಿ ತನ್ನ ಭಕ್ತರಿಗೆ ದರ್ಶನ ನೀಡಲಿದ್ದಾಳೆ. ಇಂದು ಮುಂಜಾನೆ 4 ಗಂಟೆಗೆ ದರ್ಶನ ಆರಂಭವಾಗಿದ್ದು, ಇಂದು ಶಕ್ತಿದೇವತೆಯ ದರ್ಶನ ಪಡೆಯಲು ಭಕ್ತರ ದಂಡೇ ಹರಿದು ಬಂದಿದೆ. ಗುರುವಾರ ಮಧ್ಯರಾತ್ರಿಯಿಂದಲೇ ದೇವಿ ದರ್ಶನಕ್ಕೆ ಸರತಿ ಸಾಲಿನಲ್ಲಿ ನಿಂತು ಭಕ್ತರು ದೇವಿಯ ದರ್ಶನ ಪಡೆಯುತ್ತಿದ್ದಾರೆ.
ಒಂದು ವರ್ಷದ ಬಳಿಕ ಶಕ್ತಿ ದೇವತೆ ಹಾಸನಾಂಬೆಯ ದರ್ಶನ ಪಡೆದು ಭಕ್ತರು ಶಕ್ತಿದೇವತೆಯನ್ನು ಕಣ್ತುಂಬಿಕೊಳ್ಳುತ್ತಿದ್ದಾರೆ. ಇಂದು ರಾತ್ರಿ 11 ಗಂಟೆಯವರೆಗೂ ದೇವಿಯ ದರ್ಶನಕ್ಕೆ ಅವಕಾಶವಿರುತ್ತದೆ. ನವೆಂಬರ್ 3ಕ್ಕೆ ಹಾಸನಾಂಬ ಜಾತ್ರಾ ಮಹೋತ್ಸವ ಜರುಗಲಿದ್ದು, ಕೊನೆಯ ದಿನ ಭಕ್ತರಿಗೆ ದೇವಿ ದರ್ಶನಕ್ಕೆ ಅವಕಾಶ ಇರುವುದಿಲ್ಲ. ಉಳಿದ ಒಂಭತ್ತು ದಿನ ಭಕ್ತರಿಗೆ ದೇವಿ ದರ್ಶನಕ್ಕೆ ಅವಕಾಶವಿರುತ್ತದೆ.

Share post:

Subscribe

spot_imgspot_img

Popular

More like this
Related

ಸಿಎಂ ಬದಲಾವಣೆ ಬಗ್ಗೆ ಮಹದೇವಪ್ಪ ಅವರಿಗೆ ಮಾಹಿತಿ ಸಿಕ್ಕಿರಬಹುದು: ಡಿ.ಕೆ. ಶಿವಕುಮಾರ್

ಸಿಎಂ ಬದಲಾವಣೆ ಬಗ್ಗೆ ಮಹದೇವಪ್ಪ ಅವರಿಗೆ ಮಾಹಿತಿ ಸಿಕ್ಕಿರಬಹುದು: ಡಿ.ಕೆ. ಶಿವಕುಮಾರ್ ಬೆಂಗಳೂರು:...

ಉದ್ಯೋಗಕ್ಕಾಗಿ ಧಾರವಾಡದಲ್ಲಿ ಯುವಕರ ಆಕ್ರೋಶ: ಸರ್ಕಾರದ ವಿರುದ್ಧ ಆರ್. ಅಶೋಕ್ ವಾಗ್ದಾಳಿ

ಉದ್ಯೋಗಕ್ಕಾಗಿ ಧಾರವಾಡದಲ್ಲಿ ಯುವಕರ ಆಕ್ರೋಶ: ಸರ್ಕಾರದ ವಿರುದ್ಧ ಆರ್. ಅಶೋಕ್ ವಾಗ್ದಾಳಿ ಧಾರವಾಡ:...

ಹೃದಯಾಘಾತದಿಂದ 9ನೇ ತರಗತಿ ವಿದ್ಯಾರ್ಥಿ ಸಾವು!

ಹೃದಯಾಘಾತದಿಂದ 9ನೇ ತರಗತಿ ವಿದ್ಯಾರ್ಥಿ ಸಾವು! ದಾವಣಗೆರೆ: ಜಿಲ್ಲೆಯ ಜಗಳೂರು ತಾಲೂಕಿನ ಗೋಗುದ್ದು...

ಪ್ರತಿದಿನ ಮೊಸರು–ಸಕ್ಕರೆ ತಿನ್ನುತ್ತೀರಾ? ಹಾಗಾದ್ರೆ ಈ ಸ್ಟೋರಿ ನೋಡಿ

ಪ್ರತಿದಿನ ಮೊಸರು–ಸಕ್ಕರೆ ತಿನ್ನುತ್ತೀರಾ? ಹಾಗಾದ್ರೆ ಈ ಸ್ಟೋರಿ ನೋಡಿ ಯಾವುದೇ ಶುಭಕಾರ್ಯ ಆರಂಭಿಸುವ...