No menu items!
18.8 C
Munich
Friday, June 19, 2026

ಇಂದಿನಿಂದ ಕರ್ನಾಟಕದ ಕೆಲ ಜಿಲ್ಲೆಗಳಲ್ಲಿ ಮಾತ್ರ ಮಳೆ: ಹವಾಮಾನ ಇಲಾಖೆ

Must read

ಬೆಂಗಳೂರು: ಕರ್ನಾಟಕದ ಕೆಲ ಜಿಲ್ಲೆಗಳಲ್ಲಿ ಇಂದಿನಿಂದ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ. ಅರಬ್ಬಿ ಸಮುದ್ರ ಹಾಗೂ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆ ಇಂದು ಕೆಲ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ ಇದೆ.
ಈ ಹಿನ್ನೆಲೆ ಕರಾವಳಿ ಹಾಗೂ ದಕ್ಷಿಣ ಒಳನಾಡು ಪ್ರದೇಶಗಳಲ್ಲಿ ಟ್ರಫ್ ಉಂಟಾಗುವ ಸಂಭವವಿದೆ. ಹೀಗಾಗಿ ಕೆಲ ದಿನಗಳ ಕಾಲ ಮಳೆ ಮುನ್ಸೂಚನೆ ನೀಡಿದೆ ಹವಾಮಾನ ಇಲಾಖೆ. ದಕ್ಷಿಣ, ಉತ್ತರ ಒಳನಾಡು ಹಾಗೂ ಕರಾವಳಿ ಭಾಗಕ್ಕೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಕರಾವಳಿ ಕರ್ನಾಟಕಕ್ಕೆ ಮೇ 27ರ ವರೆಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ದಕ್ಷಿಣ ಒಳನಾಡಿಗೆ ಇಂದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಮಾರ್ಚ್, ಏಪ್ರಿಲ್‍ನಲ್ಲಿ ವಾಡಿಕೆ ಮಳೆಯಾಗಿಲ್ಲ. ಆದರೆ ಮೇನಲ್ಲಿ ನಿರೀಕ್ಷೆಗಿಂತ ಹೆಚ್ಚಿನ ಮಳೆಯಾಗಿದೆ. ಮೇ ತಿಂಗಳಲ್ಲಿ ವಾಡಿಕೆಯ 8.9 ಸೆ.ಮೀ ಬದಲು 11.3 ಸೆ.ಮೀ ಮಳೆಯಾಗಿದೆ. ಮುಂದಿನ 1 ವಾರಗಳ ಕಾಲ ದಾಖಲೆ ಪ್ರಮಾಣದಲ್ಲಿ ಮಳೆ ಸಾಧ್ಯತೆ ಇದೆ.
ಇಂದಿನಿಂದ ಮೇ29ವರೆಗೆ ಮಳೆ ಪ್ರಮಾಣ ಕಡಿಮೆ ಆಗಲಿದೆ. ಮೇ 29ವರೆಗೆ ಕರ್ನಾಟಕ ಒಳನಾಡು ಹಾಗೂ ಕರಾವಳಿಯಲ್ಲಿ ಕೆಲವು ಕಡೆ ಮಳೆ ಆಗುವ ಸಾಧ್ಯತೆ ಇದೆ. ಬೆಂಗಳೂರಿನ ಮೇ 29ವರೆಗೆ ಕೆಲವು ಕಡೆ ಮಾತ್ರ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ತಜ್ಞ ಸಿ.ಎಸ್ ಪಾಟೇಲ್ ಮಾಹಿತಿ ನೀಡಿದ್ದಾರೆ

- Advertisement -spot_img

More articles

- Advertisement -spot_img

Latest article