No menu items!
4.8 C
Munich
Saturday, May 2, 2026

ಇಂದಿನಿಂದ ಫ್ಲವರ್ ಶೋ: ಫಲಪುಷ್ಪ ಪ್ರದರ್ಶನಕ್ಕೆ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ

Must read

ಇಂದಿನಿಂದ ಫ್ಲವರ್ ಶೋ: ಫಲಪುಷ್ಪ ಪ್ರದರ್ಶನಕ್ಕೆ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ

 

ಬೆಂಗಳೂರು: ಸ್ವಾತಂತ್ರ್ಯ ದಿನಾಚರಣೆ ಹಿನ್ನಲ್ಲೆ ಬೆಂಗಳೂರಿನ ಲಾಲ್‌ಬಾಗ್‌ನಲ್ಲಿ ಇಂದಿನಿಂದ 12 ದಿನಗಳ ಕಾಲ 218ನೇ ವಾರ್ಷಿಕ ಫಲಪುಷ್ಪ ಪ್ರದರ್ಶನ ಆಯೋಜಿಸಲಾಗಿದೆ. ಈ ಬಾರಿ ಕಿತ್ತೂರು ರಾಣಿ ಚೆನ್ನಮ್ಮ ಮತ್ತು ಸಂಗೊಳ್ಳಿ ರಾಯಣ್ಣರ ವೀರಗಾಥೆ ಅನಾವರಣಗೊಂಡಿದೆ. ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದ್ದಾರೆ. ಗಾಜಿನ ಮನೆಯಲ್ಲಿ ಫ್ಲವರ್ ಶೋಗೆ ಚಾಲನೆ ನೀಡಿದ್ದು, 12 ದಿನಗಳ ಪ್ರದರ್ಶನಕ್ಕೆ 10 ಲಕ್ಷಕ್ಕೂ ಅಧಿಕ ಮಂದಿ ಸಾಕ್ಷಿಯಾಗುವ ನಿರೀಕ್ಷೆ ಇದೆ.

ಈ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಇದು 218ನೇ ವರ್ಷದ ಲಾಲ್‌ಬಾಗ್ ಫಲಪುಷ್ಪ ಪ್ರದರ್ಶನವಾಗಿದೆ. ಈ ಬಾರಿ ಕಿತ್ತೂರು ರಾಣಿ ಚೆನ್ನಮ್ಮ, ಸಂಗೊಳ್ಳಿ ರಾಯಣ್ಣರಿಗೆ ಗೌರವ ಸಲ್ಲಿಸುವ ಕೆಲಸ ಆಗಿದೆ ಎಂದಿದ್ದಾರೆ.ಕಿತ್ತೂರು ರಾಣಿ ಚೆನ್ನಮ್ಮಗೆ ಬ್ರಿಟಿಷರ ವಿರುದ್ಧ ಮೊದಲನೇ ಯುದ್ಧಗಳಲ್ಲಿ ಜಯ ಸಿಕ್ತು. ಎರಡನೇ ಯುದ್ಧದಲ್ಲಿ ಚೆನ್ನಮ್ಮನ ಸೆರೆಯಾಯಿತು. ಚೆನ್ನಮ್ಮನ ಬಲಗೈ ಬಂಟನಾಗಿದ್ದ ರಾಯಣ್ಣನಿಗೆ ನ್ಯಾಯಾಲಯದಲ್ಲಿ ಗಲ್ಲು ಶಿಕ್ಷೆ ಆಯಿತು. ರಾಯಣ್ಣ ಹುಟ್ಟಿದ್ದು ಸ್ವಾತಂತ್ರ‍್ಯ ಸಿಕ್ಕ ದಿನವಾದರೆ, ಗಲ್ಲು ಶಿಕ್ಷೆ ಆಗಿದ್ದು ಗಣರಾಜ್ಯದ ದಿನ. ಇದು ಕಾಕತಾಳೀಯ ಅಂತಾನೇ ಎನ್ನಬಹುದು ಎಂದು ಹೇಳಿದ್ದಾರೆ.

- Advertisement -spot_img

More articles

- Advertisement -spot_img

Latest article