ಇಂದಿನಿಂದ ವಿಧಾನಮಂಡಲ ಅಧಿವೇಶನ: ಸರ್ಕಾರದ ವಿರುದ್ಧ ವಿಪಕ್ಷಗಳ ಪ್ರಮುಖ ಅಸ್ತ್ರಗಳು ಇಲ್ಲಿದೆ
ಬೆಂಗಳೂರು: ಮಳೆಗಾಲದ ವಿಧಾನಮಂಡಲ ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ಆಗಸ್ಟ್ 22ರವರೆಗೆ ಎರಡು ವಾರಗಳ ಕಾಲ ನಡೆಯಲಿದೆ. ಕಾಂಗ್ರೆಸ್ ಸರ್ಕಾರದ ವಿರುದ್ಧ ಹೋರಾಟಕ್ಕೆ ಬಿಜೆಪಿ ಮತ್ತು ಜೆಡಿಎಸ್ ಸಂಪೂರ್ಣ ಸಜ್ಜಾಗಿವೆ. ರಾಹುಲ್ ಗಾಂಧಿ ಹಾಗೂ ಪ್ರಧಾನಿ ನರೇಂದ್ರ ಮೋದಿ ರಾಜ್ಯ ಭೇಟಿಯ ಬಳಿಕ ಪ್ರಾರಂಭವಾಗುತ್ತಿರುವ ಅಧಿವೇಶನದಲ್ಲಿ ಈ ಬಾರಿ ಆಡಳಿತ ಹಾಗೂ ವಿರೋಧ ಪಕ್ಷಗಳ ನಡುವೆ ದೊಡ್ಡ ಸಮರ ಏರ್ಪಡುವ ಸಾಧ್ಯತೆ ಇದೆ.
ವಿಪಕ್ಷಗಳ ಪ್ರಮುಖ ಅಸ್ತ್ರಗಳು:
ಆರ್‌ಸಿಬಿ ಸಂಭ್ರಮಾಚರಣೆ ಸಂದರ್ಭ ಸಂಭವಿಸಿದ ದುರಂತದಲ್ಲಿ 11 ಮಂದಿ ಸಾವಿನ ವಿಚಾರ.
ಪೊಲೀಸ್ ಅಧಿಕಾರಿಗಳ ಅಮಾನತು ಮತ್ತು ಸರ್ಕಾರದ ದ್ವಂದ್ವ ನಿರ್ಧಾರಗಳ ಪ್ರಶ್ನೆ.
ರೈತರಿಗೆ ಯೂರಿಯಾ ಕೊರತೆ.
ಗುತ್ತಿಗೆದಾರರಿಂದ 60% ವಸೂಲಿ ಆರೋಪ.
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿರುವ ಬಗ್ಗೆ ಟೀಕೆ.
ಧರ್ಮಸ್ಥಳದಲ್ಲಿ ನೂರಾರು ಶವ ಹೂತಿಟ್ಟ ಆರೋಪ.
ರಾಹುಲ್ ಗಾಂಧಿ ಮಾಡಿದ ‘ಮತಗಳ್ಳತನ’ ಆರೋಪದ ರಾಜಕೀಯ ಪೈಪೋಟಿ.
ದ್ವೇಷ ಭಾಷಣ ನಿಯಂತ್ರಣಕ್ಕೆ ಸಂಬಂಧಿಸಿದ ವಿಧೇಯಕದ ಮೇಲೆ ಚರ್ಚೆ ಮತ್ತು ವಾಕ್ಸಮರ.