No menu items!
17 C
Munich
Saturday, May 2, 2026

ಇಂದಿನಿಂದ ವಿಧಾನಮಂಡಲ ಅಧಿವೇಶನ: ಸರ್ಕಾರದ ವಿರುದ್ಧ ವಿಪಕ್ಷಗಳ ಪ್ರಮುಖ ಅಸ್ತ್ರಗಳು ಇಲ್ಲಿದೆ

Must read

ಇಂದಿನಿಂದ ವಿಧಾನಮಂಡಲ ಅಧಿವೇಶನ: ಸರ್ಕಾರದ ವಿರುದ್ಧ ವಿಪಕ್ಷಗಳ ಪ್ರಮುಖ ಅಸ್ತ್ರಗಳು ಇಲ್ಲಿದೆ

 

ಬೆಂಗಳೂರು: ಮಳೆಗಾಲದ ವಿಧಾನಮಂಡಲ ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ಆಗಸ್ಟ್ 22ರವರೆಗೆ ಎರಡು ವಾರಗಳ ಕಾಲ ನಡೆಯಲಿದೆ. ಕಾಂಗ್ರೆಸ್ ಸರ್ಕಾರದ ವಿರುದ್ಧ ಹೋರಾಟಕ್ಕೆ ಬಿಜೆಪಿ ಮತ್ತು ಜೆಡಿಎಸ್ ಸಂಪೂರ್ಣ ಸಜ್ಜಾಗಿವೆ. ರಾಹುಲ್​ ಗಾಂಧಿ ಹಾಗೂ ಪ್ರಧಾನಿ ನರೇಂದ್ರ ಮೋದಿ ರಾಜ್ಯ ಭೇಟಿಯ ಬಳಿಕ ಪ್ರಾರಂಭವಾಗುತ್ತಿರುವ ಅಧಿವೇಶನದಲ್ಲಿ ಈ ಬಾರಿ ಆಡಳಿತ ಹಾಗೂ ವಿರೋಧ ಪಕ್ಷಗಳ ನಡುವೆ ದೊಡ್ಡ ಸಮರ ಏರ್ಪಡುವ ಸಾಧ್ಯತೆ ಇದೆ.

ವಿಪಕ್ಷಗಳ ಪ್ರಮುಖ ಅಸ್ತ್ರಗಳು:

ಆರ್‌ಸಿಬಿ ಸಂಭ್ರಮಾಚರಣೆ ಸಂದರ್ಭ ಸಂಭವಿಸಿದ ದುರಂತದಲ್ಲಿ 11 ಮಂದಿ ಸಾವಿನ ವಿಚಾರ.

ಪೊಲೀಸ್ ಅಧಿಕಾರಿಗಳ ಅಮಾನತು ಮತ್ತು ಸರ್ಕಾರದ ದ್ವಂದ್ವ ನಿರ್ಧಾರಗಳ ಪ್ರಶ್ನೆ.

ರೈತರಿಗೆ ಯೂರಿಯಾ ಕೊರತೆ.

ಗುತ್ತಿಗೆದಾರರಿಂದ 60% ವಸೂಲಿ ಆರೋಪ.

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿರುವ ಬಗ್ಗೆ ಟೀಕೆ.

ಧರ್ಮಸ್ಥಳದಲ್ಲಿ ನೂರಾರು ಶವ ಹೂತಿಟ್ಟ ಆರೋಪ.

ರಾಹುಲ್ ಗಾಂಧಿ ಮಾಡಿದ ‘ಮತಗಳ್ಳತನ’ ಆರೋಪದ ರಾಜಕೀಯ ಪೈಪೋಟಿ.

ದ್ವೇಷ ಭಾಷಣ ನಿಯಂತ್ರಣಕ್ಕೆ ಸಂಬಂಧಿಸಿದ ವಿಧೇಯಕದ ಮೇಲೆ ಚರ್ಚೆ ಮತ್ತು ವಾಕ್ಸಮರ.

- Advertisement -spot_img

More articles

- Advertisement -spot_img

Latest article