ಇಂದಿನಿಂದ 4 ದಿನಗಳ ಕಾಲ ಕರ್ನಾಟಕ, ತಮಿಳುನಾಡು, ಕೇರಳ, ಮಾಹೆ ಸೇರಿದಂತೆ ಅನೇಕ ರಾಜ್ಯಗಳಲ್ಲಿ ಮಳೆ ಸುರಿಯಲಿದೆ.
ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ರಾಮನಗರ, ತುಮಕೂರಿನಲ್ಲಿ ಇಂದು ಮಳೆಯಾಗುವ ಸಾಧ್ಯತೆ ಇದೆ. ಇಂದು ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಚಾಮರಾಜನಗರ, ಕೊಡಗು, ಮಂಡ್ಯ, ಮೈಸೂರು, ಬಳ್ಳಾರಿ, ರಾಮನಗರ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಆಂಧ್ರಪ್ರದೇಶ, ಕರ್ನಾಟಕ, ಕೇರಳ ಮತ್ತು ಅಂಡಮಾನ್ ಮತ್ತು ನಿಕೋಬಾರ್ ದ್ವೀಪದಲ್ಲಿ ಇಂದು ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ 2 ದಿನಗಳಿಂದ ತುಂತುರು ಮಳೆಯಾಗಿದ್ದು, ಇಂದು ಕೂಡ ಮಳೆ ಸುರಿಯುವ ಸಾಧ್ಯತೆಗಳಿವೆ. ಜೂನ್ ತಿಂಗಳಿನಿಂದ ರಾಜ್ಯದಲ್ಲಿ ಮಳೆಯಾಗುತ್ತಿದ್ದು, ಚಳಿಗಾಲ ಬಂದರೂ ಇನ್ನೂ ಮಳೆ ಮುಂದುವರೆದಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ಇಂದಿನಿಂದ 4 ದಿನ ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಮಳೆಯಾಗುವ ಸಾಧ್ಯತೆ ಇದೆ.
ಆಂಧ್ರಪ್ರದೇಶ, ತಮಿಳುನಾಡಿನಲ್ಲಿ ಅಲ್ಲಲ್ಲಿ ಮಳೆಯಾಗುವ ಮುನ್ಸೂಚನೆ ಸಿಕ್ಕಿದೆ. ಕರ್ನಾಟಕ, ಕೇರಳ, ಅಂಡಮಾನ್ ಮತ್ತು ನಿಕೋಬಾರ್ ದ್ವೀಪದಲ್ಲಿ ಇಂದು ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಡಿ. 17ರವರೆಗೆ ದಕ್ಷಿಣ ಭಾರತ ಸೇರಿದಂತೆ ಜಮ್ಮು ಮತ್ತು ಕಾಶ್ಮೀರ, ಲಡಾಖ್ ಮತ್ತು ಹಿಮಾಚಲ ಪ್ರದೇಶದಲ್ಲಿ ಮಿಂಚಿನೊಂದಿಗೆ ಸೇರಿದ ಮಳೆಯಾಗಲಿದೆ. ಈ ಅವಧಿಯಲ್ಲಿ ಉತ್ತರ ಭಾರತದ ಬಯಲು ಪ್ರದೇಶಗಳು ಮತ್ತು ಪಕ್ಕದ ಪ್ರದೇಶಗಳಲ್ಲಿ ಮತ್ತು ಪಶ್ಚಿಮ ಹಿಮಾಲಯ ಪ್ರದೇಶದಲ್ಲಿ ಸೋಮವಾರದಿಂದ ಗರಿಷ್ಠ ತಾಪಮಾನವು ಸರಾಸರಿಗಿಂತ ಕಡಿಮೆ ಇರುತ್ತದೆ.
ಡಿ. 17ರವರೆಗೆ ರಾಜಸ್ಥಾನ, ಗುಜರಾತ್ ಮತ್ತು ಪಕ್ಕದ ಪ್ರದೇಶಗಳಲ್ಲಿ ಕನಿಷ್ಠ ತಾಪಮಾನವು ಸರಾಸರಿಗಿಂತ ಕಡಿಮೆಯಿರುತ್ತದೆ. ಮುಂದಿನ 4 ದಿನಗಳವರೆಗೆ ಒಡಿಶಾ, ಅಸ್ಸಾಂ, ಮೇಘಾಲಯ, ಮಿಜೋರಾಂ ಮತ್ತು ತ್ರಿಪುರಾದಲ್ಲಿ ಬೆಳಗಿನ ಸಮಯದಲ್ಲಿ ಮಂಜು ಇರಲಿದೆ. ಮುಂದಿನ 4 ದಿನಗಳ ಕಾಲ ರಾಜ್ಯದಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ದಕ್ಷಿಣ ಒಳನಾಡು ಭಾಗದಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮುಂದಿನ 4 ದಿನ ತಮಿಳುನಾಡು-ಪುದುಚೇರಿ, ಕಾರೈಕಲ್, ಕೇರಳ- ಮಾಹೆ, ಲಕ್ಷದ್ವೀಪ ಮತ್ತು ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಮತ್ತು ಆಂಧ್ರಪ್ರದೇಶದಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಇಂದಿನಿಂದ 4 ದಿನ ಕಾಶ್ಮೀರ, ಲಡಾಖ್, ಗಿಲ್ಗಿಟ್ ಬಾಲ್ಟಿಸ್ತಾನ್ ಮತ್ತು ಮುಜಫರಾಬಾದ್ನಲ್ಲಿ ಮಳೆಯಾಗಲಿದೆ. ಡಿಸೆಂಬರ್ 16 ಮತ್ತು 17ರಂದು ಹಿಮಾಚಲ ಪ್ರದೇಶದ ಮೇಲೆ ಮಳೆಯಾಗುವ ನಿರೀಕ್ಷೆಯಿದೆ.