ಇಂದಿರಾ ಕ್ಯಾಂಟೀನ್ ಹೆಸರು ಬದಲಾವಣೆ ಮಾಡಲು ಬಿಜೆಪಿ ಸರ್ಕಾರ ನಿರ್ಧಾರ !?

Date:

ಕಾಂಗ್ರೆಸ್ ಸರ್ಕಾರವಿದ್ದಾಗ ರಚನೆಯಾಗಿದ್ದ ಇಂದಿರಾ ಕ್ಯಾಂಟಿನ್ ಎಂಬ ಸೇವೆ ಬಡವರಿಗೆ ಕಮ್ಮಿ ದರದಲ್ಲಿ ಊಟ ಒದಗಿಸುವ ಈ ಕ್ಯಾಂಟೀನ್ ದಿವಂಗತ ಕಾಂಗ್ರೆಸ್ ನಾಯಕಿ ಇಂದಿರಾ ಗಾಂಧಿ ಹೆಸರಿನಲ್ಲಿ ರಾಜ್ಯಾದ್ಯಂತ ತೆರೆಯಲಾಯಿತು .ಆದರೆ ಇದೀಗ ಬಿಜೆಪಿ ಸರ್ಕಾರ ಬಂದ ಮೇಲೆ ಆಯಾ ಜಿಲ್ಲೆಗಳ ಅತ್ಯಂತ ಪ್ರಮುಖರ ಹೆಸರನ್ನು ಇಡುವ ಮೂಲಕ ಇಂದಿರಾ ಕ್ಯಾಂಟೀನ್‍ಗಳಿಗೆ ಎಳ್ಳು ನೀರು ಬಿಡಲು ಬಿಜೆಪಿ ಮುಂದಾಗಿದೆ. ಕೆಲವೆಡೆ ಇಂದಿರಾ ಕ್ಯಾಂಟೀನ್‍ಗಳಲ್ಲಿ ಅವ್ಯವಹಾರ ನಡೆದಿದೆ ಎಂಬ ಆರೋಪಗಳು ಕೇಳಿ ಬಂದಿವೆ.

ಮತ್ತೆ ಕೆಲವೆಡೆ ಆಹಾರದ ಗುಣಮಟ್ಟ ಸರಿಯಿಲ್ಲ ಎನ್ನುವವರು ಇದ್ದಾರೆ. ಆದರೆ ಬಹಳಷ್ಟು ಜನರಿಗೆ ಇಂದಿರಾ ಕ್ಯಾಂಟೀನ್‍ಗಳು ಉಪಯುಕ್ತವಾಗಿವೆ. ಆದರೂ ಬಿಜೆಪಿ ಸರ್ಕಾರ ಇಂದಿರಾ ಕ್ಯಾಂಟೀನ್ ಹೆಸರನ್ನು ಬದಲಾವಣೆ ಮಾಡಲು ಚಿಂತನೆ ನಡೆಸಿದೆ.

ಇಂದಿರಾ ಹೆಸರು ತೆಗೆದು ಆಯಾ ಜಿಲ್ಲೆಗಳ ಸಾಧಕರ ಹೆಸರನ್ನು ಇಡಲು ಸರ್ಕಾರ ಇಚ್ಛಿಸಿದ್ದು, ಮೈಸೂರಿನಲ್ಲಿ ಜಯಚಾಮರಾಜ ಒಡೆಯರ್, ತುಮಕೂರಿನಲ್ಲಿ ಶಿವಕುಮಾರಸ್ವಾಮೀಜಿ, ಬೆಂಗಳೂರಿನಲ್ಲಿ ಕೆಂಪೇಗೌಡರ ಹೆಸರು ಹೀಗೆ ಕ್ಯಾಂಟೀನ್‍ಗಳಿಗೆ ಸಾಧಕರ ಹೆಸರಿಡಲು ಸರ್ಕಾರ ಇಚ್ಛಿಸಿದೆ ಎಂದು ಮೂಲಗಳು ತಿಳಿಸಿವೆ.

Share post:

Subscribe

spot_imgspot_img

Popular

More like this
Related

ಆರೋಗ್ಯಕರ ಅಡುಗೆಗೆ ಹಿತ್ತಾಳೆ ಪಾತ್ರೆಗಳು ಸೂಕ್ತವೇ? ತಿಳಿದುಕೊಳ್ಳಿ  ಪ್ರಯೋಜನಗಳು

ಆರೋಗ್ಯಕರ ಅಡುಗೆಗೆ ಹಿತ್ತಾಳೆ ಪಾತ್ರೆಗಳು ಸೂಕ್ತವೇ? ತಿಳಿದುಕೊಳ್ಳಿ  ಪ್ರಯೋಜನಗಳು ಉತ್ತಮ ಆರೋಗ್ಯಕ್ಕಾಗಿ ಪೌಷ್ಟಿಕ...

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು ಕಳ್ಳತನ

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು...

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ – ಆರ್. ಅಶೋಕ್ ಆಗ್ರಹ

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ –...

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...