ಬಿಜೆಪಿ ಈಗಾಗಲೇ ಇಂದಿರಾ ಹೆಸರು ಬದಲಿಗೆ ಮಹಾತ್ಮರೊಬ್ಬರ ಹೆಸರು ನಾಮಕಾರಣ ಮಾಡುವ ನಿರ್ಧಾರಕ್ಕೆ ಬಂದಿದೆ. ಇದನ್ನು ಪೌರಾಡಳಿತ ಸಚಿವರೂ ಆಗಿರುವ ಕಂದಾಯ ಸಚಿವ ಆರ್.ಅಶೋಕ್ ಸ್ಪಷ್ಟಪಡಿಸಿದ್ದಾರೆ.
ಅಷ್ಟೇ ಅಲ್ಲದೆ, ಈ ವಿಚಾರ ಮುನ್ನೆಲೆ ಬಂದಿದ್ದೇ ತಡ ಬಿಜೆಪಿಯ ಒಬ್ಬೊಬ್ಬ ಶಾಸಕರೂ ಒಂದೊಂದು ಹೆಸರು ಸೂಚಿಸಿ ಸಿಎಂಗೆ ಮನವಿ ಸಲ್ಲಿಸುತ್ತಿದ್ದಾರೆ. ಆದರೆ ಇದಕ್ಕೆ ಕಾಂಗ್ರೆಸ್ ಯಾವ ರೀತಿ ಪ್ರತಿಕ್ರಿಯೆ ನೀಡುತ್ತದೆ ಎಂದು ಕಾದು ನೋಡಬೇಕಿದೆ . ಇನ್ನು ಈ ವಿಚಾರದ ಬಗ್ಗೆ ಕಾಂಗ್ರೆಸ್ ವಲಯದಲ್ಲಿ ಚರ್ಚೆಯಾಗುತ್ತಿದೆ ಎಂದು ಹೇಳಲಾಗುತ್ತಿದೆ ಹಾಗೂ ಜೆಡಿಎಸ್ ವಲಯದಲ್ಲಿ ಈ ಹಿಂದೆ ಚರ್ಚೆಯಾಗಿತ್ತು .