ಇಂದು ದಾಖಲೆಯ 16ನೇ ಬಜೆಟ್ ಮಂಡಿಸಲಿರುವ ಸಿಎಂ ಸಿದ್ದರಾಮಯ್ಯ
ಬೆಂಗಳೂರು: ರಾಜ್ಯದ 2025-26ನೇ ಸಾಲಿನ ಆಯವ್ಯಯವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ವಿಧಾನಸಭೆಯಲ್ಲಿ ಮಂಡನೆ ಮಾಡಲಿದ್ದಾರೆ. ಹಣಕಾಸು ಖಾತೆಯನ್ನೂ ಹೊಂದಿರುವ ಸಿದ್ದರಾಮಯ್ಯ ಅವರು ಮಂಡನೆ ಮಾಡುತ್ತಿರುವ ದಾಖಲೆಯ 16ನೇ ಬಜೆಟ್ ಇದಾಗಿದ್ದು, ಗ್ಯಾರಂಟಿ , ಅಭಿವೃದ್ಧಿಗಾಗಿ ಅನುದಾನಗಳು, ಹೊಸ ಯೋಜನೆಗಳತ್ತ ಎಲ್ಲರ ಚಿತ್ತ ನೆಟ್ಟಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಶೇಷ ಸಂಪುಟ ಸಭೆ ಸಭೆಯಲ್ಲಿ ಬಜೆಟ್ಗೆ ಅನುಮೋದನೆ ಪಡೆದಿದ್ದಾರೆ. ಬಳಿಕ, ಸಿಎಂ ಸಿದ್ದರಾಮಯ್ಯ ಬೆಳಗ್ಗೆ 10.15ಕ್ಕೆ ಬಜೆಟ್ ಮಂಡಿಸಲಿದ್ದಾರೆ. ಕಾಲುನೋವಿನಿಂದ ಬಳಲುತ್ತಿರುವ ಸಿದ್ದರಾಮಯ್ಯ ಅವರು ವೀಲ್ ಚೇರ್ನಲ್ಲೇ ಕೂತು ಬಜೆಟ್ ಮಂಡಿಸಲಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಜೆಟ್ನಲ್ಲಿ ಜನತೆಗೆ ಸಿಹಿ ಸುದ್ದಿ ನೀಡುವ ಸಾಧ್ಯತೆ ಇದೆ ಎನ್ನಲಾಗಿದೆ. ಅಭಿವೃದ್ಧಿಗೆ ಒತ್ತು ನೀಡುತ್ತಾರಾ ಕಾದುನೋಡಬೇಕಿದೆ.
ಮೇ 2023ರಲ್ಲಿಅಧಿಕಾರಕ್ಕೆ ಬಂದ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ವಚನ ಬದ್ಧತೆ ವಾಗ್ದಾನದಂತೆ ಪಂಚ ‘ಗ್ಯಾರಂಟಿ’ಗಳಿಗೆ ಕಳೆದೆರಡು ಬಜೆಟ್‌ಗಳಲ್ಲಿಒತ್ತು ನೀಡಿತ್ತು. 20 ತಿಂಗಳ ಅವಧಿಯಲ್ಲಿಗ್ಯಾರಂಟಿಗಳಿಗೆ ಸುಮಾರು 70 ಸಾವಿರ ಕೋಟಿ ರೂ. ಸೇರಿ ನಾನಾ ಕಲ್ಯಾಣ ಕಾರ್ಯಕ್ರಮಗಳಿಗೇ 90 ಸಾವಿರ ಕೋಟಿ ವೆಚ್ಚ ಮಾಡಿದ್ದು, ಈ ಸಲದ ಬಜೆಟ್‌ನಲ್ಲಿ ಜನಪ್ರಿಯ ಮತ್ತು ಕಲ್ಯಾಣ ಕಾರ್ಯಕ್ರಮಗಳ ಜತೆಜತೆಗೆ, ಮೂಲಸೌಕರ್ಯ ಅಭಿವೃದ್ಧಿಗೂ ಒತ್ತಾಸೆ ಸಿಗುವ ನಿರೀಕ್ಷೆ ಮೂಡಿದೆ