ಇಂದು, ನಾಳೆ ರಾಜ್ಯದ ಈ ಊರುಗಳಲ್ಲಿ ಭಾರೀ ಮಳೆ

0
50

ಇಂದು ರಾಜ್ಯ ರಾಜಧಾನಿಯಲ್ಲಿ ಮುಂಜಾನೆಯಿಂದ ಬಿದಿದ್ದು, ಹೀಗಾಗಿ ಮಳೆರಾಯ ಸ್ವಲ್ಪ ಬಿಡು ಬಿಟ್ಟಿದ್ದಾನೆ ಆದರೆ ನಾಳೆ ನಗರದಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿದೆ. ಭಾರತೀಯ ಹವಾಮಾನ ಇಲಾಖೆ (IMD) ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಕರಾವಳಿ ಕರ್ನಾಟಕ ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆಯನ್ನು ಸಹ ನೀಡಿದೆ.

ಉಡುಪಿ. ಬೆಂಗಳೂರಿನಲ್ಲಿ ದಿನವಿಡೀ ಮೋಡ ಕವಿದ ವಾತಾವರಣವಿದ್ದು, 20 ರಿಂದ 25 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ.

ಕರಾವಳಿ ಕರ್ನಾಟಕ(Coastal Karnataka) ಮತ್ತು ಮಲೆನಾಡು ಜಿಲ್ಲೆಗಳಾದ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮತ್ತು ದಕ್ಷಿಣ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮಳೆ ಮುಂದುವರೆಯಲಿದೆ. ಸತತ ಮಳೆಯಿಂದಾಗಿ ಚಾಮರಾಜನಗರ ಜಿಲ್ಲೆಯ ಸುವರ್ಣಾವತಿ ಜಲಾಶಯದಲ್ಲಿ 11 ವರ್ಷಗಳ ನಂತರ ಗರಿಷ್ಠ ಮಟ್ಟ ತಲುಪಿದೆ. ಜಲಾಶಯದ ಎರಡು ಕ್ರೆಸ್ಟ್ ಗೇಟ್‌ಗಳಿಂದ 900 ಕ್ಯೂಸೆಕ್ ನೀರು ಬಿಡಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕಳೆದ ವಾರದಿಂದ ರಾಜ್ಯದ 14 ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಸುರಿಯುತ್ತಿರುವ ಭಾರೀ ಮಳೆ(Heavy Rains)ಯಿಂದಾಗಿ, ರಾಜ್ಯದಲ್ಲಿ ಇಲ್ಲಿಯವರೆಗೆ 4 ಜನರು ಸಾವನ್ನಪ್ಪಿದ್ದಾರೆ ಮತ್ತು 15 ಕ್ಕೂ ಹೆಚ್ಚು ಮನೆಗಳು ಕುಸಿದಿವೆ. ಮಂಡ್ಯ, ಮೈಸೂರು, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಚಿತ್ರದುರ್ಗ, ಶಿವಮೊಗ್ಗ, ದಾವಣಗೆರೆ, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಎಡೆಬಿಡದೆ ಮಳೆ ಸುರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ.

ಚಿತ್ರದುರ್ಗ ಜಿಲ್ಲೆಯ ಹೋಚಿ ಬೋರನಹಟ್ಟಿ ಗ್ರಾಮದಲ್ಲಿ ಭಾನುವಾರ ಮಳೆಯಿಂದಾಗಿ ಪಕ್ಕದ ಮನೆಯ ಗೋಡೆ ಕುಸಿದು ಗರ್ಭಿಣಿ ಸೇರಿದಂತೆ ನಾಲ್ವರು ಸಾವನ್ನಪ್ಪಿದ್ದಾರೆ.

ಕಳೆದ ವಾರ, ನಿರಂತರ ಮಳೆಯ ನಂತರ, ಬೆಂಗಳೂರಿನ(Bengaluru) ಹವಾಮಾನವು ಗುರುವಾರ ಸುಮಾರು 18 ಡಿಗ್ರಿ ಸೆಲ್ಸಿಯಸ್‌ಗೆ ಇಳಿದಿದೆ, ಸುಮಾರು 7 ಡಿಗ್ರಿಗಳಷ್ಟು ಇಳಿಕೆಯಾಗಿದೆ. ಬೆಂಗಳೂರು ನಗರದಲ್ಲಿ ಗುರುವಾರ ಗರಿಷ್ಠ ತಾಪಮಾನ 19.8 ಡಿಗ್ರಿ ಸೆಲ್ಸಿಯಸ್ ದಾಖಲಾಗಿದ್ದರೆ, ಕನಿಷ್ಠ ತಾಪಮಾನ 18 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ ಎಂದು ಐಎಂಡಿ ಹೇಳಿದೆ. ಬಂಗಾಳಕೊಲ್ಲಿಯಲ್ಲಿ ಉಂಟಾಗಿದ್ದ ವಾಯುಭಾರ ಕುಸಿತದ ಪರಿಣಾಮ ಚೆನ್ನೈ ಮತ್ತು ತಮಿಳುನಾಡಿನ ಕೆಲವು ಭಾಗಗಳಲ್ಲಿ ಭಾರಿ ಮಳೆ ಮತ್ತು ಪ್ರವಾಹ ಉಂಟಾಗಿದೆ. ಗುರುವಾರ ಸಂಜೆ ಉತ್ತರ ತಮಿಳುನಾಡು ಮತ್ತು ದಕ್ಷಿಣ ಆಂಧ್ರಪ್ರದೇಶ ಕರಾವಳಿಯ ನಡುವೆ ವಾಯುಭಾರ ಕುಸಿತ ಉಂಟಾಗಿದೆ.

LEAVE A REPLY

Please enter your comment!
Please enter your name here