ಬೆಂಗಳೂರು: ಬಿಬಿಎಂಪಿ ವಿಶೇಷ ಅಯುಕ್ತ ಶಿವಾನಂದ ಕಲ್ಕೆರಿ ಅವರು ಇಂದು ಬಿಬಿಎಂಪಿ ಬಜೆಟ್ ಮಂಡಿಸಲಿದ್ದಾರೆ. ಇಂದು ಟೌನ್ ಹಾಲ್ನಲ್ಲಿ ಬಜೆಟ್ ಮಂಡನೆಗೆ ಮುಹೂರ್ತ ಫಿಕ್ಸ್ ಆಗಿದೆ. ರಾಜಧಾನಿ ಬೆಂಗಳೂರಿನ ಅಭಿವೃದ್ಧಿ ಚಟುವಟಿಕೆಗಳಿಗೆ ಮೀಸಲಿರುವ ಬಿಬಿಎಂಪಿ ಬಜೆಟ್ಗೆ ಮುಹೂರ್ತ ನಿಗದಿಯಾಗಿದ್ದು, ಬೆಂಗಳೂರು ಮಹಾನಗರ ಉಸ್ತುವಾರಿಯಾಗಿರೋ ಡಿಸಿಎಂ ಡಿಕೆ ಶಿವಕುಮಾರ್ ಅವರು ಬಜೆಟ್‍ಗೆ ಒಪ್ಪಿಗೆ ಸೂಚಿಸಿದ್ದಾರೆ. 2024-25 ನೇ ಸಾಲಿನ ಬಜೆಟ್ ಮಂಡಿಸಲು ಬಿಬಿಎಂಪಿ ಸಿದ್ಧತೆ ಮಾಡಿಕೊಂಡಿದೆ. ಬೆಂಗಳೂರಿನ ಟೌನ್ ಹಾಲ್ನಲ್ಲಿ ಬಜೆಟ್ ಮಂಡನೆಯಾಗಲಿದೆ.
ರಾಜ್ಯ ಸರ್ಕಾರ 2024-25 ನೇ ಸಾಲಿನಲ್ಲಿ ಬಿಬಿಎಂಪಿಗೆ 3500 ಕೋಟಿ ಅನುದಾನ ನೀಡಿದೆ. ರಾಜ್ಯ ಸರ್ಕಾರದ 3500 ಕೋಟಿ ಅನುದಾನ, ಬಿಬಿಎಂಪಿ 6 ಸಾವಿರ ಕೋಟಿ ಅದಾಯ ಸೇರಿದಂತೆ ಹೊಸ ಜಾಹೀರಾತು ಕಾಯ್ದೆಯಿಂದ ಸುಮಾರು 2 ಸಾವಿರ ಕೋಟಿ ರೂಪಾಯಿ ವಿವಿಧ ಮೂಲಗಳಿಂದ ಕ್ರೂಢೀಕರಿಸಿ 12 ಸಾವಿರ ಕೋಟಿ ಬಜೆಟ್ ಮಂಡನೆ ಅಗುವ ಸಾಧ್ಯತೆ ಇದೆ. ಸದ್ಯ ಡಿಸಿಎಂ ಡಿಕೆ ಶಿವಕುಮಾರ್ ಕನಸಿನ ಬ್ರ್ಯಾಂಡ್ ಬೆಂಗಳೂರಿನ ಪರಿಕಲ್ಪನೆಗೆ ಜೀವ ನೀಡುವ ಹಿನ್ನೆಲೆ ಪಾಲಿಕೆ ಬಜೆಟ್ ಮೇಲೆ ಸಾಕಷ್ಟು ನಿರೀಕ್ಷೆ ಹೆಚ್ಚಾಗಿದೆ.
ಇಂದು ಬಿಬಿಎಂಪಿಯ 2024-25ನೇ ಸಾಲಿನ ಬಜೆಟ್ ಮಂಡನೆ.!
Date: