No menu items!
3.1 C
Munich
Wednesday, May 13, 2026

ಇಂದು ಮಧ್ಯರಾತ್ರಿ ಜರ್ಮನ್ ನಿಂದ ಬೆಂಗಳೂರಿಗೆ ಪ್ರಜ್ವಲ್..!

Must read

ಬೆಂಗಳೂರು: ವಿಶ್ವ ಮಟ್ಟದಲ್ಲಿ ಸುದ್ದಿಯಾಗ್ತಿದ್ರೂ ಸುಮ್ನಿದ್ದ ಸಂಸದ ಪ್ರಜ್ವಲ್ ರೇವಣ್ಣ ಕೊನೆಗೆ ಒಂದು ವಿಡಿಯೋ ಬಿಟ್ಟು ಪ್ರತ್ಯೆಕ್ಷವಾಗಿದ್ರು.. ಬೆಂಗಳೂರಿಗೆ ಬರ್ತೀನಿ ಅಂದಿದ್ರು.
ಇದಕ್ಕೆ ಸಂಬಧಪಟ್ಟಂತೆ ಇಂದು ಬೆಂಗಳೂರಿಗೆ ಪ್ರಜ್ವಲ್ ರೇವಣ್ಣ ಆಗಮಿಸಲಿದ್ದಾರೆ. ಲುಫ್ತಾನ್ಸಾ ಏರ್ಲೈನ್ಸ್ನಲ್ಲಿ ಬ್ಯುಸಿನೆಸ್ ಕ್ಲಾಸ್ ಟಿಕೆಟ್ ಬುಕ್ ಮಾಡಿಕೊಂಡಿರುವ ಪ್ರಜ್ವಲ್ ರೇವಣ್ಣ, ಇಂದು ವಿದೇಶದಿಂದ ಹೊರಟು ಮಧ್ಯರಾತ್ರಿ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿಯಲಿದ್ದಾರೆ.
ಇನ್ನು ಪ್ರಜ್ವಲ್‌ ಬರ್ತಿದ್ದಂತೆ ವಶಕ್ಕೆ ಪಡೆದು ವಿಚಾರಣೆ ನಡೆಸಲು ಎಸ್‌ಐಟಿ ಅಧಿಕಾರಿಗಳು ಸಕಲ ಸಿದ್ಧತೆ ಮಾಡಿಕೊಂಡಿದ್ದಾರೆ.
ಪೆನ್‌ಡ್ರೈವ್ ಪ್ರಕರಣದಿಂದಾಗಿ ತಲೆ ಮರೆಸಿಕೊಂಡಿರೋ ಪ್ರಜ್ವಲ್‌ ರೇವಣ್ಣ ತನ್ನ ಮೇಲೆ ದಾಖಲಾಗಿರುವ ಎಲ್ಲಾ ಪ್ರಕರಣಗಳಿಗೂ ಜಾಮೀನು ನೀಡುವಂತೆ ಕೋರಿ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದಾರೆ. ತಮ್ಮ ಮೇಲೆ ಸಿಐಡಿಯಲ್ಲಿ ದಾಖಲಾದ ಎರಡು ಪ್ರಕರಣ, ಹೊಳೆನರಸೀಪುರ ಟೌನ್ ಠಾಣೆಯಲ್ಲಿ ದಾಖಲಾದ ಒಂದು ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನಿಗೆ ವಕೀಲರ ಮೂಲಕ ಪ್ರಜ್ವಲ್ ಅರ್ಜಿ ಸಲ್ಲಿಸಿದ್ದಾರೆ. ಅರ್ಜಿ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ನ್ಯಾಯಾಲಯ ಮೇ 31ಕ್ಕೆ ಮುಂದೂಡಿದೆ
ಪ್ರಜ್ವಲ್ ರೇವಣ್ಣ ನಿವಾಸದಲ್ಲಿ ಎಸ್ಐಟಿ ಹಾಗೂ ಎಫ್ಎಸ್ಎಲ್ ಅಧಿಕಾರಿಗಳು ನಿನ್ನೆ ಸತತ 10 ಗಂಟೆಗಳ ಕಾಲ ಪರಿಶೀಲನೆ ನಡೆಸಿದ್ದರು. ಪ್ರಜ್ವಲ್‌ ರೇವಣ್ಣ ಮಲಗುತ್ತಿದ್ದ ಕೊಠಡಿಯಲ್ಲಿದ್ದ ಹಾಸಿಗೆ, ದಿಂಬು, ಬೆಡ್ಶೀಟ್ಗಳನ್ನೆಲ್ಲಾ ಕೊಂಡೊಯ್ದಿದ್ದಾರೆ. ಮೇ 31ಕ್ಕೆ ಪ್ರಜ್ವಲ್‌ ರೇವಣ್ಣ ವಾಪಾಸ್ ಬರುವ ಹೇಳಿಕೆ ನೀಡಿದ ಬೆನ್ನಲ್ಲೇ ಪೂರಕ ಸಾಕ್ಷಿಗಳನ್ನ ಎಸ್ಐಟಿ ಕಲೆ ಹಾಕ್ತಿದೆ.
ಇನ್ನೊಂದೆಡೆ ನವೀನ್‌ಗೌಡ ಹಾಗೂ ಚೇತನ್‌ಗೌಡರನ್ನು ನಿನ್ನೆಯೇ ಹಾಸನಕ್ಕೆ ಕರೆತಂದಿದ್ದ ಎಸ್ಐಟಿ ಅಧಿಕಾರಿಗಳು ಕೋರ್ಟ್‌ ಮುಂದೆ ಹಾಜರುಪಡಿಸಿದ್ದರು. ಆರೋಪಿಗಳಿಗೆ ಮೂರು ದಿನ ಎಸ್‌ಐಟಿ ಕಸ್ಟಡಿಗೆ ನೀಡಿರೋ ಕೋರ್ಟ್‌ ಜೂನ್ 1 ರ ಶನಿವಾರ ಸಂಜೆ 4:30 ಕ್ಕೆ ಕೋರ್ಟ್ ಗೆ ಹಾಜರುಪಡಿಸಲು ಆದೇಶಿಸಿದೆ.
ಅಶ್ಲೀಲ ವಿಡಿಯೋ ಕೇಸ್ ಗೆ ಸಂಬಧಪಟ್ಟಂತೆ ಇಂದು ಬೆಂಗಳೂರಿಗೆ ಪ್ರಜ್ವಲ್ ರೇವಣ್ಣ ಆಗಮಿಸಲಿದ್ದಾರೆ.

- Advertisement -spot_img

More articles

- Advertisement -spot_img

Latest article