ಇಂದು ರಾಜ್ಯಕ್ಕೆ ರಾಷ್ಟ್ರಪತಿ: ಮಳವಳ್ಳಿ ಕಾರ್ಯಕ್ರಮದಲ್ಲಿ ಭಾಗಿ

Date:

ಇಂದು ರಾಜ್ಯಕ್ಕೆ ರಾಷ್ಟ್ರಪತಿ: ಮಳವಳ್ಳಿ ಕಾರ್ಯಕ್ರಮದಲ್ಲಿ ಭಾಗಿ

ಮಂಡ್ಯ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಇಂದು ಮಳವಳ್ಳಿಯಲ್ಲಿ ನಡೆಯಲಿರುವ ಶಿವರಾತ್ರೀಶ್ವರ ಶ್ರೀವಯೋಗಿಗಳ 1066ನೇ ಜಯಂತಿ ಮಹೋತ್ಸವದಲ್ಲಿ ಭಾಗಿಯಾಗಲಿದ್ದಾರೆ.

ಮಳವಳ್ಳಿ ಪಟ್ಟಣದ ಶಾಂತಿ ಕಾಲೇಜು ಮುಂಭಾಗದಲ್ಲಿ ಆಯೋಜಿಸಿರುವ ವೇದಿಕೆ ಕಾರ್ಯಕ್ರಮದಲ್ಲಿ ರಾಷ್ಟ್ರಪತಿಗಳು ಪಾಲ್ಗೊಳ್ಳಲಿದ್ದಾರೆ. ಸುತ್ತೂರು ಮಠದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಅವರ ನೇತೃತ್ವದಲ್ಲಿ ಕಾರ್ಯಕ್ರಮ ನಡೆಯಲಿದೆ. ಇಂದಿನಿಂದ ಡಿಸೆಂಬರ್‌ 22ರವರೆಗೆ ಏಳು ದಿನಗಳ ಕಾಲ ಬೃಹತ್ ಸಮಾರಂಭ ಆಯೋಜಿಸಲಾಗಿದೆ.

ಜಯಂತಿ ಮಹೋತ್ಸವದ ಹಿನ್ನೆಲೆ ಪ್ರವಾಸಿ ಮಂದಿರ ಹಾಗೂ ತಾಲೂಕು ಆಸ್ಪತ್ರೆಯಲ್ಲಿ 24 ಗಂಟೆಗಳೂ ಆರೋಗ್ಯ ಸಿಬ್ಬಂದಿ ಲಭ್ಯವಿರಬೇಕು. ತುರ್ತು ಚಿಕಿತ್ಸೆಗೆ ಅಗತ್ಯವಿರುವ ಎಲ್ಲಾ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳು ಡಾ. ಸಂಜಯ್ ಹಾಗೂ ತಾಲೂಕು ವೈದ್ಯಾಧಿಕಾರಿ ಡಾ. ವೀರಭದ್ರಪ್ಪ ಅವರಿಗೆ ಸೂಚನೆ ನೀಡಿದ್ದಾರೆ.

ರಾಷ್ಟ್ರಪತಿಗಳ ಆಗಮನದ ಹಿನ್ನೆಲೆಯಲ್ಲಿ ಮಳವಳ್ಳಿಯಲ್ಲಿ ಕಟ್ಟುನಿಟ್ಟಿನ ಭದ್ರತಾ ವ್ಯವಸ್ಥೆ ಕೈಗೊಳ್ಳಲಾಗಿದೆ. ಡಿಸೆಂಬರ್‌ 14ರಂದು ಭದ್ರತಾ ಪಡೆ ಅಧಿಕಾರಿಗಳು ಮಳವಳ್ಳಿಯ ಮಾರೆಹಳ್ಳಿ ಬಳಿ ನಿರ್ಮಿಸಲಾಗಿರುವ ಹೆಲಿಪ್ಯಾಡ್‌ನಲ್ಲಿ ಹೆಲಿಕಾಪ್ಟರ್ ಅಣಕು ಪ್ರದರ್ಶನ ನಡೆಸಿದ್ದರು.

Share post:

Subscribe

spot_imgspot_img

Popular

More like this
Related

ನ್ಯಾಷನಲ್​ ಹೆರಾಲ್ಡ್​ ಪ್ರಕರಣ: ಸೋನಿಯಾಗಾಂಧಿ, ರಾಹುಲ್ʼ​ಗೆ ರಿಲೀಫ್

ನ್ಯಾಷನಲ್​ ಹೆರಾಲ್ಡ್​ ಪ್ರಕರಣ: ಸೋನಿಯಾಗಾಂಧಿ, ರಾಹುಲ್ʼ​ಗೆ ರಿಲೀಫ್ ನವದೆಹಲಿ: ನ್ಯಾಷನಲ್ ಹೆರಾಲ್ಡ್ ಹಣ...

ಅಪ್ಪಿತಪ್ಪಿಯೂ ಚಳಿಗಾಲದಲ್ಲಿ ಗರ್ಭಿಣಿಯರು ಈ ತಪ್ಪುಗಳನ್ನು ಮಾಡಬೇಡಿ!

ಅಪ್ಪಿತಪ್ಪಿಯೂ ಚಳಿಗಾಲದಲ್ಲಿ ಗರ್ಭಿಣಿಯರು ಈ ತಪ್ಪುಗಳನ್ನು ಮಾಡಬೇಡಿ! ಇತ್ತೀಚಿನ ದಿನಗಳಲ್ಲಿ ಚಳಿ ದಿನದಿಂದ...

ಇಂದು ಶಾಮನೂರು ಶಿವಶಂಕರಪ್ಪ ಅಂತಿಮ ದರ್ಶನ: ಸಂಜೆ ಪತ್ನಿ ಸಮಾಧಿ ಬಳಿ ಅಂತ್ಯಕ್ರಿಯೆ 

ಇಂದು ಶಾಮನೂರು ಶಿವಶಂಕರಪ್ಪ ಅಂತಿಮ ದರ್ಶನ: ಸಂಜೆ ಪತ್ನಿ ಸಮಾಧಿ ಬಳಿ...

ಕಾಂಗ್ರೆಸ್​​​​​ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ನಿಧನ

ಕಾಂಗ್ರೆಸ್​​​​​ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ನಿಧನ ಬೆಂಗಳೂರು: ದಾವಣಗೆರೆ ದಕ್ಷಿಣ ಕ್ಷೇತ್ರದ...