No menu items!
17 C
Munich
Friday, July 24, 2026

ಇಂದು ರಾಜ್ಯದ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟ

Must read

ಬೆಂಗಳೂರು: ರಾಜ್ಯದ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಇಂದು ಪ್ರಕಟವಾಗಲಿದೆ. ಇಂದು ಬೆಳಿಗ್ಗೆ ಬೆಳಗ್ಗೆ 10 ಗಂಟೆಗೆ ಪ್ರಕಟಿಸಲಾಗುತ್ತದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ತಿಳಿಸಿದೆ.

ಈ ಬಗ್ಗೆ ಶಿಕ್ಷಣ ಇಲಾಖೆ ಸುದ್ದಿಗೋಷ್ಠಿ ನಡೆಸಲಿದ್ದು, 11ಗಂಟೆಗೆ ನಂತರ https://karresults.nic.in ಅಥವಾ pue.kar.nic ಅಧಿಕೃತ ವೆಬ್‌ಸೈಟ್‌ನಲ್ಲಿ ವಿದ್ಯಾರ್ಥಿಗಳು ತಮ್ಮ ಫಲಿತಾಂಶವನ್ನು ವೀಕ್ಷಿಸಬಹುದಾಗಿದೆ. ಮಾರ್ಚ್ 1ರಿಂದ ಮಾರ್ಚ್ 22ರವರೆಗೆ ನಡೆದಿದ್ದ ದ್ವಿತೀಯ ಪಿಯುಸಿ ಪರೀಕ್ಷೆ ನಡೆದಿತ್ತು. ಇದರ ಫಲಿತಾಂಶವನ್ನು ಇಂದು ಪ್ರಕಟಿಸಲಾಗುತ್ತಿದೆ.

ವಿಜ್ಞಾನ, ವಾಣಿಜ್ಯ, ಕಲೆ ವಿಭಾಗ ಸೇರಿದಂತೆ ಎಲ್ಲಾ ವಿಭಾಗಗಳ ಫಲಿತಾಂಶವನ್ನು ಏಕಕಾಲದಲ್ಲಿ ಪ್ರಕಟಿಸಲಾಗುತ್ತಿದೆ ಎಂದು ಶಿಕ್ಷಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ. 2024ರ ದ್ವಿತೀಯ ಪಿಯುಸಿ ಪರೀಕ್ಷೆಗೆ ಒಟ್ಟು 6.98 ಲಕ್ಷ ವಿದ್ಯಾರ್ಥಿಗಳು ಹಾಜರಾಗಿದ್ದರು. ಈ ಪೈಕಿ 3.3 ಲಕ್ಷ ವಿದ್ಯಾರ್ಥಿಗಳಾಗಿದ್ದು, 3.6 ಲಕ್ಷ ವಿದ್ಯಾರ್ಥಿನಿಯರಾಗಿದ್ದಾರೆ.

- Advertisement -spot_img

More articles

- Advertisement -spot_img

Latest article