ಲೋಕಸಭಾ ಚುನಾವಣೆಯ ಬಹಿರಂಗ ಪ್ರಚಾರ ಇಂದು ಸಂಜೆ 5 ಗಂಟೆಗೆ ಮುಕ್ತಾಯವಾಗಲಿದೆ ಇದರ ಹಿನ್ನೆಲೆಯಲ್ಲಿ ಇಂದು ಸಂಜೆಯಿಂದ ಮುಂದಿನ ಮೂರು ದಿನಗಳ ಕಾಲ ಮದ್ಯ ಮಾರಾಟ ಸಂಪೂರ್ಣ ಬಂದ್ ಆಗಲಿದೆ.
ರಾಜ್ಯದಲ್ಲಿ ಮೊದಲ ಹಂತದ ಚುನಾವಣೆಗಾಗಿ ಭಾಗವಾಗಿ ಇಂದಿನಿಂದ ಮೂರು ದಿನಗಳ ಕಾಲ ಸ್ಥಗಿತವಾದರೆ, ದ್ವಿತೀಯ ಹಂತದ ಚುನಾವಣೆಯ ಸಂದರ್ಭದಲ್ಲಿ ಅಂದರೆ ದಿನಾಂಕ 23 ರಿಂದ 24ನವರೆಗೆ ಬಾರ್ ಬಂದ್ ಮಾಡುವಂತೆ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.
ಇಂದಿನಿಂದ ಮಧ್ಯ ಮಾರಾಟ ಸ್ಥಗಿತವಾಗುವ ಸ್ಥಳಗಳೆಂದರೆ ದಕ್ಷಿಣ ಕನ್ನಡ, ಉಡುಪಿ- ಚಿಕ್ಕಮಗಳೂರು, ಹಾಸನ, ಚಿತ್ರದುರ್ಗ, ತುಮಕೂರು, ಮಂಡ್ಯ, ಮೈಸೂರು, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ಉತ್ತರ, ಬೆಂಗಳೂರು ಕೇಂದ್ರ, ಬೆಂಗಳೂರು ದಕ್ಷಿಣ, ಚಿಕ್ಕಬಳ್ಳಾಪುರ ಹಾಗೂ ಕೋಲಾರದಲ್ಲಿ ಮತದಾನ ಮುಕ್ತಾಯಕ್ಕೆ 48 ತಾಸು ಮುನ್ನ ಬಹಿರಂಗ ಪ್ರಚಾರಕ್ಕೆ ತೆರೆ ಬೀಳಲಿದೆ ಮಧ್ಯ ಮಾರಾಟವೂ ಸಹ ಇರುವುದಿಲ್ಲ.