ಬೆಂಗಳೂರು: ಕಿಡ್ನಾಪ್ ಪ್ರಕರಣ ಸಂಬಂಧ ಮಾಜಿ ಸಚಿವರು ಏಳು ದಿನಗಳ ನ್ಯಾಯಾಂಗ ಬಂಧನದಲ್ಲಿದ್ದಾರೆ. ಇಂದು ಕೋರ್ಟ್ ರೇವಣ್ಣ ಜಾಮೀನು ಅರ್ಜಿ ವಿಚಾರಣೆ ನಡೆಸಲಿದೆ. ಎಸ್ ಪಿಪಿ ಜೈನಾ ಕೊಥಾರಿ ಹಾಗೂ ಆಶೋಕ್ ನಾಯಕ್ ಅವರು ವಿಶೇಷ ತನಿಖಾ ತಂಡ (SIT) ಪರ ವಾದ ಮಂಡಿಸಲಿದ್ದು, ಇತ್ತ ಹಿರಿಯ ವಕೀಲ ಸಿ.ವಿ ನಾಗೇಶ್ ಅವರು ರೇವಣ್ಣ ಪರ ವಾದ ಮಂಡಿಸಲಿದ್ದಾರೆ. ಈಗಾಗಲೇ ಜಾಮೀನಿಗೆ ಎಸ್ಐಟಿ ಆಕ್ಷೇಪಣೆ ಸಲ್ಲಿಸಿದೆ.
ಸಂತ್ರಸ್ತೆ ಕಿಡ್ನಾಪ್ ಸಂಬಂಧ ಹೆಚ್.ಡಿ ರೇವಣ್ಣ ಹಾಗೂ ಸತೀಶ್ ಬಾಬಣ್ಣ ವಿರುದ್ಧ ಕೆ.ಆರ್ ನಗರ ಠಾಣೆಯಲ್ಲಿ ಕೇಸ್ ದಾಖಲಾಗಿದೆ. ಈ ಪ್ರಕರಣದಲ್ಲಿ ರೇವಣ್ಣ ಮೊದಲನೇ ಆರೋಪಿಯಾಗಿದ್ದಾರೆ. ಕಿಡ್ನಾಪ್ ಪ್ರಕರಣದ ತನಿಖೆ ನಡೆಸುತ್ತಿರೋ ಎಸ್ಐಟಿ, ರೇವಣ್ಣರನ್ನ ನಾಲ್ಕು ದಿನ ಕಸ್ಟಡಿಗೆ ಪಡೆದು ವಿಚಾರಣೆ ನಡೆಸಿದೆ.
ವಿಚಾರಣೆ ಬಳಿಕ ರೇವಣ್ಣ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು. ಮಾಜಿ ಸಚಿವರು ಕಳೆದ ಬುಧವಾರ ಪರಪ್ಪನ ಆಗ್ರಹಾರ ಜೈಲು ಸೇರಿದ್ದರು. ಇಂದು ಜಾಮೀನು ಅರ್ಜಿ ವಿಚಾರಣೆ ನಡೆಯಲಿದ್ದು, ರೇವಣ್ಣಾಗೆ ಜೈಲಿನಿಂದ ಮುಕ್ತಿ ಸಿಗುತ್ತಾ ಎಂಬುದನ್ನು ಕಾದು ನೋಡಬೇಕಿದೆ.
ಇಂದು ಹೆಚ್.ಡಿ ರೇವಣ್ಣ ಜಾಮೀನು ಅರ್ಜಿ ವಿಚಾರಣೆ.!
Date:






