ಇಂದು CSK vs RCB ನಡುವೆ ಡು ಆರ್ ಡೈ ಮ್ಯಾಚ್.!

Date:

ಬೆಂಗಳೂರು: ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಹಾಗೂ ಚೆನ್ನೈ ಸೂಪರ್ಕಿಂಗ್ಸ್ ನಡುವೆ ಐಪಿಎಲ್‌ ಕ್ರಿಕೆಟ್‌ ಪಂದ್ಯಾವಳಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣ ಸುತ್ತಮುತ್ತಲಿನ ಕೆಲವು ರಸ್ತೆಗಳಲ್ಲಿ ವಾಹನ ನಿಲುಗಡೆ ನಿರ್ಬಂಧ ವಿಧಿಸಲಾಗಿದೆ. ಸಂಚಾರ ದಟ್ಟಣೆ ಮತ್ತು ಟ್ರಾಫಿಕ್ ಸಮಸ್ಯೆ ನಿವಾರಣೆಗಾಗಿ ಬೆಂಗಳೂರು ಸಂಚಾರ ಪೊಲೀಸರು ಮಾರ್ಗಸೂಚಿ ಬಿಡುಗಡೆ ಮಾಡಿದ್ದಾರೆ.
ಪಂದ್ಯಕ್ಕೆ ತೆರಳುವವರ ವಾಹನ ಪಾರ್ಕಿಂಗ್ಗೆ ಎಲ್ಲೆಲ್ಲಿ ಅವಕಾಶವಿದೆ? ಎಲ್ಲೆಲ್ಲಿ ವಾಹನ ನಿಲುಗಡೆಗೆ ನಿಷೇಧವಿದೆ ಮತ್ತು ಎಲ್ಲೆಲ್ಲಿ ವಾಹನ ಸಂಚಾರ ನಿಷೇಧವನ್ನು ಟ್ರಾಫಿಕ್ ಪೊಲೀಸರು ತಿಳಿಸಿದ್ದಾರೆ.
ಪಾರ್ಕಿಂಗ್ ನಿಷೇಧ
ಶನಿವಾರ ಮಧ್ಯಾಹ್ನ 3 ಗಂಟೆಯಿಂದ ರಾತ್ರಿ 11 ಗಂಟೆವರೆಗೆ ಚಿನ್ನಸ್ವಾಮಿ ಕ್ರೀಡಾಂಗಣ ಸುತ್ತಮುತ್ತಲಿನ ರಸ್ತೆಗಳಲ್ಲಿ ಪಾರ್ಕಿಂಗ್ ನಿಷೇಧಿಸಲಾಗಿದೆ. ಕ್ವೀನ್ಸ್ ರಸ್ತೆ, ಎಂ.ಜಿ.ರಸ್ತೆ, ಕಬ್ಬನ್ ರಸ್ತೆ, ರಾಜಭವನ, ಮ್ಯೂಸಿಯಂ ರಸ್ತೆ, ಸೆಂಟ್ರಲ್ ಸ್ಟ್ರೀಟ್ ರಸ್ತೆ, ಸೇಂಟ್ ಮಾರ್ಕ್ ರಸ್ತೆ, ಕಸ್ತೂರಿ ಬಾ ರೋಡ್, ಟ್ರಿನಿಟಿ ವೃತ್ತ, ಲ್ಯಾವೆಲ್ಲೆ ರಸ್ತೆ, ನೃಪತುಂಗ ರಸ್ತೆಯಲ್ಲಿ ಪಾರ್ಕಿಂಗ್ ನಿಷೇಧಿಸಲಾಗಿದೆ.
ಪಾರ್ಕಿಂಗ್ಗೆ ಅವಕಾಶ
ಪಂದ್ಯ ನೋಡಲು ಆಗಮಿಸುವ ಜನರಿಗೆ ಬೇರೆಡೆ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ. ಸೇಂಟ್ ಜೋಸೆಫ್ ಇಂಡಿಯನ್ ಸ್ಕೂಲ್ ಮೈದಾನ, ಕಿಂಗ್ಸ್ ರಸ್ತೆ, ಶಿವಾಜಿನಗರ ಬಸ್ ನಿಲ್ದಾಣ ಮೊದಲನೇ ಮಹಡಿಯಲ್ಲಿ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ. ಇನ್ನು ಬೆಂಗಳೂರು ಸಂಚಾರಿ ಪೊಲೀಸರು ಮೈದಾನದ ಸುತ್ತಮುತ್ತ ಸಂಚಾರ ವಾಹನ ನಿಷೇಧಿಸಿದ್ದಾರೆ.
ಬಿಗಿ ಭದ್ರತೆ
ಪಂದ್ಯಕ್ಕಾಗಿ ಓರ್ವ ಹೆಚ್ಚುವರಿ ಪೊಲೀಸ್ ಆಯುಕ್ತ ಸತೀಶ್ ಕುಮಾರ್ ನೇತೃತ್ವದಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಮೂವರು ಡಿಸಿಪಿ, 20 ಎಸಿಪಿ, 50 ಇನ್ಸ್ಪೆಕ್ಟರ್ ಸೇರಿದಂತೆ ಒಂದು ಸಾವಿರ ಸಿವಿಲ್ ಪೊಲೀಸರನ್ನು ನಿಯೋಜಿಸಲಾಗಿದೆ. ಓರ್ವ ಟ್ರಾಫಿಕ್ ಜಂಟಿ ಪೊಲೀಸ್ ಆಯುಕ್ತರು, ಇಬ್ಬರು ಟ್ರಾಫಿಕ್ ಡಿಸಿಪಿ, ಸೇರಿ 200 ಟ್ರಾಫಿಕ್ ಪೊಲೀಸರನ್ನು ನಿಯೋಜಿಸಲಾಗಿದೆ. ಸ್ಟೇಡಿಯಂ ಸುತ್ತಮುತ್ತ ಮಫ್ತಿಯಲ್ಲೂ ಪೊಲೀಸರನ್ನು ನಿಯೋಜಿಸಲಾಗಿದೆ.

Share post:

Subscribe

spot_imgspot_img

Popular

More like this
Related

ಕೂಡಲಸಂಗಮ ಪಂಚಮಸಾಲಿ ಪೀಠಾಧ್ಯಕ್ಷ ಸ್ಥಾನದಿಂದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಉಚ್ಚಾಟನೆ

ಕೂಡಲಸಂಗಮ ಪಂಚಮಸಾಲಿ ಪೀಠಾಧ್ಯಕ್ಷ ಸ್ಥಾನದಿಂದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಉಚ್ಚಾಟನೆ ಬಾಗಲಕೋಟೆ: ಕೂಡಲಸಂಗಮ...

ಪ್ರಧಾನಿ ಮೋದಿ ಇಂದು ಸಂಜೆ ರಾಷ್ಟ್ರವನ್ನುದ್ದೇಶಿಸಿ ಭಾಷಣ

ಪ್ರಧಾನಿ ಮೋದಿ ಇಂದು ಸಂಜೆ ರಾಷ್ಟ್ರವನ್ನುದ್ದೇಶಿಸಿ ಭಾಷಣ ನವದೆಹಲಿ: ಪ್ರಧಾನಿ ನರೇಂದ್ರ ಮೋದಿ...

ಒಕ್ಕಲಿಗ ಸಮಾಜದ ಅಭಿಪ್ರಾಯದ ಬಗ್ಗೆ ಮಾತನಾಡಲು ಹೋಗುವುದಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

ಒಕ್ಕಲಿಗ ಸಮಾಜದ ಅಭಿಪ್ರಾಯದ ಬಗ್ಗೆ ಮಾತನಾಡಲು ಹೋಗುವುದಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್ ಬೆಂಗಳೂರು:...

ಬಿಳಿ, ಕೆಂಪು, ಗುಳ್ಳೆಗಳು: ನಾಲಿಗೆಯ ಬದಲಾವಣೆಗಳ ಅರ್ಥ ಏನು?

ಬಿಳಿ, ಕೆಂಪು, ಗುಳ್ಳೆಗಳು: ನಾಲಿಗೆಯ ಬದಲಾವಣೆಗಳ ಅರ್ಥ ಏನು? ಆಹಾರ ಸರಿಯಾಗಿ ಜೀರ್ಣವಾದರೆ...