ಇಂದು RCB Vs RR ರೋಚಕ ಪಂದ್ಯ: ಗ್ರೀನ್ ಜರ್ಸಿಯಲ್ಲಿ ಕಣಕ್ಕಿಳಿಯಲಿದೆ ಬೆಂಗಳೂರು!
ಇಂದು ಕ್ರಿಕೆಟ್ ಅಭಿಮಾನಿಗಳಿಗೆ ಸಂಭ್ರಮ. ಐಪಿಎಲ್ 2025 ರ ಭಾಗವಾಗಿ ಇಂದು ಎರಡು ಹೈ-ವೋಲ್ಟೇಜ್ ಪಂದ್ಯಗಳು ನಡೆಯಲಿವೆ. ಮೊದಲ ಪಂದ್ಯ ರಾಜಸ್ಥಾನ ರಾಯಲ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವೆ ನಡೆಯಲಿದೆ. ಜೈಪುರದ ಸವಾಯ್ ಮಾನ್ಸಿಂಗ್ ಕ್ರೀಡಾಂಗಣದಲ್ಲಿ ಮಧ್ಯಾಹ್ನ 3:30 ಕ್ಕೆ ಪಂದ್ಯ ಆರಂಭವಾಗಲಿದೆ.
ಕಳೆದ ಪಂದ್ಯದ ಸೋಲನ್ನ ಮರೆಯಲು ಸಜ್ಜಾಗಿರೋ ಆರ್ಸಿಬಿ, ಇಂದು ರಾಜಸ್ಥಾನ್ ರಾಯಲ್ಸ್ ತಂಡವನ್ನ ಅವರದ್ದೇ ನೆಲದಲ್ಲಿ ಮಣಿಸಿ, ಅಭಿಮಾನಿಗಳ ಮುಖದಲ್ಲಿ ಮಂದಹಾಸ ಮೂಡಿಸಲು ಹೊರಟಿದೆ. ಇನ್ನೊಂದೆಡೆ ರಾಜಸ್ಥಾನ್ ರಾಯಲ್ಸ್ನ ಯುವ ಪಡೆ, ರಾಹುಲ್ ದ್ರಾವಿಡ್ ಅವರ ಮಾರ್ಗದರ್ಶನದಲ್ಲಿ ಇಂದು ಬೆಂಗಳೂರು ತಂಡವನ್ನ ಮಣಿಸಲು ಪ್ರತ್ಯೇಕ ಪ್ಲಾನ್ ಮೂಲಕ ಕಣಕ್ಕಿಳಿಯಲು ಸಜ್ಜಾಗಿದೆ.
ಉಭಯ ತಂಡಗಳು
ರಾಜಸ್ಥಾನ್ ರಾಯಲ್ಸ್: ಯಶಸ್ವಿ ಜೈಸ್ವಾಲ್, ಸಂಜು ಸ್ಯಾಮ್ಸನ್, ಧ್ರುವ್ ಜುರೆಲ್, ರಿಯಾನ್ ಪರಾಗ್, ಶಿಮ್ರೋನ್ ಹೆಟ್ಮೆಯರ್, ಸಂದೀಪ್ ಶರ್ಮಾ, ಜೋಫ್ರಾ ಆರ್ಚರ್, ವನಿಂದು ಹಸರಂಗ, ಮಹೇಶ್ ತೀಕ್ಷಣ, ಆಕಾಶ್ ಮಧ್ವಲ್, ಕುಮಾರ್ ಕಾರ್ತಿಕೇಯ, ತುಷಾರ್ ದೇಶಪಾಂಡೆ, ನಿತೀಶ್ ರಾಣಾ, ಫಜಲ್ಹಕ್ ಫಾರೂಕಿ, ಶುಭಂ ದುಬೆ, ಯುಧ್ವೀರ್ ಚರಕ್, ವೈಭವ್ ಸೂರ್ಯವಂಶಿ, ಕುನಾಲ್ ರಾಥೋಡ್, ಕ್ವೆನಾ ಮಫಕಾ, ಅಶೋಕ್ ಶರ್ಮಾ
ರಾಯಲ್ ಚಾಲೆಂಜರ್ಸ್ ಬೆಂಗಳೂರು: ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ಯಶ್ ದಯಾಳ್, ಫಿಲ್ ಸಾಲ್ಟ್, ಜಿತೇಶ್ ಶರ್ಮಾ, ಲಿಯಾಮ್ ಲಿವಿಂಗ್‌ಸ್ಟೋನ್, ಜೋಶ್ ಹೇಜಲ್‌ವುಡ್, ರಸಿಖ್ ದಾರ್, ಸುಯಶ್ ಶರ್ಮಾ, ಭುವನೇಶ್ವರ್ ಕುಮಾರ್, ಕೃನಾಲ್ ಪಾಂಡ್ಯ, ಸ್ವಪ್ನಿಲ್ ಸಿಂಗ್, ಟಿಮ್ ಡೇವಿಡ್, ರೊಮಾರಿಯೊ ಶೆಫರ್ಡ್, ನುವಾನ್ ತುಷಾರ, ಜೇಕಬ್ ಬೆಥೆಲ್, ಮನೋಜ್ ಭಾಂಡಗೆ, ದೇವದತ್ತ್ ಪಡಿಕ್ಕಲ್, ಸ್ವಸ್ತಿಕ್ ಚಿಕಾರಾ, ಲುಂಗಿ ಎನ್‌ಗಿಡಿ, ಅಭಿನಂದನ್ ಸಿಂಗ್, ಮೋಹಿತ್ ರಾಠಿ.