ಡಿಕೆ ಶಿವಕುಮಾರ್ ಅವರು ಅಕ್ರಮ ಹಣ ಹೊಂದಿರುವ ಆರೋಪದ ಅಡಿಯಲ್ಲಿ ಇಡಿ ಅಧಿಕಾರಿಗಳು ಅವರನ್ನು ವಿಚಾರಣೆ ನಡೆಸಿ ಇದೀಗ ಜೈಲಿನಲ್ಲಿ ಇರಿಸಿದ್ದಾರೆ. ಇನ್ನು ಡಿಕೆ ಶಿವಕುಮಾರ್ ಅವರ ಅಕ್ರಮ ಹಣದ ವಿಚಾರಣೆಯ ವೇಳೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಹೆಸರು ಸಹ ಪ್ರಸ್ತಾಪವಾಗಿದ್ದು ಇದೀಗ ಅವರನ್ನೂ ಸಹ ಇಡಿ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ. ಇನ್ನು ಲಕ್ಷ್ಮಿ ಹೆಬ್ಬಾಳ್ಕರ್ ಅವರನ್ನು ಇಡಿ ಅಧಿಕಾರಿಗಳು ವಿಚಾರಣೆ ನಡೆಸುತ್ತಿರುವುದನ್ನು ನೆನೆದು ಲಕ್ಷ್ಮಿ ಹೆಬ್ಬಾಳ್ಕರ್ ಅವರ ಪುತ್ರ ಮೃಣಾಲ್ ಕಣ್ಣೀರಿಟ್ಟಿದ್ದಾರೆ.
ನಿನ್ನೆ ಬೆಳಗಾವಿ ತಾಲ್ಲೂಕಿನ ಹಿರೇ ಬಾಗವಾಡಿ ಗ್ರಾಮದಲ್ಲಿ ನಡೆದ ಕೆರೆ ಅಭಿವೃದ್ಧಿ ಚಾಲನಾ ಕಾರ್ಯಕ್ರಮದಲ್ಲಿ ಮಾತನಾಡಿದ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಪುತ್ರ ನಮ್ಮ ತಾಯಿ ಯಾವಾಗಲೂ ನಗುತ್ತಿದ್ದರು ಇದೀಗ ಅವರು ಕಷ್ಟದಲ್ಲಿ ಇರುವುದನ್ನು ನೋಡಿ ನನಗೆ ಅಳು ಬರುತ್ತಿದೆ ಎಂದು ಕಣ್ಣೀರು ಹಾಕಿದ್ದಾರೆ. ಅವರಿಂದ ನಾವು ಕಲಿಯಬೇಕಾದದ್ದು ಸಾಕಷ್ಟಿದೆ, ಎಷ್ಟೇ ಕಷ್ಟ ಬಂದರೂ ಮುಖದಲ್ಲಿ ನಗು ಇಟ್ಟುಕೊಂಡು ಎದುರಿಸುವ ಅವರಿಗೆ ನಿಮ್ಮ ಆಶೀರ್ವಾದ ಇರಲಿ ಎಂದು ಹೇಳಿದ್ದಾರೆ..