ಡಿಕೆ ಶಿವಕುಮಾರ್ ರನ್ನು ಇಡಿ ಅಧಿಕಾರಿಗಳು ವಶಕ್ಕೆ ಪಡೆಯುತ್ತಿದ್ದಂತೆ ರಾಜ್ಯಾದ್ಯಂತ ಡಿಕೆಶಿ ಅಭಿಮಾನಿಗಳು ಹಾಗೂ ಬೆಂಬಲಿಗರು ಆಕ್ರೋಶ ವ್ಯಕ್ತಪಡಿಸಿದರು ಆದರೆ ಸೆಪ್ಟೆಂಬರ್ 13 ರ ವರೆಗೆ ಡಿ.ಕೆ. ಶಿವಕುಮಾರ್ ಜಾರಿ ನಿರ್ದೇಶನಾಲಯ ಅಧಿಕಾರಿಗಳ ವಿಚಾರಣೆ ಎದುರಿಸಬೇಕಿದೆ. ಇಡಿ ವಿಶೇಷ ಕೋರ್ಟ್ ಆದೇಶ ಹೊರಬೀಳುತ್ತಿದ್ದಂತೆ, ಡಿಕೆಶಿ ಅವರನ್ನು ವಶಕ್ಕೆ ಪಡೆದು ಇಡಿ ಅಧಿಕಾರಿಗಳು ಇಡಿ ಕಚೇರಿಗೆ ಕರೆದುಕೊಂಡು ಹೋಗಿದ್ದಾರೆ.
ಕಾನೂನು ಪ್ರಕ್ರಿಯೆ ಬಳಿಕ ಅವರನ್ನು ತುಘಲಕ್ ರಸ್ತೆಯ ಪೊಲೀಸ್ ಠಾಣೆಗೆ ಸ್ಥಳಾಂತರಿಸಲಾಗಿದ್ದು, ಅಲ್ಲಿಯೇ ಡಿಕೆಶಿ ರಾತ್ರಿ ಕಳೆದಿದ್ದಾರೆ ಎಂದು ಹೇಳಲಾಗುತ್ತಿದೆ .