ಇತಿಹಾಸದಲ್ಲೇ ಇದೇ ಮೊದಲು, ಆಂಧ್ರಕ್ಕೆ 5 ಜನ ಡಿಸಿಎಂಗಳು..!?

Date:

ಪ್ರಚಂಡ ಬಹುಮತದೊಂದಿಗೆ ಆಂಧ್ರಪ್ರದೇಶದಲ್ಲಿ ಅಧಿಕಾರಕ್ಕೆ ಬಂದಿರುವ ಮುಖ್ಯಮಂತ್ರಿ ಜಗನ್‍ಮೋಹನ್ ರೆಡ್ಡಿ ನೇತೃತ್ವದ ಸರ್ಕಾರ ದೇಶದ ಇತಿಹಾಸದಲ್ಲೇ ಮೊದಲ ಬಾರಿಗೆ ಐವರಿಗೆ ಉಪಮುಖ್ಯಮಂತ್ರಿ ಹುದ್ದೆ ನೀಡಲು ಮುಂದಾಗಿದೆ.

ಎಲ್ಲಾ ಸಮುದಾಯಗಳನ್ನು ಗಮನದಲ್ಲಿರಿಸಿಕೊಂಡು ಅದರಲ್ಲೂ ಶೋಷಿತ ಸಮುದಾಯದಿಂದ ಆಯ್ಕೆಯಾಗಿರುವ ಶಾಸಕರನ್ನು ಸಚಿವರನ್ನಾಗಿ ಮಾಡಿ ಅವರಿಗೆ ಡಿಸಿಎಂ ಸ್ಥಾನ ನೀಡಲು ಕ್ರಾಂತಿಕಾರಿ ಹೆಜ್ಜೆಯನ್ನು ಮುಂದಿಡಲಾಗಿದೆ.

ಈಗಾಗಲೇ ರಾಜ್ಯದಲ್ಲಿ ಕಡಿಮೆ ದರದಲ್ಲಿ ವಿದ್ಯುತ್ ಪೂರೈಕೆ ಎಲ್ಲರಿಗೂ ಮನೆ ಸೇರಿದಂತೆ ಹಲವು ಮಹತ್ವದ ಯೋಜನೆಗಳನ್ನು ಪ್ರಣಾಳಿಕೆಯಲ್ಲಿ ತಿಳಿಸಿದಂತೆ ಜಾರಿಗೆ ತರಲು ಜಗನ್ ಈಗಾಗಲೇ ಆರ್ಥಿಕ ಸಂಪನ್ಮೂಲ ಕ್ರೂಢೀಕರಣಕ್ಕೆ ಮುಂದಾಗಿದ್ದಾರೆ.

ದೇಶದಲ್ಲಿ ಸಮ್ಮಿಶ್ರ ಸರ್ಕಾರ ಅಧಿಕಾರಕ್ಕೆ ಬರುವ ಸಾಧ್ಯತೆ ಬಗ್ಗೆ ಅಂದಾಜು ಮಾಡಿದ್ದ ಜಗನ್, ತಮ್ಮ ಪಕ್ಷ ಪ್ರಮುಖ ಪಾತ್ರ ವಹಿಸಲಿದೆ ಎಂದು ನಿರೀಕ್ಷಿಸಿದ್ದರು.

ಆದರೆ ಬಿಜೆಪಿ ಭಾರೀ ಬಹುಮತದಿಂದ ಆಯ್ಕೆಯಾಗಿರುವುದರಿಂದ ಇವರ ಮಾತಿಗೆ ಎಷ್ಟು ಕಿಮ್ಮತ್ತು ಸಿಗುತ್ತದೆ ಎಂಬುದು ಈಗ ಯಕ್ಷ ಪ್ರಶ್ನೆಯಾಗಿದೆ.ಆದರೂ ಈಗಾಗಲೇ ಪ್ರಧಾನಿ ನರೇಂದ್ರಮೋದಿ ಅವರನ್ನು ಭೇಟಿ ಮಾಡಿ ಆಂಧ್ರಕ್ಕೆ ವಿಶೇಷ ಸ್ಥಾನಮಾನ ಕೋರಿ ನೆರವನ್ನು ಪಡೆದಿದ್ದಾರೆ.

ಇದು ಸಿಗುವುದು ವಿಳಂಬವಾದರೆ ಜನರ ವಿಶ್ವಾಸವನ್ನು ಹಾಗೇ ಉಳಿಸಿಕೊಳ್ಳುವ ನಿಟ್ಟಿನಲ್ಲಿ ಪರಿಶಿಷ್ಟ ಜಾತಿ/ ಪಂಗಡ, ಹಿಂದುಳಿದ ವರ್ಗ, ಅಲ್ಪಸಂಖ್ಯಾತ ಹಾಗೂ ಕಾಪು ಸಮುದಾಯದ ಮುಖಂಡರನ್ನು ಉಪಮುಖ್ಯಮಂತ್ರಿ ಮಾಡುವ ಹೊಸ ಅಸ್ತ್ರವನ್ನು ಪ್ರಯೋಗಿಸುತ್ತಿದ್ದಾರೆ.

Share post:

Subscribe

spot_imgspot_img

Popular

More like this
Related

ಆರೋಗ್ಯಕರ ಅಡುಗೆಗೆ ಹಿತ್ತಾಳೆ ಪಾತ್ರೆಗಳು ಸೂಕ್ತವೇ? ತಿಳಿದುಕೊಳ್ಳಿ  ಪ್ರಯೋಜನಗಳು

ಆರೋಗ್ಯಕರ ಅಡುಗೆಗೆ ಹಿತ್ತಾಳೆ ಪಾತ್ರೆಗಳು ಸೂಕ್ತವೇ? ತಿಳಿದುಕೊಳ್ಳಿ  ಪ್ರಯೋಜನಗಳು ಉತ್ತಮ ಆರೋಗ್ಯಕ್ಕಾಗಿ ಪೌಷ್ಟಿಕ...

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು ಕಳ್ಳತನ

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು...

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ – ಆರ್. ಅಶೋಕ್ ಆಗ್ರಹ

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ –...

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...