ಇದು ರಜಿನಿಯ ಹೊಸ ಸ್ಟೈಲ್​ “ಪೆಟ್ಟಾ”..!

Date:

67 ವರ್ಷದ ಸೂಪರ್​ ಸ್ಟಾರ್ ರಜಿನಿಕಾಂತ್​ ಮತ್ತೊಂದು ಚಿತ್ರದಲ್ಲಿ ಬ್ಯುಸಿಯಾಗಿದ್ದಾರೆ. ಆ ಚಿತ್ರದ ಹೆಸರೇ “ಪೆಟ್ಟಾ”. ಸನ್​ ಪಿಕ್ಚರ್ಸ್​ ನಿರ್ಮಾಣ ಮಾಡುತ್ತಿರುವ ಈ ಚಿತ್ರದ ಎರಡನೇ ಸ್ಟಿಲ್​ನ್ನ ಈಗಷ್ಟೇ ಬಿಡುಗಡೆ ಮಾಡಲಾಗಿದೆ. ಚಿತ್ರದಲ್ಲಿ ರಜಿನಿಕಾಂತ್​ 40 ವರ್ಷದ ಖಡಕ್​ ವ್ಯಕ್ತಿಯಂತೆ ಕಾಣಿಸುತ್ತಾರೆ. ಪೊಗರು ಮೀಸೆ ಅವರ ಹೊಸ ಸ್ಟೈಲ್​. ಉಳಿದಂತೆ ಹಣೆಗೆ ವಿಭೂತಿ, ಕುಂಕುಮ ಹಚ್ಚಿಕೊಂಡು ವೈಟ್​ ಅಂಡ್​ ವೈಟ್​ ಬಟ್ಟೆಯಲ್ಲಿ ಮಿಂಚಿದ್ದಾರೆ.
ಯುವ ನಿರ್ದೇಶಕ ಕಾರ್ತಿಕ್​ ಸುಬ್ಬರಾಜ್​ ಅವರು ನಿರ್ದೇಶನ ಮಾಡುತ್ತಿರುವ ಪೆಟ್ಟಾ ಚಿತ್ರದ ಶೂಟಿಂಗ್​ ಈಗಾಗಲೇ ಆರಂಭವಾಗಿದೆ. ಚೆನ್ನೈ, ದೆಹಲಿ, ವಾರಣಾಸಿ, ಲಖನೌ ಸೇರಿದಂತೆ ದೇಶದ ಹಲವಾರು ಪ್ರದೇಶಗಳಲ್ಲಿ ಚಿತ್ರೀಕರಣ ಭರದಿಂದ ಸಾಗಿದೆ. ಮುಂದಿನ ವರ್ಷ ಜನವರಿ ತಿಂಗಳಲ್ಲಿ ಬರುವಂತಾ ಪೊಂಗಲ್​ ಹಬ್ಬಕ್ಕೆ ಪೆಟ್ಟಾ ತೆರೆಗೆ ಅಪ್ಪಳಿಸಲಿದೆ ಎನ್ನಲಾಗುತ್ತಿದೆ.
ಪೆಟ್ಟಾ ಚಿತ್ರಕ್ಕೂ ಮುನ್ನ ಅಂದ್ರೆ ಇದೇ ನವಂಬರ್​ 29ರಂದು ರಜಿನಿಕಾಂತ್ ಅವರ 2.O ಚಿತ್ರ ತೆರೆಗೆ ಬರಲಿದೆ. ಇದಾದ ಬಳಿಕ ರಜಿನಿಕಾಂತ್​ ಎ.ಆರ್​.ಮುರುಘದಾಸ್​ ಅವರ ಜೊತೆಯಲ್ಲಿ ಇನ್ನೊಂದು ಚಿತ್ರದಲ್ಲಿ ಕಾಣಿಸಿಕೊಳ್ಳಲು ಸಿದ್ಧತೆ ನಡೆಸಿದ್ದಾರೆ.

Share post:

Subscribe

spot_imgspot_img

Popular

More like this
Related

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ – ನಾಪತ್ತೆಯಾದ ಮೂವರಿಗೆ ಶೋಧ

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ -...

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ ತಿಳಿಯಿರಿ

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ...

ಚಿತ್ರದುರ್ಗ ಬಸ್ ಅಪಘಾತ: ಮೃತರ ಕುಟುಂಬಕ್ಕೆ ಕೇಂದ್ರದಿಂದ ₹2 ಲಕ್ಷ ಪರಿಹಾರ ಘೋಷಣೆ

ಚಿತ್ರದುರ್ಗ ಬಸ್ ಅಪಘಾತ: ಮೃತರ ಕುಟುಂಬಕ್ಕೆ ಕೇಂದ್ರದಿಂದ ₹2 ಲಕ್ಷ ಪರಿಹಾರ...

ಖಾಸಗಿ ಬಸ್–ಕಂಟೇನರ್ ಲಾರಿ ಡಿಕ್ಕಿ; 9 ಮಂದಿ ಸಜೀವ ದಹನ

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಜವನಗೊಂಡನಹಳ್ಳಿ ಸಮೀಪ ರಾಷ್ಟ್ರೀಯ ಹೆದ್ದಾರಿ–48ರಲ್ಲಿ...