ಇದೇ ತಿಂಗಳ ಕೊನೆಯಲ್ಲಿ ಸಂಸತ್ನ ಚಳಿಗಾಲದ ಅಧಿವೇಶನ ಆರಂಭ!
ನವದೆಹಲಿ:- ಇದೇ ತಿಂಗಳ ಕೊನೆಯಲ್ಲಿ ಸಂಸತ್ನ ಚಳಿಗಾಲದ ಅಧಿವೇಶನ ಆರಂಭವಾಗಲಿದೆ. ಅಂದರೆ ನವೆಂಬರ್ 25ರಿಂದ ಅಧಿವೇಶನ ಆರಂಭವಾಗಲಿದೆ.
ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು, ಚಳಿಗಾಲದ ಅಧಿವೇಶನದ ವೇಳಾಪಟ್ಟಿಯನ್ನು ಪ್ರಕಟಿಸಿದ್ದಾರೆ. ನವೆಂಬರ್ 26ರಂದು ಸಂವಿಧಾನ ಸದನದ ಸೆಂಟ್ರಲ್ ಹಾಲ್‌ನಲ್ಲಿ ಸಂವಿಧಾನ ದಿನವನ್ನು ಆಚರಿಸಲಾಗುವುದು ಎಂದು ಹೇಳಿದ್ದಾರೆ.
ಮಹಾರಾಷ್ಟ್ರ ಮತ್ತು ಜಾರ್ಖಂಡ್ ಚುನಾವಣೆಗಳ ನಂತರ ಪ್ರಾರಂಭವಾಗುವ ಅಧಿವೇಶನದಲ್ಲಿ ಸರ್ಕಾರವು ವಕ್ಫ್ ಮಸೂದೆಯನ್ನು ಮಂಡಿಸುವ ಸಾಧ್ಯತೆಯಿದೆ. ವಿವಾದಾತ್ಮಕ ವಕ್ಫ್ ಮಸೂದೆಯನ್ನು ಉಭಯ ಸದನಗಳು ಅಂಗೀಕರಿಸುವುದನ್ನು ಖಚಿತಪಡಿಸಿಕೊಳ್ಳಲು ನರೇಂದ್ರ ಮೋದಿ ಸರ್ಕಾರವು ಎಲ್ಲ ಪ್ರಯತ್ನಗಳನ್ನು ಮಾಡುತ್ತದೆ ಎಂದು ನಿರೀಕ್ಷಿಸಲಾಗಿದೆ.
ಈ ಬಾರಿಯ ಅಧಿವೇಶನದಲ್ಲಿ ಕೇಂದ್ರ ಸರ್ಕಾರವು ಒಂದು ರಾಷ್ಟ್ರ ಒಂದು ಚುನಾವಣಾ ಮಸೂದೆಯನ್ನು ಪರಿಚಯಿಸುವ ಸಾಧ್ಯತೆಯಿದೆ. ಇತ್ತೀಚೆಗೆ, ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಸರ್ಕಾರವು ಒಂದು ರಾಷ್ಟ್ರ ಒಂದು ಚುನಾವಣೆಯನ್ನು ಸಾಧಿಸುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿದೆ ಎಂದು ಹೈಲೈಟ್ ಮಾಡಿದ್ದು, ಇದರಿಂದ ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಿಗೆ ಏಕಕಾಲದಲ್ಲಿ ಚುನಾವಣೆಗಳು ನಡೆಯಲಿದೆ.