ಇನ್ನು ಕೆಲವೇ ದಿನದಲ್ಲಿ ಮತ್ತೆ ಕರೆಂಟ್ ಬಿಲ್ ಜಾಸ್ತಿ ಆಗುತ್ತದೆ !

Date:

ಹಾಸನ: ಇನ್ನು ಕೆಲವೇ ದಿನದಲ್ಲಿ ಮತ್ತೆ ಕರೆಂಟ್ ಬಿಲ್ ಜಾಸ್ತಿ ಆಗುತ್ತದೆ ಎಂದು ಮಾಜಿ ಸಚಿವ ಹೆಚ್ʼ​ಡಿ ರೇವಣ್ಣ ಹೇಳಿದ್ದಾರೆ. ಜಿಲ್ಲೆಯ ಆಲೂರು ಪಟ್ಟಣದಲ್ಲಿ ಪುತ್ರ ಸಂಸದ ಪ್ರಜ್ವಲ್ ರೇವಣ್ಣ ಪರ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಕೆಇಬಿ ಸಾಲದಲ್ಲಿದೆ. ನಮ್ಮ ಕಾಲದಲ್ಲಿ ಎಂದೂ ಕರೆಂಟ್ ಬಿಲ್ ಹೆಚ್ಚಿಸಿರಲಿಲ್ಲ. ಈ ಸರ್ಕಾರ ಬಂದ ಮೇಲೆ ಬಿಲ್ ಹೆಚ್ಚಿಸಿದರು.

ಇನ್ನು ಕೆಲವೇ ದಿನದಲ್ಲಿ ಮತ್ತೆ ಕರೆಂಟ್ ಬಿಲ್ ಜಾಸ್ತಿ ಆಗುತ್ತದೆ. ಆ ಮೂಲಕ ಕೆಇಬಿ ಖಾಸಗಿ ಕರಣ ಆಗುತ್ತೆ. ಈ ಸರ್ಕಾರ ಚುನಾವಣೆ ಪೂರ್ವದಲ್ಲಿ ಆರನೇ ಗ್ಯಾರಂಟಿ ಹೇಳಿದ್ದರು. ಆದರೆ ಕೊಟ್ಟ ಮಾತಿನಂತೆ ನಡೆದುಕೊಂಡಿಲ್ಲ ಎಂದು ವಾಗ್ದಾಳಿ ಮಾಡಿದ್ದಾರೆ.
ಕೊಬ್ಬರಿಗೆ ಬೆಂಬಲ ಬೆಲೆ ನೀಡಿಲ್ಲ. ಪ್ರಧಾನಿಯವರು ದೇವೇಗೌಡರನ್ನು ಯಾವ ರೀತಿ ಗೌರವಿಸುತ್ತಾರೆ. ಕಾಂಗ್ರೆಸ್​ನವರು ಬೇಕಾದಾಗ ಉಪಯೋಗಿಸಿ ದೂರ ತಳ್ಳುತ್ತಾರೆ. ಕುಮಾರಸ್ವಾಮಿ ಅವರ ಸರ್ಕಾರ ತೆಗೆದಿದ್ದು ಯಾರು? ಯಾವ ಯಾವ ಲೋಕಸಭಾ ಸದಸ್ಯರು ಏನು ಮಾಡಿದಾರೆ ಹೇಳಲಿ ಎಂದು ಸವಾಲು ಹಾಕಿದ್ದಾರೆ.

Share post:

Subscribe

spot_imgspot_img

Popular

More like this
Related

ಆರೋಗ್ಯಕರ ಅಡುಗೆಗೆ ಹಿತ್ತಾಳೆ ಪಾತ್ರೆಗಳು ಸೂಕ್ತವೇ? ತಿಳಿದುಕೊಳ್ಳಿ  ಪ್ರಯೋಜನಗಳು

ಆರೋಗ್ಯಕರ ಅಡುಗೆಗೆ ಹಿತ್ತಾಳೆ ಪಾತ್ರೆಗಳು ಸೂಕ್ತವೇ? ತಿಳಿದುಕೊಳ್ಳಿ  ಪ್ರಯೋಜನಗಳು ಉತ್ತಮ ಆರೋಗ್ಯಕ್ಕಾಗಿ ಪೌಷ್ಟಿಕ...

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು ಕಳ್ಳತನ

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು...

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ – ಆರ್. ಅಶೋಕ್ ಆಗ್ರಹ

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ –...

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...