ವಿಶ್ವವನ್ನೇ ನಡುಗಿಸುತ್ತಿರುವ ಕೊರೋನಾ ವೈರಸ್ ಭಾರತದಲ್ಲಿ ತನ್ನ ಕದಂಬಬಾಹು ಚಾಚುತ್ತಿದ್ದು ದೇಶದ ಜನತೆ 21 ದಿನಗಳ ಕಾಲ ಮನೆಯಲ್ಲೇ ಇರುವಂತೆ ಪ್ರಧಾನಿ ನರೇಂದ್ರ ಮೋದಿ ಕರೆಕೊಟ್ಟಿದ್ದಾರೆ.
ವಿಶ್ವದ ಬಹುತೇಕ ರಾಷ್ಟ್ರಗಳು ಕೊರೋನಾ ವೈರಸ್ ನಿಂದ ಬಾಧಿತವಾಗಿದೆ. ಇದರಿಂದ ದೇಶವನ್ನು ರಕ್ಷಿಸಿಕೊಳ್ಳಬೇಕೆಂದರೆ ದೇಶದ ಜನತೆ ಇನ್ನು 21 ದಿನ ರಸ್ತೆಗಿಳಿಯಬೇಡಿ. ನಿಮ್ಮಲ್ಲಿ ನಾನು ಕೈಮುಗಿದು ಕೇಳಿಕೊಳ್ಳುತ್ತೇನೆ ಎಂದು ಮನವಿ ಮಾಡಿದ್ದಾರೆ.
ನಾವು ಈ ಕ್ಷಣದಿಂದ ಸಂಕಲ್ಪ ಮಾಡೋಣ. ನಮಗೆ ನಾವೇ ಲಕ್ಷ್ಮಣ ರೇಖೆಯನ್ನು ಹಾಕಿಕೊಂಡು ಮನೆಯಲ್ಲೇ ಇರಬೇಕು ಎಂದಿದ್ದಾರೆ.
ಇನ್ನು 21ದಿನ ದೇಶ ಲಾಕ್ಡೌನ್ – ಯಾರೂ ಮನೆಯಿಂದ ಹೊರಬರುವಂತಿಲ್ಲ!
Date: