No menu items!
12.4 C
Munich
Wednesday, April 29, 2026

ಇನ್ನೆರಡು ದಿನ ರಾಜ್ಯದ ಈ ಜಿಲ್ಲೆಗಳಲ್ಲಿ ಭಾರೀ ಮಳೆ

Must read

ರಾಜ್ಯದ ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಗುಡುಗು, ಸಿಡಿಲು ಸಹಿತ ಅಧಿಕ ಮಳೆಯಾಗುವ ಮುನ್ಸೂಚನೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ನಗರದಲ್ಲಿ ಯಲ್ಲೋ ಅಲರ್ಟ್ ಘೋಷಿಸಿದೆ.

ಪರಿಣಾಮ ಅ. 22 ಮತ್ತು 23ರಂದು ಹೆಚ್ಚು ಮಳೆ ಬೀಳುವ ಸಂಭವವಿದೆ.

ಕರ್ನಾಟಕದಲ್ಲಿ ಮುಂಗಾರು ಮಾರುತಗಳ ಪ್ರಭಾವ ತಗ್ಗಲಿದ್ದು, ಅ. 26ರಂದು ಪೂರ್ಣ ಪ್ರಮಾಣದ ಹಿಂಗಾರು ಪ್ರವೇಶಿಸುವ ಲಕ್ಷಣಗಳು ಕಂಡುಬಂದಿವೆ. ಆದರೂ ದಕ್ಷಿಣ ಒಳನಾಡಿನಲ್ಲಿ ಮುಂದಿನ ಎರಡು ದಿನ ಮಳೆಯಾಗುವ ಸಾಧ್ಯತೆಗಳು ಹೆಚ್ಚಿವೆ ಎಂದು ಇಲಾಖೆ ಮಾಹಿತಿ ನೀಡಿದೆ.

ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಾಮರಾಜನಗರ, ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇರುವುದರಿಂದ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಕರಾವಳಿ ಜಿಲ್ಲೆಗಳಲ್ಲಿ ಗುಡುಗು, ಸಿಡಿಲು ಹೆಚ್ಚಾಗಿ ಇರಲಿದ್ದು, ಕೆಲವೆಡೆ ಸಾಧಾರಣ ಮಳೆ ಆಗಲಿದೆ. ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಅ. 26ರವರೆಗೆ ಮಳೆ ತಗ್ಗುವ ಸೂಚನೆಗಳಿವೆ ಎಂದೂ ಹವಾಮಾನ ಇಲಾಖೆ ಹೇಳಿದೆ.ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲಿ ಮಳೆಯಾಗಲಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ, ಬಾಗಲಕೋಟೆ, ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಒಣಹವೆ ಮುಂದುವರೆಯಲಿದೆ

- Advertisement -spot_img

More articles

LEAVE A REPLY

Please enter your comment!
Please enter your name here

- Advertisement -spot_img

Latest article