ಬೆಂಗಳೂರು: ಇನ್ಮುಂದೆ ದಾಖಲಾಗುವ ಪ್ರಕರಣಗಳಿಗೆ ಹೊಸ ಕಾನೂನು ಅನ್ವಯ ಆಗಲಿದೆ ಎಂದು ಗೃಹ ಸಚಿವ ಜಿ. ಪರಮೇಶ್ವರ್ ಹೇಳಿದರು. ನಗರದಲ್ಲಿ ಮಾತನಾಡಿದ ಅವರು, ಇನ್ಮುಂದೆ ದಾಖಲಾಗುವ ಪ್ರಕರಣಗಳಿಗೆ ಹೊಸ ಕಾನೂನು ಅನ್ವಯ ಆಗಲಿದೆ. ಇದರ ಪರಿಣಾಮ ಏನು ಅಂತ ಈಗಲೇ ಹೇಳಲು ಆಗುವುದಿಲ್ಲ. ಸ್ವಲ್ಪ ದಿನಗಳ ನಂತರ ಇದರ ಸಕ್ಸಸ್ ಬಗ್ಗೆ ಗೊತ್ತಾಗುತ್ತದೆ. ಇಡೀ ದೇಶದಲ್ಲಿ ಜಾರಿಯಾಗಿದೆ,
ಫೀಡ್ ಬ್ಯಾಕ್ ನೋಡಿಕೊಂಡು ಸರ್ಕಾರ ಮುಂದೆ ಕೆಲ ಪರಿಷ್ಕರಣೆ ಮಾಡಬಹುದು ಎಂದು ಹೇಳಿದರು. ಇನ್ನೂ ಹೊಸ ಕಾನೂನಿನ ಸಂಬಂಧ ಕಾನ್ಸ್‌ಟೇಬಲ್ನಿಂದ ಹಿಡಿದು ಅಧಿಕಾರಿಗಳವರೆಗೂ ತರಬೇತಿ ಕೊಟ್ಟಿದ್ದೇವೆ. ಇದಕ್ಕಾಗಿ ಪೊಲೀಸರಿಗೆ ಆ್ಯಪ್ ಸಿದ್ಧಪಡಿಸಲಾಗಿದೆ. ಪೊಲೀಸರಿಗೆ ಹೊಂದಾಣಿಕೆ ಆಗುವವರೆಗೂ ಈ ಆ್ಯಪ್ ನೋಡ್ಕೊಂಡು ಕೆಲಸ ಮಾಡಬಹುದು. ಇದು ಒಂದು ರೀತಿಯಲ್ಲಿ ಟೆಸ್ಟಿಂಗ್ ಸಮಯ ಎಂದರು.
ಇನ್ಮುಂದೆ ದಾಖಲಾಗುವ ಪ್ರಕರಣಗಳಿಗೆ ಹೊಸ ಕಾನೂನು ಅನ್ವಯ ಆಗಲಿದೆ !
Date: