No menu items!
18.4 C
Munich
Friday, August 21, 2026

ಇನ್ಮುಂದೆ ಶಾಲಾ ಮಕ್ಕಳಿಗೆ ರಾಗಿ ಮಾಲ್ಟ್ ಕೊಡಲು ತೀರ್ಮಾನ !

Must read

ಬೆಂಗಳೂರು:- ಇನ್ಮುಂದೆ ಶಾಲಾ ಮಕ್ಕಳಿಗೆ ಇನ್ನು ರಾಗಿ ಮಾಲ್ಟ್ ನೀಡಲು ನಿರ್ಧರಿಸಲಾಗಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದರು.

ಈ ಸಂಬಂಧ ಮಾತನಾಡಿದ ಅವರು,ಶಾಲಾ ಮಕ್ಕಳಿಗಾಗಿ ಪೌಷ್ಟಿಕ ಆಹಾರ ನೀಡಲು ನಿರ್ಧರಿಸಲಾಗಿದೆ. ಈಗಾಗಲೇ ನಡೆಸುತ್ತಿರುವ ಮಾಧ್ಯಾಹ್ನದ ಊಟ ಯೋಜನೆ ಚೆನ್ನಾಗಿ ಸಾಗುತ್ತಿದೆ ಎಂದರು.

ಮಕ್ಕಳಿಗೆ ಪೌಷ್ಟಿಕಾಂಶ ನೀಡುವ ನಿಟ್ಟಿನಲ್ಲಿ ರಾಗಿ ಮಾಲ್ಟ್ ನೀಡುವ ನಿರ್ಧಾರ ಕೈಗೊಂಡಿದ್ದೇವೆ. ಮುಂದಿನ ತಿಂಗಳಿಂದ ರಾಗಿ ಮಾಲ್ಟ್ ಭಾಗ್ಯ ಯೋಜನೆಗೆ ಚಾಲನೆ ನೀಡಲಾಗುವುದು ತಿಳಿಸಿದರು.

ಈಗಾಗಲೇ ಒಂದು ಎನ್​ಜಿಒ ಇದನ್ನು ಎರಡು ಜಿಲ್ಲೆಗಳಲ್ಲಿ ಪ್ರಾಯೋಗಿಕವಾಗಿ ಜಾರಿ ಮಾಡಿದ್ದು ಅದು ಯಶಸ್ವಿಯಾಗಿದೆ. ಹೀಗಾಗಿ ಇದನ್ನು ಎಲ್ಲ ಶಾಲೆಗಳಲ್ಲಿ ಜಾರಿ ಮಾಡಲು ನಿರ್ಧಾರ ಮಾಡಲಾಗಿದೆ. ಕ್ಷೀರಭಾಗ್ಯದ ಹಾಲಿನ ಜೊತೆಗೆ ಬೆಳಗ್ಗೆ ರಾಗಿಗಂಜಿ ಕೊಡುವ ನಿರ್ಧಾರ ಮಾಡಲಾಗಿದೆ ಎಂದು ಹೇಳಿದರು.

- Advertisement -spot_img

More articles

- Advertisement -spot_img

Latest article