ಇನ್ಸ್ಟಾಗ್ರಾಂನಲ್ಲಿ ಸಿಕ್ಕ ಮಾಜಿ ಲವರ್: ತಾಳಿ ಕಟ್ಟಿದ ಗಂಡನನ್ನೇ ಮುಗಿಸಿದ ಹೆಂಡ್ತಿ!

Date:

 

ತುಮಕೂರು:- ಇನ್ಸ್ಟಾಗ್ರಾಂನಲ್ಲಿ ಸಿಕ್ಕ ಮಾಜಿ ಲವರ್ ಗಾಗಿ ತಾಳಿ ಕಟ್ಟಿದ ಗಂಡನನ್ನೇ ಹೆಂಡ್ತಿ ಮುಗಿಸಿದ ಘಟನೆ ಜರುಗಿದೆ. ಕೊರಟಗೆರೆ ತಾಲೂಕಿನ ಮಲ್ಲೆಕಾವು ಗ್ರಾಮದ ಬಳಿ ಜರುಗಿದೆ.

ಪ್ರಕಾಶ್ (30) ಮೃತ ದುರ್ದೈವಿ, ಹರ್ಷಿತಾ (28) ಗಂಡನನ್ನೇ ಕೊಲೆ ಮಾಡಿಸಿದ ಹೆಂಡತಿ. ಜಿಲ್ಲೆಯ ಚಿಂಚುಲಿ ಮೂಲದವನಾಗಿರೋ ಪ್ರಕಾಶ್ ಮೂರು ವರ್ಷದ ಹಿಂದೆ ಹರ್ಷಿತಾಗೆ ಇನ್ ಸ್ಟಾಗ್ರಾಂ ನಲ್ಲಿ ಪರಿಚಯವಾಗಿತ್ತು. ಬಳಿಕ ಪರಸ್ಪರ ಪ್ರೀತಿಸಿ ಇಬ್ಬರೂ ಮದುವೆಯಾಗಿದ್ದರು. ಮದುವೆಯ ಬಳಿಕ ಪತ್ನಿಯ ತವರಿನಲ್ಲೇ ವಾಸವಿದ್ದ ಪ್ರಕಾಶ್. ದಂಪತಿಗೆ ಒಂದೂವರೆ ವರ್ಷದ ಮಗುವೂ ಇತ್ತು. ಆದ್ರೆ ಇತ್ತೀಚಿಗೆ ಹರ್ಷಿತಾಳಿಗೆ ಇನ್ ಸ್ಟಾಗ್ರಾಂನಲ್ಲಿ ಮಾಜಿ ಪ್ರಿಯತಮ ಗುಂಡ ಸಿಕ್ಕಿದ್ದನು

ಈ ವೇಳೆ ಹರ್ಷಿತಾ ಮತ್ತು ಗುಂಡ ಇಬ್ಬರಿಗೂ ಮರು ಪ್ರೇಮಾಂಕುರವಾಗಿದೆ. ಕಳೆದ 2 ತಿಂಗಳ ಹಿಂದೆ ಹರ್ಷಿತಾ ಮನೆಬಿಟ್ಟು ಗುಂಡನ ಜೊತೆ ಪರಾರಿಯಾಗಿದ್ದಳು. ಈ ಸಂಬಂಧ ಪ್ರಕಾಶ್ ಪೊಲೀಸ್ ಠಾಣೆಗೆ ದೂರು ನೀಡಿದ್ದನು. ಬಳಿಕ ಹರ್ಷಿತಾ ಮನೆಗೆ ವಾಪಾಸ್ಸಾಗಿದ್ದಳು. ಆದ್ರೆ ಒಳಗೊಳಗೇ ಗಂಡನ ಕೊಲೆಗೆ ಸ್ಕೆಚ್ ಹಾಕಿದ್ದಳು ಪತ್ನಿ ಹರ್ಷಿತಾ.

ಗಂಡನ ಕೊಲೆಗಾಗಿ ಹರ್ಷಿತಾ ಸಹೋದರ ಸೋಮಶೇಖರ್ ಹಾಗೂ ಪ್ರಿಯತಮ ಗುಂಡನಿಗೆ ಸುಪಾರಿ ನೀಡಿದ್ದಳು. ಇದರಂತೆ ಸೋಮಶೇಖರ್ ನಂಬಿಸಿ ಪ್ರಕಾಶ್ ನನ್ನ ಕರೆಸಿಕೊಂಡಿದ್ದನು. ಸೋಮಶೇಖರ್ ಜೊತೆಗೆ ಪ್ರಕಾಶ್ ಗಾಗಿ ಗುಂಡ ಮತ್ತು ಆತನ ಸ್ನೇಹಿತ ರಂಗಸ್ವಾಮಯ್ಯ ಕಾಡುಕುಳಿತಿದ್ದರು. ಪ್ರಕಾಶ್ ಬರುತ್ತಿದ್ದಂತೆ ಆತನ ಮೇಲೆ ಆರೋಪಿಗಳು ಹಲ್ಲೆ ನಡೆಸಿದ್ದರು. ಡ್ರ್ಯಾಗರ್ ನಿಂದ ಎದೆಭಾಗಕ್ಕೆ ಚುಚ್ಚಿ ಪಾಪಿಗಳು ಕೊಲೆ ಮಾಡಿದ್ದಾರೆ.

ಬಳಿಕ ಅಪಘಾತದ ರೀತಿಯಲ್ಲಿ ಬಿಂಬಿಸಲು ಆರೋಪಿಗಳು ಹೊರಟಿದ್ದರು. ಆದ್ರೆ ಎದೆಭಾಗಕ್ಕೆ ಚುಚ್ಚಿದ ಗಾಯ ಪತ್ತೆ ಹಿನ್ನೆಲೆಯಲ್ಲಿ ಇದು ಕೊಲೆ ಎಂದು ಖಚಿತವಾಗಿದೆ. ಸದ್ಯ ಕೊರಟಗೆರೆ ಪೊಲೀಸರಿಂದ ಹರ್ಷಿತಾ, ಸೋಮಶೇಖರ್, ರಂಗಸ್ವಾಮಯ್ಯನನ್ನ ಬಂಧನವಾಗಿದೆ. ಗುಂಡನಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.

Share post:

Subscribe

spot_imgspot_img

Popular

More like this
Related

ಕಾಂಗ್ರೆಸ್ ಅವಧಿಯಲ್ಲಿ ಬೆಂಗಳೂರು ಅಭಿವೃದ್ಧಿಯಾಗಬಾರದು ಎಂದು ಬಿಜೆಪಿ ಕುತಂತ್ರ, ಅಸೂಯೆ: ಡಿ.ಕೆ. ಸುರೇಶ್ ವಾಗ್ದಾಳಿ

ಕಾಂಗ್ರೆಸ್ ಅವಧಿಯಲ್ಲಿ ಬೆಂಗಳೂರು ಅಭಿವೃದ್ಧಿಯಾಗಬಾರದು ಎಂದು ಬಿಜೆಪಿ ಕುತಂತ್ರ, ಅಸೂಯೆ: ಡಿ.ಕೆ....

ಎಸ್‌ಎಸ್‌ಎಲ್‌ಸಿ, ದ್ವಿತೀಯ ಪಿಯುಸಿ ಪರೀಕ್ಷೆ 1 ಮತ್ತು 2ರ ವೇಳಾಪಟ್ಟಿ ಪ್ರಕಟ

ಎಸ್‌ಎಸ್‌ಎಲ್‌ಸಿ, ದ್ವಿತೀಯ ಪಿಯುಸಿ ಪರೀಕ್ಷೆ 1 ಮತ್ತು 2ರ ವೇಳಾಪಟ್ಟಿ ಪ್ರಕಟ ಬೆಂಗಳೂರು:...

ನಂದಿನಿ ತುಪ್ಪದ ಬೆಲೆ ಏರಿಕೆ: ಗ್ರಾಹಕರಿಗೆ ಸಿಗಲಿಲ್ಲ GST ಇಳಿಕೆ ಲಾಭ

ನಂದಿನಿ ತುಪ್ಪದ ಬೆಲೆ ಏರಿಕೆ: ಗ್ರಾಹಕರಿಗೆ ಸಿಗಲಿಲ್ಲ GST ಇಳಿಕೆ ಲಾಭ ಬೆಂಗಳೂರು:...

ಹರಿಯಾಣದಲ್ಲಿ 25 ಲಕ್ಷ ಮತಗಳ್ಳತನ : 22 ಬಾರಿ ಬ್ರೆಜಿಲ್ ಮಾಡೆಲ್ ಫೋಟೋ ಬಳಕೆ – ರಾಹುಲ್ ಆರೋಪ

ಹರಿಯಾಣದಲ್ಲಿ 25 ಲಕ್ಷ ಮತಗಳ್ಳತನ : 22 ಬಾರಿ ಬ್ರೆಜಿಲ್ ಮಾಡೆಲ್ ಫೋಟೋ...