No menu items!
16.8 C
Munich
Thursday, July 16, 2026

ಇರಾನ್ ದಾಳಿ ಶಂಕೆ: ಅಮೆರಿಕದ F-35 ಯುದ್ಧವಿಮಾನ ತುರ್ತು ಲ್ಯಾಂಡಿಂಗ್

Must read

ಇರಾನ್ ದಾಳಿ ಶಂಕೆ: ಅಮೆರಿಕದ F-35 ಯುದ್ಧವಿಮಾನ ತುರ್ತು ಲ್ಯಾಂಡಿಂಗ್

ಟೆಹ್ರಾನ್: ಇರಾನ್ ವಿರುದ್ಧ ನಡೆಯುತ್ತಿರುವ ಯುದ್ಧದ ನಡುವೆ ಅಮೆರಿಕಕ್ಕೆ ಮತ್ತೊಂದು ಶಾಕ್ ಎದುರಾಗಿದೆ. ಐದನೇ ತಲೆಮಾರಿನ F-35 ಫೈಟರ್ ಜೆಟ್ ಮೇಲೆ ಇರಾನ್ ದಾಳಿ ನಡೆಸಿದ ಶಂಕೆ ವ್ಯಕ್ತವಾಗಿದೆ.
ಅಮೆರಿಕದ ಸೆಂಟ್ರಲ್ ಕಮಾಂಡ್ ಮಾಹಿತಿ ಪ್ರಕಾರ, ಇರಾನ್ ಮೇಲೆ ಯುದ್ಧ ಕಾರ್ಯಾಚರಣೆ ನಡೆಸಿದ ಬಳಿಕ F-35 ಯುದ್ಧವಿಮಾನ ಮಧ್ಯಪ್ರಾಚ್ಯದ ಅಮೆರಿಕದ ನೆಲೆಯಲ್ಲಿ ತುರ್ತು ಭೂಸ್ಪರ್ಶ ಮಾಡಿದೆ.
ವಿಮಾನಕ್ಕೆ ಮೇಲ್ಮೈಯಿಂದ ಗಾಳಿಗೆ ಹಾರುವ ಕ್ಷಿಪಣಿ ದಾಳಿ ನಡೆದಿರುವ ಸಾಧ್ಯತೆ ಇರುವುದಾಗಿ ಪ್ರಾಥಮಿಕ ಮಾಹಿತಿ ತಿಳಿಸಿದೆ. ದಾಳಿಯ ನಂತರ ವಿಮಾನ ತುರ್ತು ಭೂಸ್ಪರ್ಶ ಮಾಡಿದ್ದು, ಪೈಲಟ್ ಸುರಕ್ಷಿತವಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
“ವಿಮಾನ ಸುರಕ್ಷಿತವಾಗಿ ಇಳಿದಿದೆ. ಪೈಲಟ್ ಸ್ಥಿರ ಸ್ಥಿತಿಯಲ್ಲಿದ್ದಾರೆ,” ಎಂದು ಕ್ಯಾಪ್ಟನ್ ಟಿಮ್ ಹಾಕಿನ್ಸ್ ಮಾಹಿತಿ ನೀಡಿದ್ದಾರೆ. ಘಟನೆಯ ಬಗ್ಗೆ ಹೆಚ್ಚಿನ ತನಿಖೆ ಆರಂಭವಾಗಿದೆ.
ಒಂದು ವೇಳೆ ಇರಾನ್ ದಾಳಿ ದೃಢಪಟ್ಟರೆ, ಸಂಘರ್ಷ ಆರಂಭವಾದ ಬಳಿಕ ಅಮೆರಿಕದ ಅತ್ಯಾಧುನಿಕ ಯುದ್ಧವಿಮಾನ ಮೇಲೆ ನಡೆದ ಮೊದಲ ದಾಳಿ ಇದಾಗಲಿದೆ. ಸುಮಾರು 100 ಮಿಲಿಯನ್ ಡಾಲರ್ಗಿಂತಲೂ ಹೆಚ್ಚಿನ ಮೌಲ್ಯ ಹೊಂದಿರುವ F-35 ಯುದ್ಧವಿಮಾನವನ್ನು ಅಮೆರಿಕ ಮತ್ತು ಇಸ್ರೇಲ್ ಎರಡೂ ಯುದ್ಧದಲ್ಲಿ ಬಳಸುತ್ತಿವೆ.
ಯುದ್ಧ ಆರಂಭವಾದ ಬಳಿಕ ಇದುವರೆಗೆ ಕನಿಷ್ಠ 16 ಅಮೆರಿಕದ ಸೈನಿಕ ವಿಮಾನಗಳು ನಾಶವಾಗಿದ್ದು, 10 ರೀಪರ್ ಡ್ರೋನ್ಗಳನ್ನು ಹೊಡೆದುರುಳಿಸಲಾಗಿದೆ. ಇನ್ನೂ 6 ವಿಮಾನಗಳು ದಾಳಿ ಅಥವಾ ಅಪಘಾತಗಳಿಂದ ಹಾನಿಗೊಳಗಾಗಿವೆ ಎಂದು ವರದಿಯಾಗಿದೆ.

- Advertisement -spot_img

More articles

- Advertisement -spot_img

Latest article