ಉಪಮುಖ್ಯಮಂತ್ರಿ ಸ್ಥಾನಕ್ಕೆ ಹಲವಾರುಜನ ಲಗ್ಗೆ ಇಟ್ಟಿದ್ದರು ಅದೇ ಗುಂಪಿಗೆ ಇದೀಗ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಅಧಿಕಾರಕ್ಕೆ ಬರಲು ಪ್ರಮುಖ ಕಾರಣಕರ್ತರಾಗಿದ್ದ ರಮೇಶ್ ಜಾರಕಿಹೊಳಿ ಆ ಸಂದರ್ಭದಲ್ಲೇ ಉಪ ಮುಖ್ಯಮಂತ್ರಿ ಸ್ಥಾನದ ಬೇಡಿಕೆ ಇಟ್ಟಿದ್ದರೆಂದು ಹೇಳಲಾಗಿದ್ದು, ಸಚಿವ ಶ್ರೀರಾಮುಲು ಕೂಡ ಈ ಸ್ಥಾನದ ಮೇಲೆ ಕಣ್ಣಿಟ್ಟಿದ್ದಾರೆ ಎಂದು ಹೇಳಲಾಗುತ್ತಿದೆ.
ಮುಂದಿನ ಸಚಿವ ಸಂಪುಟ ವಿಸ್ತರಣೆ ಸಂದರ್ಭದಲ್ಲಿ ಉಪ ಮುಖ್ಯಮಂತ್ರಿ ಹುದ್ದೆ ನೀಡುವ ಕುರಿತು ತೀರ್ಮಾನವಾಗಲಿದ್ದು, ಇದರ ಮಧ್ಯೆ ಮತ್ತೊಬ್ಬ ಸಚಿವರು ತಾವೂ ಕೂಡ ಉಪ ಮುಖ್ಯಮಂತ್ರಿ ಹುದ್ದೆ ಆಕಾಂಕ್ಷಿ ಎಂದು ಹೇಳಿದ್ದಾರೆ.