ಶಾಸಕಾಂಗ ಪಕ್ಷದ ನಾಯಕರಾಗಿರುವ ಸಿದ್ದರಾಮಯ್ಯ ತಾವೇ ವಿರೋಧ ಪಕ್ಷದ ನಾಯಕನಾಗಿ ಮುಂದುವರೆಯಬೇಕೆಂಬ ನಿಟ್ಟಿನಲ್ಲಿ ಹಲವಾರು ಕಸರತ್ತುಗಳನ್ನು ನಡೆಸುತ್ತಿದ್ದಾರೆ. ಆದರೆ ಅದಕ್ಕೆ ಪಕ್ಷದ ಮೂಲ ನಿವಾಸಿಗಳು ಅಡ್ಡಗಾಲು ಹಾಕಿದ್ದು, ಎಚ್.ಕೆ.ಪಾಟೀಲ್ ಅವರಿಗೆ ಮಣೆ ಹಾಕಬೇಕೆಂದು ಒತ್ತಡ ಹೇರುತ್ತಿದ್ದಾರೆ.
ಕೃಷ್ಣಭೈರೇಗೌಡ, ರಮೇಶ್‍ಕುಮಾರ್, ಪರಮೇಶ್ವರ್, ಎಂ.ಬಿ.ಪಾಟೀಲ್ ಸೇರಿದಂತೆ ಹಲವಾರು ಮಂದಿ ವಿಪಕ್ಷ ನಾಯಕನ ಸ್ಥಾನಕ್ಕೆ ಆಕಾಂಕ್ಷಿಗಳಾಗಿದ್ದು, ತೆರೆಮರೆಯಲ್ಲಿ ಲಾಬಿ ನಡೆಸುತ್ತಿದ್ದಾರೆ. ಇತ್ತೀಚೆಗೆ ದೆಹಲಿಗೆ ತೆರಳಿದ್ದ ಸಿದ್ದರಾಮಯ್ಯ ನಾಲ್ಕು ದಿನ ಕಾದರೂ ಸೋನಿಯಾಗಾಂಧಿಯವರನ್ನು ಭೇಟಿ ಮಾಡಲು ಸಾಧ್ಯವಾಗಲಿಲ್ಲ.ಒಮ್ಮೆ ಅಧಿಕೃತ ಘೋಷಣೆ ಮಾಡಿದರೆ ಮತ್ತೆ ಬದಲಾವಣೆ ಮಾಡಲು ಸಾಧ್ಯವಿಲ್ಲ. ಹಾಗಾಗಿ ಡಿ.ಕೆ.ಶಿವಕುಮಾರ್ ಅವರ ಜಾಮೀನಿನ ಪ್ರಕರಣ ಯಾವ ತಿರುವು ಪಡೆಯಲಿದೆ ಎಂದು ಕಾದು ನೋಡಿ ನಂತರ ತೀರ್ಮಾನ ಪ್ರಕಟಿಸಲು ವರಿಷ್ಠರು ನಿರ್ಧರಿಸಿದ್ದಾರೆ ಎನ್ನಲಾಗಿದೆ.