ನಗರದ ಪುರಭವನ ಹಾಗೂ ಸ್ವಾತಂತ್ರ ಉದ್ಯಾನವನ ಹೊರತು ಪಡಿಸಿ ನಗರದ ಬೇರೆಡೆ ಸಿಎಎ, ಎನ್‌ಆರ್‌ಸಿ ವಿರುದ್ಧದ ಹೋರಾಟಕ್ಕೆ ಅನುಮತಿ ನೀಡುತ್ತಿಲ್ಲ. ನಮ್ಮ ಹಕ್ಕಗಳು ಬೆಲೆಕೊಡುತ್ತಿಲ್ಲ ಎಂದು ಶಾಸಕಿ ಸೌಮ್ಯಾರೆಡ್ಡಿ ಆರೋಪಿಸಿದ್ದಾರೆ.
ಸಿಎಎ ವಿಚಾರವಾಗಿ ನಗರದ ಜ್ಯೋತಿನಿವಾಸ್ ಕಾಲೇಜು, ಯಲಹಂಕದ ಸೃಷ್ಟಿ ಕಾಲೇಜಿನ ವಿದ್ಯಾರ್ಥಿಗಳನ್ನು ಬಿಜೆಪಿ, ಆರೆಸ್ಸೆಸ್ ಕಾರ್ಯಕರ್ತರು ಬೆದರಿಸುವಂತಹ ಕೆಲಸಕ್ಕೆ ಮುಂದಾಗಿದ್ದಾರೆ. ಈ ಬಗ್ಗೆ ವಿದ್ಯಾರ್ಥಿಗಳು ಆತಂಕ ವ್ಯಕ್ತಪಡಿಸಿದ್ದು, ಪೊಲೀಸರು ಬಿಜೆಪಿ ಕಾರ್ಯಕರ್ತರ ವಿರುದ್ದ ಕ್ರಮ ಕೈಗೊಳ್ಳಬಲ್ಲರೇ ಎಂದು ಅವರು ಪ್ರಶ್ನಿಸಿದರು.