ಇಸ್ರೋ ಪ್ರಯತ್ನ ಕೈಬಿಟ್ಟಿಲ್ಲ. ಲ್ಯಾಂಡರ್ ಸಂಪರ್ಕಕ್ಕೆ ಪ್ರಯತ್ನವನ್ನು ಮುಂದುವರೆಸಿದೆ. ಇನ್ನು 14 ದಿನಗಳ ಕಾಲ ಲ್ಯಾಂಡರ್ ಸಂಪರ್ಕಕ್ಕೆ ಇಸ್ರೋ ಕ್ರಮಕೈಗೊಂಡಿದ್ದು, ಈ ನಿಟ್ಟಿನಲ್ಲಿ ಕಾರ್ಯೋನ್ಮುಖವಾಗಿದೆ.
ಚಂದ್ರನ ಮೇಲ್ಮೈನಲ್ಲಿ ಇಳಿಯುವ 2.1 ಕಿಲೋಮೀಟರ್ ಎತ್ತರದಲ್ಲಿ ಲ್ಯಾಂಡರ್ ಸಂಪರ್ಕ ಕಡಿದುಕೊಂಡಿದೆ. ಇದು ವಿಜ್ಞಾನಿಗಳ ಆತಂಕಕ್ಕೆ ಕಾರಣವಾಗಿದೆ. ಕೊನೆ ಕ್ಷಣದವರೆಗೂ ಸಂಭ್ರಮದಲ್ಲಿದ್ದ ಇಸ್ರೋ ವಿಜ್ಞಾನಿಗಳು ಸಂಪರ್ಕ ಕಳೆದುಕೊಂಡ ಕೂಡಲೇ ಆತಂಕಕ್ಕೆ ಒಳಗಾಗಿದ್ದರು. ಪ್ರಧಾನಿ ಮೋದಿ ವಿಜ್ಞಾನಿಗಳಿಗೆ ಧೈರ್ಯ ತುಂಬಿದ್ದಾರೆ