ಎಸ್ ಎಮ್ ಕೃಷ್ಣ ಅಂದ್ರೆ ಸೋಮನಹಳ್ಳಿ ಮಲ್ಲಯ್ಯ ಕೃಷ್ಣ ಇಹಲೋಕ ತ್ಯಜಿಸಿದ್ದಾರೆ.1932 ರಲ್ಲಿ ಜನಿಸಿದ ಅವರು ಕರ್ನಾಟಕದ ಹಿರಿಯ ರಾಜಕಾರಣಿಗಳಲ್ಲಿ ಅಗ್ರಗಣ್ಯರು. ಎಸ್ ಎಂ ಕೃಷ್ಣ ಅವರು ೧೯೯೯ ರಿಂದ ೨೦೦೪ರವರೆಗೆ ಕರ್ನಾಟಕ ರಾಜ್ಯದ ಮುಖ್ಯಮಂತ್ರಿಯಾಗಿದ್ದವರು. ಮಹಾರಾಷ್ಟ್ರ ರಾಜ್ಯದ ಮಾಜಿ ರಾಜ್ಯಪಾಲರಾದ ಇವರು, ಕೇಂದ್ರ ವಿದೇಶಾಂಗ ಸಚಿವರಾಗಿಯೂ ಸಹ ಕಾರ್ಯ ನಿರ್ವಹಿಸಿದ್ದರು.
1999 ರಿಂದ 2004 ರವರೆಗೆ ಕರ್ನಾಟಕದ 13 ನೇ ಮುಖ್ಯಮಂತ್ರಿಯಾಗಿದ್ದ ಇವರು, 2004 ರಿಂದ 2008 ರವರೆಗೆ ಮಹಾರಾಷ್ಟ್ರದ 19 ನೇ ರಾಜ್ಯಪಾಲರಾಗಿದ್ದರು . ಎಸ್.ಎಂ.ಕೃಷ್ಣ ಅವರು ಡಿಸೆಂಬರ್ 1989 ರಿಂದ ಜನವರಿ 1993 ರವರೆಗೆ ಕರ್ನಾಟಕ ವಿಧಾನಸಭೆಯ ಸ್ಪೀಕರ್ ಆಗಿ ಸೇವೆ ಸಲ್ಲಿಸುತ್ತಾರೆ.
ಇನ್ನೂ ಸಾಕಷ್ಟು ಕಾಲ ಕಾಂಗ್ರೆಸ್ ಪಕ್ಷದ ಸದಸ್ಯರಾಗಿದ್ದರು ಸಹ, ಕಾರಣಾಂತರಗಳಿಂದ ಬದಲಾದ ರಾಜಕೀಯ ಸನ್ನಿವೇಶಗಳಿಂದ ಎಸ್ ಎಂ ಕೆ ಅವರು ಮಾರ್ಚ್ 2012 ರಂದು ಭಾರತೀಯ ಜನತಾ ಪಕ್ಷದ ಸದಸ್ಯತ್ವವನ್ನು ಪಡೆದುಕೊಳ್ತಾರೆ.