No menu items!
16.4 C
Munich
Tuesday, May 5, 2026

ಈಜಲು ತೆರಳಿದ್ದ ಮೂವರು ವಿದ್ಯಾರ್ಥಿಗಳು ನೀರು ಪಾಲು

Must read

ಕೊಡಗು: ಈಜಲು ತೆರಳಿದ್ದ ಮೂವರು ವಿದ್ಯಾರ್ಥಿಗಳು ನೀರು ಪಾಲಾಗಿರುವ ಘಟನೆ ಕೊಡಗಿನ ಪೊನ್ನಂಪೇಟೆ ತಾಲೂಕಿನಲ್ಲಿ ಸಂಭವಿಸಿದೆ. ಪೊನ್ನಂಪೇಟೆ ತಾಲೂಕಿನ ಅರ್ಜಿ ಗ್ರಾಮದ ಬರಪೊಳೆಯ ಕೊಂಗಣ ನದಿಯಲ್ಲಿ ಈ ಘಟನೆ ನಡೆದಿದೆ. ಮೃತರನ್ನು ರಷಿಕ್ ಕುಶಾಲಪ್ಪ (20), ಆಕಾಶ್ ಬಿದ್ದಪ್ಪ (20), ಸುದೀಶ್ ಅಯ್ಯಪ್ಪ (20) ಎಂದು ತಿಳಿದುಬಂದಿದೆ.


ಕೊಡಗಿನ ಪೊನ್ನಂಪೇಟೆ ಸಿಇಟಿ ಕಾಲೇಜಿನಲ್ಲಿ 2ನೇ ವರ್ಷದ ಎಂಜಿನಿಯರಿಂಗ್ ಓದುತ್ತಿದ್ದ ಐವರ ತಂಡ ವೀಕೆಂಡ್‌ ಹಿನ್ನೆಲೆಯಲ್ಲಿ ಕೊಂಗಣ ನದಿಯಲ್ಲಿ ಈಜಲು ತೆರಳಿದ್ದರು. ಈ ವೇಳೆ ನೀರಿನ ಹರಿವು ಹೆಚ್ಚಿದ್ದರಿಂದ 3 ಕೊಚ್ಚಿ ಹೋಗಿದ್ದಾರೆ. ಇನ್ನುಳಿದ ಇಬ್ಬರು ದಡ ಸೇರಿ ಪ್ರಾಣ ಉಳಿಸಿಕೊಂಡಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಪೊನ್ನಂಪೇಟೆ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

- Advertisement -spot_img

More articles

- Advertisement -spot_img

Latest article