ಕರ್ನಾಟಕ ಸರ್ಕಾರ ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಹೆಸರು ಬದಲಾವಣೆ ಮಾಡಿದೆ. ಕಲಬುರಗಿಯಲ್ಲಿ ಸಂಸ್ಥೆಯ ಪ್ರಧಾನ ಕಚೇರಿ ಇದ್ದು, 52 ಡಿಪೋಗಳು ಸಂಸ್ಥೆಯ ಅಡಿಯಲ್ಲಿವೆ.
ಸರ್ಕಾರದ ಅಧೀನ ಕಾರ್ಯದರ್ಶಿ ಎಂ. ಸತ್ಯವತಿ ಈ ಕುರಿತು ಆದೇಶ ಹೊರಡಿಸಿದ್ದಾರೆ. ರಸ್ತೆ ಸಾರಿಗೆ ನಿಗಮಗಳ ಅಧಿ ನಿಯಮ 1950ರ (1950ರ ಕೇಂದ್ರ ಅಧಿನಿಯಮ 64 ಕಲಂ 3ರಲ್ಲಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಹೆಸರು ಬದಲಿಸಲಾಗಿದೆ.
ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಹೆಸರನ್ನು ‘ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ’ ಎಂದು ತಕ್ಷಣದಿಂದ ಜಾರಿಗೆ ಬರುವಂತೆ ಮರು ನಾಮಕರಣ ಮಾಡಲಾಗಿದೆ. ಈ ಕುರಿತು ಆದೇಶವನ್ನು ಹೊರಡಿಸಲಾಗಿದೆ.
‘ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ’ದ ವ್ಯಾಪ್ತಿಯಲ್ಲಿ ಬೀದರ್, ಕಲಬುರಗಿ, ವಿಜಯಪುರ, ಯಾದಗಿರಿ, ರಾಯಚೂರು, ಕೊಪ್ಪಳ, ಬಳ್ಳಾರಿ ಮತ್ತು ಹೊಸಪೇಟೆ ಒಳಪಡುತ್ತದೆ.