ನಟ ರಮೇಶ್ ಅರವಿಂದ ಮತ್ತು ಅವರ ಪತ್ನಿ ಇಂದು ಯಡಿಯೂರಪ್ಪ ಅವರನ್ನು ಖುದ್ದಾಗಿ ಭೇಟಿ ಮಾಡಿದ್ದಾರೆ. ಕಳೆದ ತಿಂಗಳ ಕೊನೆಯಲ್ಲಿ ರಮೇಶ್ ಅರವಿಂದ್ ಅವರ ಪುತ್ರಿ ನಿಹಾರಿಕಾ ಮತ್ತು ಅಕ್ಷಯ್ ಅವರ ಮದುವೆಯನ್ನು ಕೊರೋನಾ ಕಾರಣದಿಂದಾಗಿ ಸರಳವಾಗಿ ಆಚರಣೆ ಮಾಡಲಾಯಿತು.
ಹೀಗಾಗಿ ಆರತಕ್ಷತೆ ಕಾರ್ಯಕ್ರಮವನ್ನು ಅದ್ದೂರಿಯಾಗಿ ಆಚರಣೆಯನ್ನು ಮಾಡಲು ತೀರ್ಮಾನಿಸಿರುವ ನಟ ರಮೇಶ್ ಅರವಿಂದ್ ಅವರು ಗಣ್ಯರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸುವ ಕೆಲಸವನ್ನು ಶುರು ಮಾಡಿಕೊಂಡಿದ್ದಾರೆ. ಮೊದಲಿಗೆ ಕರ್ನಾಟಕದ ಮುಖ್ಯಮಂತ್ರಿಗಳಾದ ಬಿಎಸ್ ಯಡಿಯೂರಪ್ಪ ಅವರಿಗೆ ಆಹ್ವಾನ ನೀಡಿದ್ದಾರೆ.
ಪತ್ನಿ ಸಮೇತರಾಗಿ ಭೇಟಿ ನೀಡಿದ ರಮೇಶ್ ಅರವಿಂದ್ ಅವರು ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ತಮ್ಮ ಮಗಳ ಆರತಕ್ಷತೆ ಕಾರ್ಯಕ್ರಮಕ್ಕೆ ಆಹ್ವಾನಿಸಿ ದರು. ಈ ಫೋಟೋಗಳು ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ..