ಈ ಜೋಡಿ ದೂರವಾಗಲು ಇದೇ ಕಾರಣವಾಯ್ತಾ ?

Date:

ರ್ಯಾಪರ್ ಚಂದನ್ ಶೆಟ್ಟಿ ಹಾಗೂ ನಟಿ ನಿವೇದಿತಾ ಗೌಡ ಸಂಸಾರದಲ್ಲಿ ಬಿರುಕು ಮೂಡಿದೆ ಎನ್ನಲಾಗಿದೆ. ಹಾಗಾಗಿ ಅವರು ವಿಚ್ಛೇದನ ಪಡೆಯಲು ಮುಂದಾಗಿದ್ದಾರೆ ಎಂಬ ಸುದ್ದಿ ಕೇಳಿಬಂದಿದೆ. ಇಂದೇ ಅವರು ಡಿವೋರ್ಸ್ಪಡೆಯುತ್ತಿದ್ದಾರೆ ಎಂದು ಹೇಳಲಾಗುತ್ತಿದೆ. ಆದರೆ ಈ ಬಗ್ಗೆ ಅಧಿಕೃತ ಮಾಹಿತಿ ಹೊರಬೀಳಬೇಕಿದೆ.


2017ರಲ್ಲಿ ಪ್ರಸಾರವಾದ ‘ಬಿಗ್ ಬಾಸ್ ಕನ್ನಡ ಸೀಸನ್ 5’ ಶೋನಲ್ಲಿ ನಿವೇದಿತಾ ಗೌಡ ಮತ್ತು ಚಂದನ್ ಶೆಟ್ಟಿ ಅವರು ಪರಸ್ಪರ ಪರಿಚಯ ಆಗಿದ್ದರು. ಅವರಿಬ್ಬರ ಸ್ನೇಹ ನಂತರ ಪ್ರೀತಿಯಾಗಿ ಬದಲಾಯಿತು. ಮೈಸೂರಿನ ಯುವ ದಸರಾ ವೇದಿಕೆಯಲ್ಲಿ ನಿವೇದಿತಾಗೆ ಚಂದನ್ ಶೆಟ್ಟಿ ಅವರು ಪ್ರಪೋಸ್ ಮಾಡಿದ್ದರು. ಇದು ಸಾಕಷ್ಟು ಸದ್ದು ಗದ್ದಲವನ್ನೂ ಮಾಡಿತ್ತು. ಅದಾದ ಬಳಿಕ ಇಬ್ಬರು ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದರು.


ಬಿಗ್ ಬಾಸ್ ಮನೆಯಲ್ಲಿ ಈ ಜೋಡಿ ಪ್ರೀತಿಸಿ, ಅಲ್ಲಿಂದ ವಾಪಸ್ಸು ಬಂದ ನಂತರ ಅದ್ಧೂರಿಯಾಗಿ ಮದುವೆಯಾಗಿದ್ದರು. ಈ ಇಬ್ಬರೂ ಅನ್ಯೋನ್ಯ ಜೀವನ ನಡೆಸುತ್ತಿದ್ದರು ಎನ್ನುವುದಕ್ಕೆ ಅವರೇ ಮಾಡಿಕೊಂಡಿದ್ದ ಹಲವಾರು ರೀಲ್ಸ್ ಸಾಕ್ಷಿಯಾಗಿದ್ದವು. ಆದರೆ, ಏಕಾಏಕಿ ಇಬ್ಬರೂ ನಿನ್ನೆಯಷ್ಟೇ ಡಿವೋರ್ಸ್ಗಾಗಿ ಅರ್ಜಿ ಸಲ್ಲಿಸಿದ್ದಾರೆ.
ಡಿವೋರ್ಸ್ ಕಾರಣ ತಿಳಿದುಕೊಂಡಿಲ್ಲ. ಆದರೆ, ಇಂದು ಇಬ್ಬರೂ ಬೆಂಗಳೂರಿನ ಫ್ಯಾಮಿಲಿ ಕೋರ್ಟ್ಗೆ ಹಾಜರಾಗಿದ್ದರು. ಇಬ್ಬರೂ ಒಪ್ಪಿಗೆಯ ಮೇರೆಗೆ ಅರ್ಜಿ ಸಲ್ಲಿಸಿದ್ದಾರೆ ಎನ್ನಲಾಗುತ್ತಿದೆ.
ಮಗು ಬೇಡವೆಂದಿದ್ದೇ ವಿಚ್ಚೇದನಕ್ಕೆ ಕಾರಣವಾಯ್ತಾ? ಅನ್ನೋ ಪ್ರಶ್ನೆ ಮೂಡಿದೆ.

Share post:

Subscribe

spot_imgspot_img

Popular

More like this
Related

ಖಾಲಿ ಹೊಟ್ಟೆಯಲ್ಲಿ ಲವಂಗ ತಿಂದರೆ ಏನು ಆಗುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

ಖಾಲಿ ಹೊಟ್ಟೆಯಲ್ಲಿ ಲವಂಗ ತಿಂದರೆ ಏನು ಆಗುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ ಪ್ರಾಚೀನ...

ನಿಷ್ಠೆಯಿಂದ ಕೆಲಸ ಮಾಡಿದರೆ ಅಧಿಕಾರ ನಿಮ್ಮನ್ನು ಹುಡುಕಿಕೊಂಡು ಬರುತ್ತದೆ: ಲಕ್ಷ್ಮೀ ಹೆಬ್ಬಾಳಕರ್

ನಿಷ್ಠೆಯಿಂದ ಕೆಲಸ ಮಾಡಿದರೆ ಅಧಿಕಾರ ನಿಮ್ಮನ್ನು ಹುಡುಕಿಕೊಂಡು ಬರುತ್ತದೆ: ಲಕ್ಷ್ಮೀ ಹೆಬ್ಬಾಳಕರ್ ಬೆಂಗಳೂರು:...

ಅಂಬೇಡ್ಕರ್ ಫೋಟೋಗೆ ಅವಮಾನ ಆರೋಪ: ಬಾನು ಮುಷ್ತಾಕ್ ವಿರುದ್ಧ ಕ್ರಮಕ್ಕೆ ಛಲವಾದಿ ನಾರಾಯಣಸ್ವಾಮಿ ಆಗ್ರಹ

ಅಂಬೇಡ್ಕರ್ ಫೋಟೋಗೆ ಅವಮಾನ ಆರೋಪ: ಬಾನು ಮುಷ್ತಾಕ್ ವಿರುದ್ಧ ಕ್ರಮಕ್ಕೆ ಛಲವಾದಿ...

ದುಬೈ ವಿಮಾನ ನಿಲ್ದಾಣದ ಬಳಿ ಡ್ರೋನ್ ದಾಳಿ: ಇಂಧನ ಟ್ಯಾಂಕ್‌ಗೆ ಬೆಂಕಿ, ವಿಮಾನ ಹಾರಾಟ ತಾತ್ಕಾಲಿಕ ಸ್ಥಗಿತ

ದುಬೈ ವಿಮಾನ ನಿಲ್ದಾಣದ ಬಳಿ ಡ್ರೋನ್ ದಾಳಿ: ಇಂಧನ ಟ್ಯಾಂಕ್‌ಗೆ ಬೆಂಕಿ,...