ಸದಾ ಕೋಮು ವಿಷಯದಲ್ಲಿ ಸುದ್ದಿಯಲ್ಲಿರುವ ದಕ್ಷಿಣ ಕನ್ನಡ ಜಿಲ್ಲೆಯ ಸದ್ಯ ಮತ್ತೊಂದು ವಿಚಾರಕ್ಕೆ ಚರ್ಚೆಯಾಗುವ ಸಾಧ್ಯತೆಗಳಿವೆ. ಪುತ್ತೂರಿನಲ್ಲಿ ಎಸ್. ಡಿ. ಪಿ. ಐ ಸ್ವಾತಂತ್ರ್ಯ ವೀರ ಸಾವರ್ಕರ್ ರಥಯಾತ್ರೆಗೆ ಅಡ್ಡಿ ಮಾಡಿದ ವಿಚಾರ ದೊಡ್ಡ ಸದ್ದು ಮಾಡಿದ ಬಳಿಕ ಈಗ ಪುತ್ತೂರಿನಲ್ಲಿ ಮತ್ತೊಂದು ವಿಚಾರ ಮುನ್ನಲೆಗೆ ಬಂದಿದೆ.
ಇತಿಹಾಸ ಪ್ರಸಿದ್ಧ ಪುತ್ತೂರಿನ ಮಹತೋಭಾರ ಮಹಾಲಿಂಗೇಶ್ವರ ದೇವಸ್ಥಾನದ ಎದುರಿನ ದೇವರಮಾರು ಗದ್ದೆಯಲ್ಲಿ ಹಿಂದೂಗಳು ಹೊರತುಪಡಿಸಿ ಅನ್ಯಧರ್ಮದವರು ವಾಹನಗಳನ್ನು ನಿಲ್ಲಿಸಬಾರದು ಎಂದು ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಆದೇಶ ಮಾಡಿದೆ.
ದೇವಸ್ಥಾನದ ಎದುರಿನ ವಿಶಾಲವಾದ ಗದ್ದೆಯಲ್ಲಿ ಹಿಂದೂಗಳು ಹೊರತುಪಡಿಸಿ, ಬೇರೆ ಧರ್ಮದವರು ಯಾರೂ ವಾಹನವನ್ನು ನಿಲ್ಲಿಸಬಾರದು ಅಂತಾ ದೇವಸ್ಥಾನ ಪ್ರಕಟಣೆ ಹೊರಡಿಸಿದೆ. ಈ ಕುರಿತು ಚರ್ಚೆಗಳು ಆರಂಭವಾಗಿವೆ.
ಅಲ್ಲದೇ ಬೇರೆ ಧರ್ಮದವರು ವಾಹನ ನಿಲ್ಲಿಸಿದರೆ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ದೇವಸ್ಥಾನದ ಆಡಳಿತ ಮಂಡಳಿಯ ಆದೇಶದಲ್ಲಿ ತಿಳಿಸಿದೆ. ಈ ಬಗ್ಗೆ ದೇವಳದ ದೇವಮಾರು ಗದ್ದೆಯಲ್ಲಿರುವ ಪಂಚಾಕ್ಷರಿ ಮಂಟಪದಲ್ಲಿ ಫ್ಲೆಕ್ಸ್ ಹಾಕಲಾಗಿದ್ದು, ಅನ್ಯಧರ್ಮದವರು ದೇವಳದ ಗದ್ದೆಯಲ್ಲಿ ವಾಹನ ಪಾರ್ಕಿಂಗ್ ಮಾಡಿದರೆ ಕಾನೂನು ಕ್ರಮ ಕೈಗೊಳ್ಳುವ ಎಚ್ಚರಿಕೆ ನೀಡಲಾಗಿದೆ.