ಈ ಬಾರಿ ದಸರಾಕ್ಕೆ ಬಿಡುಗಡೆ ಮಾಡಿದ ಹಣವೆಷ್ಟು?

admin
0 Min Read

ಕೊರೊನಾ ಸೋಂಕಿನ ಕಾರಣದಿಂದ ಕಳೆದ ವರ್ಷದಂತೆ ಈ ಬಾರಿಯೂ ಸರಳ ದಸರಾ ಆಚರಣೆಗೆ ರಾಜ್ಯ ಸರ್ಕಾರ ನಿರ್ಧರಿಸಿದೆ.

ಶುಕ್ರವಾರ ಬೆಂಗಳೂರಿನಲ್ಲಿ ನಡೆದ ಉನ್ನತ ಮಟ್ಟದ ದಸರಾ ಸಮಿತಿ ಸಭೆಯಲ್ಲಿ ಸರಳ ಮೈಸೂರು ದಸರಾ ಆಚರಣೆಗೆ ನಿರ್ಧಾರ ಮಾಡಲಾಯಿತು. ಇದಕ್ಕಾಗಿ 6 ಕೋಟಿ ರೂ. ಬಿಡುಗಡೆ ಮಾಡಲಾಗಿದೆ.

“ಸೆ.20ರಂದು ಮತ್ತೊಂದು ಸುತ್ತಿನ ಸಭೆ ನಡೆಯಲಿದ್ದು, ಕೋವಿಡ್ ಪರಿಸ್ಥಿತಿ ನೋಡಿ ಕಾರ್ಯಕ್ರಮಗಳನ್ನು ನಿಗದಿ ಮಾಡಲಾಗುತ್ತದೆ,” ಎಂದು ಬೆಂಗಳೂರಿನಲ್ಲಿ ಸಚಿವ ಎಸ್.ಟಿ. ಸೋಮಶೇಖರ್ ಹೇಳಿದರು.

 

 

 

TAGGED:
Share This Article
Leave a Comment